ಬೆಳ್ಮಣ್‌ ಪಂಚಾಯತ್‌ ಕಾರ್ಯಾಚರಣೆ: ಅಕ್ರಮ ಗುಡಿಸಲುಗಳು ನೆಲಸಮ


Team Udayavani, Mar 1, 2019, 1:00 AM IST

belman.jpg

ಬೆಳ್ಮಣ್‌: ಕಾರ್ಕಳ ತಾಲೂಕಿನ ಪುರಸಭೆ ಸೇರಿದಂತೆ 34 ಗ್ರಾಪಂ ವ್ಯಾಪ್ತಿಯ ಸುಮಾರು 10 ಸಾವಿರಕ್ಕೂ ಮಿಕ್ಕಿದ ಮನೆಗಳಿಗೆ ತೆರವು ಭೀತಿ ಉಂಟಾಗಿದೆ. 94ಸಿ ಹಾಗೂ 94 ಸಿಸಿಯಡಿಯಲ್ಲಿ ಅರ್ಜಿ ಸಲ್ಲಿಸಿ ಮನೆ ಕಟ್ಟಿಕೊಂಡ ಫಲಾನುಭವಿಗಳು ಇದೀಗ ನೆಲೆ ಕಳೆದು ಕೊಳ್ಳುವ ಆತಂಕದಲ್ಲಿದ್ದ ಬಗ್ಗೆ ಉದಯವಾಣಿ ಫೆ. 26ರಂದು ವರದಿ ಮಾಡಿತ್ತು. ಬೆಳ್ಮಣ್‌ ಗ್ರಾಮ ಪಂಚಾಯತ್‌ನಲ್ಲಿ ಬುಧವಾರ ತೆರವು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಪಿಡಿಒ ನೇತೃತ್ವ
ಬೆಳ್ಮಣ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜಂತ್ರ ಎಂಬಲ್ಲಿ  ಸರಕಾರಿ ಜಮೀನಿನಲ್ಲಿ ಅನ ಧಿಕೃತ ಶೆಡ್‌ ರಚಿಸಿ ಮನೆ ಕಟ್ಟಿ ವಾಸಿಸುತ್ತಿರುವ ಸುಮಾರು 5 ಕುಟುಂಬಗಳನ್ನು ಪಂಚಾಯತ್‌ ಪಿಡಿಒ ಪ್ರಕಾಶ್‌ ಅವರ ನೇತೃತ್ವದ ತಂಡ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರ ಬಂದೋಬಸ್ತ್ ನಲ್ಲಿ ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ಕಾರ್ಕಳ ತಹಶೀಲ್ದಾರರ ಆದೇಶವೇ ಕಾರಣ ಎಂದು ತಿಳಿದು ಬಂದಿದ್ದು, ಯಾರೋ ಹೇಳಿದ ಮಾತಿಗೆ ಮರುಳಾಗಿ ಸರಕಾರಿ ಜಮೀನಿನಲ್ಲಿ ಶೆಡ್‌ ಹಾಕಿ ಕುಳಿತು ಸ್ವಂತ ಜಮೀನಿನ ಕನಸು ಕಟ್ಟಿ ಕೊಂಡಿದ್ದ 5 ಕುಟುಂಬಗಳು ಬೀದಿಪಾಲಾಗಿವೆ.
 

ಸಾರ್ವಜನಿಕರ ದೂರು
ಸರಕಾರಿ ಜಮೀನಿನಲ್ಲಿ ಮನೆ ಕಟ್ಟಿ ಕುಳಿತ್ತಿದ್ದ ಬಗ್ಗೆ  ಜಂತ್ರ ಪರಿಸರದ ಸಾರ್ವಜನಿಕರ ದೂರೇ ಇಂದಿನ ಈ ತೆರವು ಕಾರ್ಯಾಚರಣೆಗೆ ಕಾರಣ ಎಂದು ತಿಳಿದಿ ಬಂದಿದೆ. ಮಂಜುಳಾ, ವನಿತಾ, ಅಕ್ಷತಾ ಮೂಲ್ಯ, ಗೌರಿ ಹಾಗೂ ಸೇವಂತಿ ಎಂಬವರು ಅಕ್ರಮವಾಗಿ ನಿರ್ಮಿಸಲಾದ ಮನೆಗಳನ್ನು ಈ ಕಾರ್ಯಾಚರಣೆಯಲ್ಲಿ ತೆರವುಗೊಳಿಸಲಾಗಿದೆ.
ಬೆಳ್ಮಣ್‌ ಪಂಚಾಯತ್‌ ಆಡಳಿತ ಈ ನಿರ್ಣಯ ಕೈಗೊಂಡಿದ್ದು ಇದು ಇಡೀ ತಾಲೂಕಿನಲ್ಲಿ ಅನ ಧಿಕೃತ ಮನೆಗಳನ್ನು ಕೆಡಹುವ ಬಗ್ಗೆ ಸೂಚನೆ ಎನ್ನಲಾಗಿದ್ದು, ಅಲ್ಲದೇ ವೋಟಿಗಾಗಿ ಮಾತು ಕೇಳಿ ಅಕ್ರಮವಾಗಿ ಮನೆ ಕಟ್ಟಿ ಕುಳಿತ ಅಮಾಯಕರು ಇದೀಗ ದಿಕ್ಕು ಕಾಣದೆ ಕಂಗಾಲಾಗಿದ್ದಾರೆ.

ಅಕ್ರಮ ಮನೆ ಕೆಡಹುವ ಕೆಲಸ ಸ್ವಾಗತಾರ್ಹ, ಸರಕಾರಿ ಜಮೀನುಗಳಿದ್ದಲ್ಲಿ ಅರ್ಹ ನಿವೇಶನ ರಹಿತರ ಪಟ್ಟಿ ತಯಾರಿಸಿ ಜಮೀನು ಹಂಚುವ ಪ್ರಕ್ರಿಯೆ ನಡೆಯಲಿ. ಬದಲಾಗಿ ಜನಪ್ರತಿನಿಧಿಗಳ ಬೆಂಬಲದಿಂದ ಶೆಡ್‌ ನಿರ್ಮಿಸಿ ಕುಳಿತವರಿಗೆ ಹಕ್ಕು ಪತ್ರ ನೀಡುವುದು ಕಾನೂನು ಬಾಹಿರ ಎಂದು ಹೆಸರು ಹೇಳಲಿಚ್ಛಿಸದ ಪಂಚಾಯತ್‌ ಸದಸ್ಯರೋರ್ವರು ತಿಳಿಸಿದ್ದಾರೆ.

10 ಸಾವಿರ ಮನೆಗಳು
ಕಾರ್ಕಳ ತಾಲೂಕಿನಲ್ಲಿ ಹತ್ತು ಸಾವಿರಕ್ಕೂ ಮಿಕ್ಕಿದ ಮನೆಗಳು ಅನಧಿಕೃತವಾಗಿದೆಯಲ್ಲದೆ ಯಾವುದೇ ಅ ಧಿಕೃತ ದಾಖಲೆಯಿಲ್ಲದೆ ಆಯಾ ಪಂಚಾಯತ್‌ಗಳ ಪಿಡಿಒಗಳು ಡೋರ್‌ ನಂಬ್ರ ನೀಡಿ ಪೇಚಿಗೆ ಸಿಲುಕಿದ್ದಾರೆ. ಸ್ಥಳೀಯ ಜನಪ್ರತಿನಿ ಗಳ ಒತ್ತಡದಿಂದ ಕಾನೂನನ್ನು ಗಾಳಿಗೆ ತೂರಿ ಕೊಟ್ಟ ಪರವಾನಿಗೆಯಿಂದ ಈ ಸಮಸ್ಯೆ ಎದುರಾಗಿದ್ದು, ಸರಕಾರ ಈ ಬಗ್ಗೆ ಗಂಭೀರವಾಗಿ ಪರಿಶೀಲಿಸಬೇಕಾಗಿದೆ ಎಂದು ಸಂತೃಸ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ

ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

2

Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.