ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿಗೊಳ್ಳಲಿರುವ ಬೆಳಪು ಗ್ರಾಮ

Team Udayavani, Nov 7, 2019, 5:48 AM IST

belapu-grama

ಕಾಪು: ಸುಡುಗಾಡು – ಕುಗ್ರಾಮ ಎಂದೇ ಪ್ರಸಿದ್ಧಿ ಹೊಂದಿದ್ದ, ಜಿಲ್ಲೆಯಲ್ಲಿಯೇ ಅತೀ ಕಡಿಮೆ ಆದಾಯ ಹೊಂದಿರುವ ಕಂದಾಯ ಗ್ರಾಮವಾಗಿರುವ ಬೆಳಪು ಇದೀಗ ಅಭಿವೃದ್ಧಿಯಲ್ಲಿ ಸರಕಾರ ಮತ್ತು ಸರಕಾರೇತರ ಯೋಜನೆಗಳ ಅನುಷ್ಠಾನದಲ್ಲಿ ಮಾದರಿಯಾಗಿ ಮೂಡಿ ಬರುತ್ತಿದೆ.

ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿಗೊಳ್ಳುತ್ತಿರುವ ಬೆಳಪು ಗ್ರಾಮದಲ್ಲಿ ಅತ್ಯಾಧುನಿಕ ಸಂಶೋಧನಾ ಕೇಂದ್ರ, ಪಿ.ಜಿ. ಸೆಂಟರ್‌, ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು ಮತ್ತು ಕೈಗಾರಿಕಾ ಪಾರ್ಕ್‌ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು ಕಾರ್ಯಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ.

ಗ್ರಾಮೀಣ ವಿದ್ಯಾರ್ಥಿಗಳಿಗೆ ಆಶಾಕಿರಣ
ಬೆಳಪು ಮತ್ತು ಸುತ್ತಲಿನ ಗ್ರಾಮಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶವನ್ನು ಅವಲಂಬಿಸುವ ಕಾಲವಿತ್ತು. ಆದರೆ ಇದೀಗ ಬೆಳಪು ಗ್ರಾಮದಲ್ಲಿ ಉನ್ನತ ಶಿಕ್ಷಣದೊಂದಿಗೆ ತಾಂತ್ರಿಕ ಶಿಕ್ಷಣ, ಸಂಶೋಧನಾ ಶಿಕ್ಷಣಕ್ಕೆ ಅವಕಾಶ ಒದಗಿಸಿಕೊಡುವ ಯೋಜನೆಗಳು ಅನುಷ್ಠಾನಗೊಳ್ಳುತ್ತಿರುವುದು ದೇಶ ದಲ್ಲಿಯೇ ಪ್ರಥಮದ್ದಾಗಿದೆ.

ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ
ಮಂಗಳೂರು ವಿಶ್ವ ವಿದ್ಯಾಲಯ ಸಂಯೋಜಿತ ಅತ್ಯಾಧುನಿಕ ಸಂಶೋಧನಾ ಕೇಂದ್ರದ ನಿರ್ಮಾಣ ಕಾಮಗಾರಿಯ ಪ್ರಥಮ ಹಂತದಲ್ಲಿ ಕಾಮಗಾರಿಯು ನಡೆಯುತ್ತಿದ್ದು, 49.25 ಕೋಟಿ ರೂ. ವೆಚ್ಚದ ಬಹುಮಹಡಿ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದೆ. ಕರ್ನಾಟಕ ಹೌಸಿಂಗ್‌ ಬೋರ್ಡ್‌ನ ಮೂಲಕ ಸಂಶೋಧನಾ ಕೇಂದ್ರದ ಕಾಮಗಾರಿ ನಡೆಯುತ್ತಿದ್ದು ಕಾಪು ದೇವಿಪ್ರಸಾದ್‌ ಕನ್‌ಸ್ಟÅಕ್ಷನ್ಸ್‌ನ ಕೆ. ವಾಸುದೇವ ಶೆಟ್ಟಿ ಅವರು ಕಾಮಗಾರಿಯ ಗುತ್ತಿಗೆ ವಹಿಸಿ ಕೊಂಡಿದ್ದಾರೆ.

ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು
ಬೆಳಪು ಗ್ರಾಮದ 5 ಎಕ್ರೆ ಭೂ ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ನಿರ್ಮಾಣದ ಕಾಮಗಾರಿ ಅಂತಿಮ ಹಂತದಲ್ಲಿದೆ. ಎರಡು ಮಹಡಿಯ ಕಟ್ಟಡದಲ್ಲಿ ಸುಮಾರು 7 ತಾಂತ್ರಿಕ ಶೆ„ಕ್ಷಣಿಕ ಬ್ರಾಂಚ್‌ಗಳು ಕಾರ್ಯಾರಂಭಗೊಳ್ಳಲಿವೆ. ಮಂಗಳೂರು ಮತ್ತು ಮಣಿಪಾಲವನ್ನು ಹೊರತುಪಡಿಸಿದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಇದೊಂದು ಆಶಾಕಿರಣವಾಗಿ ಮೂಡಿಬರಲಿದೆ. ರಾಜ್ಯದ ವಿವಿಧೆಡೆಯ ವಿದ್ಯಾರ್ಥಿಗಳು ಆನ್‌ಲೆ„ನ್‌ ಮೂಲಕ ಪ್ರವೇಶ ಪಡೆಯಲಿದ್ದು, ಮುಂದಿನ ಶೆ„ಕ್ಷಣಿಕ ವರ್ಷದಲ್ಲಿ ಯೋಜನೆ ಪ್ರಾರಂಭಗೊಳ್ಳುವ ಪೂರ್ವ ತಯಾರಿ ನಡೆಸುತ್ತಿದ್ದು ಬೆಂಗಳೂರು ಮೂಲದ ಗುತ್ತಿಗೆ ಸಂಸ್ಥೆಯಾದ ರೈಟ್ಸ್‌ ಕಂಪೆನಿ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದೆ.

ಕೈಗಾರಿಕಾ ಪಾರ್ಕ್‌
ಬೆಳಪು ಗ್ರಾಮದ ಸುಮಾರು 68 ಎಕ್ರೆ ಸರಕಾರಿ ಭೂಮಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು 10 ಕೋಟಿ ರೂ. ವೆಚ್ಚದೊಂದಿಗೆ ಮೂಲ ಭೂತ ಸೌಕರ್ಯಗಳ ಸಹಿತವಾಗಿ ಕೈಗಾರಿಕಾ ಪಾರ್ಕ್‌ನ ಕಾಮಗಾರಿಯನ್ನು ಪೂರ್ಣಗೊಳಿಸಿದೆ. ಜೊತೆಗೆ ಆನ್‌ಲೈನ್‌ ಟೆಂಡರ್‌ ಮೂಲಕ ವಿವಿಧ ಕೈಗಾರಿಕೋದ್ಯಮಿಗಳಿಗೆ ಭೂಮಿ ಮಂಜೂರಾತಿ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ. ಇದರಿಂದ ಇಲ್ಲಿನ ಯುವಕರಿಗೆ ಸ್ವಂತ ಉದ್ದಿಮೆಗಳ ಸ್ಥಾಪನೆ ಅನುಕೂಲವಾಗಲಿದ್ದು ಸುಮಾರು 60 ಸಣ್ಣ ಕೈಗಾರಿಕೆಗಳು ಇಲ್ಲಿ ಸ್ಥಾಪನೆಯಾಗುವ ನಿರೀಕ್ಷೆ ಇದೆ.

ಗಾಂಧಿ ಗ್ರಾಮ ಸ್ಥಾಪನೆ
ಬೆಳಪು ಗ್ರಾಮದ ಜನತೆಯ ಬಹುಕಾಲದ ಕನಸು ಈಗ ನನಸಾಗುತ್ತಿದೆ. ತ್ರವಳಿ ಬೃಹತ್‌ ಯೋಜನೆಗಳು ಏಕಕಾಲದಲ್ಲಿ, ಒಂದೇ ಗ್ರಾಮದಲ್ಲಿ ಕಾರ್ಯಗತಗೊಳ್ಳುತ್ತಿದ್ದು, ಆ ಮೂಲಕ ನಮ್ಮ ಹೋರಾಟಕ್ಕೆ ಫಲ ಸಿಕ್ಕಿದೆ. ಈ ಯೋಜನೆಗಳು ಮುಂದಿನ ಯುವ ಪೀಳಿಗೆಗೆ ಆದರ್ಶವಾಗುವ ಯೋಜನೆಗಳಾಗಿದ್ದು ಗ್ರಾಮೀಣಾಭಿವೃದ್ಧಿಯಲ್ಲಿ ದೀರ್ಘ‌ಕಾಲ ಸಲ್ಲಿಸಿರುವ ಸೇವೆಗೆ ಈಗ ಸಾರ್ಥಕವಾಗಿದೆ. ಗಾಂಧೀಜಿಯವರ ಗ್ರಾಮ ರಾಜ್ಯದ ಕನಸು ನನಸಾಗುತ್ತಿದ್ದು, ಗಾಂಧಿ – 150 ಕಾರ್ಯಕ್ರಮಕ್ಕೆ ಪೂರಕವಾಗಿ ಬೆಳಪುವಿನಲ್ಲಿ ಗಾಂಧಿ ಗ್ರಾಮ ಸ್ಥಾಪಿಸುವ ಕಲ್ಪನೆ ನಮ್ಮದಾಗಿದೆ.

-ಡಾ| ದೇವಿಪ್ರಸಾದ್‌ ಶೆಟ್ಟಿ, ಅಧ್ಯಕ್ಷರು, ಬೆಳಪು ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.