ವರ್ಷ ಕಳೆದರೂ ಪೂರ್ಣಗೊಳ್ಳದ ಬೈಲೂರು – ಪಳ್ಳಿ ರಸ್ತೆ
Team Udayavani, Mar 1, 2019, 1:00 AM IST
ಅಜೆಕಾರು: ಬೈಲೂರು ಮತ್ತು ಪಳ್ಳಿ ಗ್ರಾ.ಪಂ.ಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಕಾಮಗಾರಿ ಪ್ರಾರಂಭಗೊಂಡು ವರ್ಷ ಕಳೆದರೂ ಅರ್ಧದಷ್ಟೂ ಕಾಮಗಾರಿ ನಡೆಯದೆ ಪ್ರಯಾಣಿಕರು ಸಂಕಟ ಪಡುವಂತಾಗಿದೆ.
ಸುಮಾರು 3.5 ಕಿ.ಮೀ. ಉದ್ದವಿರುವ ಈ ರಸ್ತೆ ಕಾಂಕ್ರಿಟೀಕರಣಕ್ಕೆ ಕೇಂದ್ರ ರಸ್ತೆನಿಧಿ ಯೋಜನೆಯ 4 ಕೋಟಿ ಅನುದಾನ ಒದಗಿಸಲಾಗಿತ್ತು. ಕುಂಟುತ್ತ ಸಾಗಿದ ಕಾಮಗಾರಿ ಈಗ ಸಂಪೂರ್ಣ ಸ್ಥಗಿತವಾಗಿದೆ. ಕಾಮಗಾರಿಗಾಗಿ ಹಿಂದಿದ್ದ ಡಾಮಾರು ರಸ್ತೆ ಅಗೆಯಲಾಗಿದ್ದು, ಈಗ ವಾಹನ ಸಂಚಾರ ದುಸ್ತರವಾಗಿದೆ.
ಈ ರಸ್ತೆಯ ಮೂಲಕ ಪಳ್ಳಿ, ಬೆಳ್ಳೆ, ಉಡುಪಿ ಮಾರ್ಗವಾಗಿ ಬಹಳಷ್ಟು ಬಸ್ಸುಗಳು ಸೇರಿದಂತೆ ಸಾವಿರಾರು ವಾಹನಗಳು ಪ್ರತೀನಿತ್ಯ ಸಂಚರಿಸುತ್ತವೆ. ಇದೀಗ ರಸ್ತೆ ಕೆಟ್ಟಿರುವುದರಿಂದ ಹಲವು ಬಸ್‌ಗಳು ಸ್ಥಗಿತಗೊಂಡಿವೆ. ಆಟೋ ಚಾಲಕರೂ ಬಾಡಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.
ಶಾಪಗ್ರಸ್ತ ರಸ್ತೆ
ಪಳ್ಳಿ ಬೈಲೂರು ರಸ್ತೆಗೆ 10 ವರ್ಷಗಳ ಹಿಂದೆ ಸಂಪೂರ್ಣ ಹದಗೆಟ್ಟಿದ್ದಾಗ ಡಾಮರೀರಣಕ್ಕೆ ಅನುದಾನ ಸಿಕ್ಕಿತ್ತು. ಆ ವೇಳೆಯೂ ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿದ್ದರು. ಈಗ ಇದ್ದ ರಸ್ತೆ ತೆಗೆದು ಕಾಮಗಾರಿಯೂ ನಡೆಸದೆ ಸಮಸ್ಯೆ ಉಂಟುಮಾಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಗೊಳ್ಳದಿದ್ದರೆ ಗುತ್ತಿಗೆದಾರರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಗುತ್ತಿಗೆದಾರರ ನಿರ್ಲಕ್ಷ್ಯ
ಈ ರಸ್ತೆಗೆ ಶಾಸಕರು ಕೇಂದ್ರ ರಸ್ತೆನಿಧಿ ಯೋಜನೆಯಡಿ 4 ಕೋಟಿ ಅನುದಾನ ಒದಗಿಸಿ ಕಾಮಗಾರಿ ಪ್ರಾರಂಭಗೊಂಡಿತ್ತು. ಆದರೆ ಗುತ್ತಿಗೆದಾರರ ತೀವ್ರ ನಿರ್ಲಕ್ಷ್ಯದಿಂದಾಗಿ ರಸ್ತೆ ಕಾಮಗಾರಿ ಅಪೂರ್ಣಗೊಂಡಿದೆ. ಈ ಬಗ್ಗೆ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಹಲವು ಬಾರಿ ಅಧಿಕಾರಿಗಳ ಗಮನ ಸೆಳೆದಿದ್ದು ಕಾಮಗಾರಿ ಪೂರ್ಣಗೊಳ್ಳದೆ ಯಾವುದೇ ಕಾರಣಕ್ಕೆ ಹಣ ಪಾವತಿಸದಂತೆ ಒತ್ತಾಯಿಸಿದ್ದೇನೆ.
– ಸುಮಿತ್ ಶೆಟ್ಟಿ, ಜಿ.ಪಂ. ಸದಸ್ಯರು
ಅಧಿವೇಶನದಲ್ಲೂ ಪ್ರಸಾವ
ಬೈಲೂರು ಪಳ್ಳಿ ರಸ್ತೆ ಕಾಮಗಾರಿ ನಡೆಸುವ ಗುತ್ತಿಗೆದಾರರೇ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 4 ಕಾಮಗಾರಿಗಳನ್ನು ನಡೆಸುತ್ತಿದ್ದು ಎಲ್ಲವೂ ಅಪೂರ್ಣವಾಗಿದೆ. ಈ ಬಗ್ಗೆ ವಿಧಾನಸಭಾ ಅಧಿವೇಶನದಲ್ಲೂ ಪ್ರಸಾವ ಮಾಡಿದ್ದು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಮುಂದಿನ ದಿನಗಳಲ್ಲಿ ಕಾರ್ಕಳ ಕ್ಷೇತ್ರದ ಯಾವುದೇ ಕಾಮಗಾರಿ ನೀಡದಂತೆ ಸರಕಾರಕ್ಕೆ ಮನವಿ ಮಾಡಲಾಗಿದೆ.
– ಸುನಿಲ್ ಕುಮಾರ್, ಶಾಸಕರು, ಕಾರ್ಕಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.