ಬೆಳ್ಮಣ್‌: ಪೊದೆಯಿಂದ ಆವೃತಗೊಂಡಿದೆ ಕೃಷಿ ಇಲಾಖೆ ಕಟ್ಟಡ

Team Udayavani, May 20, 2019, 6:28 AM IST

1905BELMNE2

ಬೆಳ್ಮಣ್‌: ಇಲ್ಲಿನ ಕೃಷಿಕರ ಅನುಕೂಲಕ್ಕೆಂದು ನಿರ್ಮಾಣವಾಗಿದ್ದ ಕೃಷಿ ಇಲಾಖೆಯ ಕಟ್ಟಡವೊಂದು ಪಾಳು ಬಿದ್ದಿದ್ದು ಗಿಡಗಂಟಿಗಳಿಂದ ಮುಚ್ಚಿ ಹೋಗಿದೆ.

ಬೆಳ್ಮಣ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪೆರಲ್‌ ಪಾದೆ ಎಂಬಲ್ಲಿ ನಿರ್ಮಾಣಗೊಂಡ ಈ ಕಟ್ಟಡ ಮಾಹಿತಿ ಕೇಂದ್ರವಾಗಿ ಕಾರ್ಯಾಚರಿಸುತ್ತಿತ್ತು. ಆದರೆ ಇದರ ಬಗ್ಗೆ ಇಲಾಖೆ, ಪಂಚಾಯತ್‌ ಹೊಂದಾಣಿಕೆ ಕೊರತೆಯಿಂದ ಕೇಂದ್ರ ನಿರ್ಲಕ್ಷಕ್ಕೆ ಒಳಗಾಯಿತು. ಪರಿಣಾಮ ಸುಮಾರು 10 ವರ್ಷದಿಂದ ಪಾಳುಬಿದ್ದಿದೆ.

ಈ ಪಾಳು ಬಿದ್ದ ಕಟ್ಟಡದಲ್ಲಿ ವಿದ್ಯುತ್‌ ಸಂಪರ್ಕವಿದ್ದರೂ ವಿದ್ಯುತ್‌ ಉಪಕರಣಗಳು ಕೆಟ್ಟು ಹೋಗಿವೆ. ಕಿಟಕಿ, ಬಾಗಿಲುಗಳು ಗೆದ್ದಲು ಹಿಡಿದು ಅವಶೇಷದಂತಿದೆ.

ರೈತ ಮಾಹಿತಿ ಕೇಂದ್ರ ಮಾಡಲು ಮನವಿ
ಬೆಳ್ಮಣ್‌, ನಂದಳಿಕೆ, ಸೂಡ ಸಹಿತ ಸುತ್ತಮುತ್ತ‌ಲಿನ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಕೃಷಿಕರಿದ್ದು, ಕೃಷಿ ಮಾಹಿತಿ ಕೇಂದ್ರವನ್ನಾಗಿ ಮಾಡಬಹುದಿತ್ತು ಎಂಬುದು ಇಲ್ಲಿನವರ ಅನಿಸಿಕೆ. ಆದರೆ ಇದರ ನಿರ್ವಹಣೆಗೆ ಆಡಳಿತ ಮುಂದಾಗದೆ ಇರುವುದು ಕೃಷಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸರಕಾರ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಕೋಟಿಗಟ್ಟಲೆ ಹಣ ಸುರಿಸುವ ಬದಲು ಇಂತಹ ಕಟ್ಟಡಗಳನ್ನು ಕಾಪಾಡಲು ಮನಸ್ಸು ಮಾಡಬೇಕಾಗಿದೆ ಎನ್ನುವುದೂ ನಾಗರಿಕರ ಆಶಯ.

ಸೂಕ್ತ ಕ್ರಮ
ಕೃಷಿ ಇಲಾಖೆಗೆ ಸಂಬಂದಿಸಿದ ಕಟ್ಟಡ ಇದಾಗಿದ್ದು ನಿರ್ವಹಣೆಯ ಅಗತ್ಯವಿದೆ. ಈಗಾಗಲೇ ನಳ್ಳಿ ನೀರಿನ ಸಂಪರ್ಕವನ್ನು ಕಲ್ಪಿಸಿದ್ದೇವೆ ಮುಂದಿನ ದಿನಗಳಲ್ಲಿ ನಿರ್ವಹಣೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
-ಪ್ರಕಾಶ್‌, ಬೆಳ್ಮಣ್‌ ಗ್ರಾ.ಪಂ ಪಿಡಿಒ

ಇಲಾಖೆಯ ಉದಾಸೀನತೆ
ಈ ಕಟ್ಟಡವೂ ಸುಂದರವಾಗಿದ್ದರೂ ಇಲಾಖೆ ಇಲ್ಲಿ ನಿರ್ವಹಣೆಯನ್ನು ಮಾಡುವಲ್ಲಿ ಉದಾಸೀನತೆ ತೋರಿಸುತ್ತಿದೆ. ಸರಿಯಾಗಿ ನಿರ್ವಹಣೆ ಮಾಡಿ ಕೃಷಿಕರ ಉಪಯೋಗಕ್ಕೆ ಬರುವಂತಾಗಲಿ.
-ಸಂದೀಪ್‌ಕುಮಾರ್‌, ಗ್ರಾಮಸ್ಥ

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.