ಕೆಸರುಗದ್ದೆಯಾದ ಬೇಳೂರು ಯಳಹಕ್ಲು -ಮಧುವನ ಸಂಪರ್ಕ ರಸ್ತೆ

Team Udayavani, Oct 12, 2018, 6:00 AM IST

0810tke3-1.jpg

ತೆಕ್ಕಟ್ಟೆ : ಬೇಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬೇಳೂರು ಯಳಹಕ್ಲು -ಮಧುವನ ಗ್ರಾಮಾಂತರ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕೆಸರುಗದ್ದೆಯಂತಾಗಿದೆ.  

ಬೇಸಗೆಯಲ್ಲಿ ಧೂಳು, ಮಳೆಗಾಲದಲ್ಲಿ ಕೆಸರು ಈ ಮಾರ್ಗದಲ್ಲಿ ಬೇಳೂರು ದೇಲಟ್ಟುವಿನಿಂದ ಯಳಹಕ್ಲು ವರೆಗೆ ಡಾಮರು ಆಗಿದೆ. ಬಳಿಕ ಸುಳಿಗುಂಡಿಯಿಂದ ಮಧುವನದವರೆಗೆ ಡಾಮಾರು ಆಗಿದೆ. ಅದರ ಮಧ್ಯದ ಸುಮಾರು 300 ಮೀ. ಮಾತ್ರ ಡಾಮರು ಹಾಕದೇ ಬಿಟ್ಟಿದ್ದು ಸಮಸ್ಯೆಗೆ ಕಾರಣವಾಗಿದೆ. ಬೇಸಿಗೆಯಲ್ಲಿ ಈ ರಸ್ತೆ ಇಡೀ ಧೂಳುಮಯವಾಗಿದ್ದರೆ, ಮಳೆಗಾಲದಲ್ಲಿ ಕೆಸರಿನಿಂದ ತುಂಬಿ ಸಂಚಾರಕ್ಕೆ ಕಷ್ಟಕರವಾಗಿದೆ. ಘನವಾಹನಗಳು ಸಂಚರಿಸುವುದರಿಂದ ಸಾಮಾನ್ಯ ವಾಹನದವರಿಗೆ, ಪಾದಚಾರಿಗಳಿಗೆ ನಡೆದಾಡಲೂ ಕಷ್ಟವಾಗಿದೆ ಎಂದು  ಗ್ರಾಮಸ್ಥರು ದೂರಿದ್ದಾರೆ.

5 ವರ್ಷಗಳಿಂದ ರಿಪೇರಿ ಭಾಗ್ಯವಿಲ್ಲ 
ಯಳಹಕ್ಲುವಿನಲ್ಲಿ ಐದು ವರ್ಷಗಳ ಹಿಂದೆ ಸೇತುವೆ ನಿರ್ಮಾಣವಾಗಿದ್ದು, ಈ ಸಂದರ್ಭ ಯಳಹಕ್ಲು – ಮಧುವನ ಮಧ್ಯೆ ಡಾಮಾರು ಹಾಕುವುದಾಗಿ ಭರವಸೆ ಸಿಕ್ಕಿತ್ತು. ಆದರೆ ಇಲ್ಲಿ ಡಾಮಾರು ಇದುವರೆಗೂ ಹಾಕಿಲ್ಲ. ಪಂಚಾಯತ್‌ನವರೂ ಈ ಹಿಂದೆಯೂ ಇದರ ನಿರ್ವಹಣೆಯನ್ನೂ ಮಾಡದ್ದರಿಂದ ಸ್ಥಳೀಯರಿಗೆ ಸಮಸ್ಯೆಯಾಗಿಯೇ ಮುಂದುವರಿದಿದೆ.
 
ರಸ್ತೆ ಅಭಿವೃದ್ಧಿಗೆ ಆಗ್ರಹ
ಬೇಳೂರು ದೇಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾರ್ಗವಾಗಿ ಸಾಗುವ ತಾಲೂಕಿನ ಬಹುಗ್ರಾಮ ಸಂಪರ್ಕ ರಸ್ತೆ ಇದಾಗಿದ್ದು. ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳು  ಮಧುವನ ಮಾರ್ಗವಾಗಿ ಕೋಟ, ಬ್ರಹ್ಮಾವರ ಸೇರಿದಂತೆ ವಿವಿಧ ವಿದ್ಯಾ ಸಂಸ್ಥೆಗಳಿಗೆ ಇದೇ ಮಾರ್ಗವನ್ನು ಬಳಸಬೇಕಾಗಿದೆ. ರಸ್ತೆ ಅಭಿವೃದ್ಧಿ ಸಂಬಂಧಪಟ್ಟ ಜನಪ್ರತಿನಿಧಿಗಳು , ಇಲಾಖಾ ಅಧಿಕಾರಿಗಳು ತತ್‌ಕ್ಷಣವೇ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎನ್ನುವುದು ಈ ಭಾಗದ ಜನರ ಆಗ್ರಹವಾಗಿದೆ.  

ಮನವಿ ಮಾಡಲಾಗಿದೆ
ಲೋಕೋಪಯೋಗಿ ಇಲಾಖೆಯಿಂದ ಅಭಿವೃದ್ಧಿ ಹೊಂದಿದ ರಸ್ತೆ ಇದಾಗಿದ್ದು .ಗ್ರಾ.ಪಂ. ಸತತ ಮೂರು ವರ್ಷಗಳಿಂದಲೂ ರಸ್ತೆ ಅಭಿವೃದ್ಧಿಗಾಗಿ ಲಿಖೀತ ರೂಪದಲ್ಲಿ ಮನವಿ ಮಾಡಿದ್ದೇವೆ ಆದರೆ ಯಾವುದೇ ರೀತಿಯ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಈ ರಸ್ತೆ ಸಂಪೂರ್ಣ ಕಾಂಕ್ರಿಟೀಕರಣವಾದರೇ ಮಾತ್ರ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಗ್ರಾ.ಪಂ. ಮೂಲಕ ತಾತ್ಕಾಲಿಕವಾಗಿ ರಸ್ತೆ ಸರಿಪಡಿಸುವ ಚಿಂತನೆ ಇದೆ. 
– ಬಿ.ಕರುಣಾಕರ ಶೆಟ್ಟಿ ಅಧ್ಯಕ್ಷರು, ಗ್ರಾ.ಪಂ.ಬೇಳೂರು

ತೀವ್ರ ತೊಂದರೆ
ಈ ರಸ್ತೆ ನಿರ್ಮಾಣದ ಸಂದರ್ಭದಲ್ಲಿ ನಮ್ಮ ಸ್ವಂತ ಜಾಗವನ್ನೇ ನೀಡಿದ್ದೇವೆ. ಹೋರಾಟದ ಫಲವಾಗಿ ಸೇತುವೆ ನಿರ್ಮಾಣವಾಯಿತ್ತಾದರೂ ಕೂಡಾ ಅದಕ್ಕೆ ಪೂರಕವಾದ ಡಾಮರು ರಸ್ತೆ ನಿರ್ಮಾಣವಾಗದೆ ಇರುವುದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಚರಂಡಿಗಳೂ ಇಲ್ಲದಿರುವುದರಿಂದ ಕೃತಕ ನೆರೆ ಸೃಷ್ಟಿಯಾಗಿ ಮನೆ ಜಲಾವೃತಗೊಳ್ಳುತ್ತಿದೆ.  
– ರಘುರಾಮ್‌ ಸೋಮಯಾಜಿ
ಸುಳಿಗುಂಡಿ 

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.