ಫ‌ಲಾನುಭವಿಗಳಿಗೆ ಕೈ ಸೇರದ ಮಾಸಾಶನ

ತಾಂತ್ರಿಕ ದೋಷ ಕಾರಣ; ಐದಾರು ತಿಂಗಳುಗಳಿಂದ ಬಾಕಿ

Team Udayavani, Feb 1, 2020, 6:44 AM IST

kat-20

ಉಡುಪಿ: ತಾಂತ್ರಿಕ ಅಡಚಣೆ ಮತ್ತು ರಾಜ್ಯ ಸರಕಾರದ ಆರ್ಥಿಕ ಸಂಕಷ್ಟದಿಂದಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ತಿಂಗಳುಗಳಿಂದ 2.76 ಲಕ್ಷ ಫ‌ಲಾನುಭವಿಗಳು ಮಾಸಾಶನಕ್ಕಾಗಿ ಅಂಚೆ ಕಚೇರಿ, ಬ್ಯಾಂಕ್‌ಗಳಿಗೆ ಅಲೆದಾಡು ವಂತಾಗಿದೆ.

ಉಭಯ ಜಿಲ್ಲೆಗಳಲ್ಲಿ 2,76,209 ಮಂದಿ ಫ‌ಲಾನುಭವಿಗಳು ಈ ಸಮಸ್ಯೆಯಿಂದ ಬಾಧಿತರಾಗಿದ್ದಾರೆ. ಸಾಮಾಜಿಕ ಭದ್ರತಾ ಯೋಜನೆ ಅನ್ವಯ ವೃದ್ಧಾಪ್ಯ, ವಿಧವಾ, ವಿಶೇಷಚೇತನ, ಸಂಧ್ಯಾ ಸುರಕ್ಷಾ, ತೃತೀಯ ಲಿಂಗಿಗಳು, ಆ್ಯಸಿಡ್‌ ದಾಳಿಗೆ ಒಳಗಾದವರಿಗೆ ಪಿಂಚಣಿ ನೀಡಲಾಗುತ್ತಿದೆ. ಹತ್ತು ಹಲವು ಯೋಜನೆಗಳಿಗೆ ಸಾವಿರಾರು ಕೋಟಿ ರೂ. ವ್ಯಯಿಸುವ ಸರಕಾರ ಬಡವರಿಗೆ ಪಿಂಚಣಿ ಹಣ ನೀಡಲು ಏಕೆ ವಿಳಂಬ ಮಾಡುತ್ತಿದೆ ಎಂಬ ಪ್ರಶ್ನೆ ಸಂತ್ರಸ್ತರದ್ದು.

ತಿಂಗಳ ಪಿಂಚಣಿ ಬಾಕಿ!
ಅಕ್ಕಿ, ಬೇಳೆ, ಔಷಧ ಇತ್ಯಾದಿಗೆ ಹಣ ಹೊಂದಿಸಲು ಸಾಧ್ಯವಾಗದೆ ಪಿಂಚಣಿ ಹಣ ನಂಬಿ ಕುಳಿತವರ ಪಾಡು ಕೇಳುವಂತಿಲ್ಲ. ವಿಶೇಷ ಚೇತನ, ವೃದ್ಧಾಪ್ಯ, ವಿಧವಾ ವೇತನ ಎರಡರಿಂದ ಮೂರು ತಿಂಗಳಷ್ಟು ಪಾವತಿಗೆ ಬಾಕಿ ಇವೆ.

ಹೊಸ ತಂತ್ರಾಂಶ ಕಿರಿಕ್‌!
ಖಜಾನೆ 1ಮತ್ತು 2 ಎಂಬ ಹೊಸ ತಂತ್ರಾಂಶ ಅಭಿವೃದ್ಧಿ ಪಡಿಸಿದ ಬಳಿಕ ಅದಕ್ಕೆ ಕೆಲವರ ಹೆಸರು ಸೇರ್ಪಡೆಯಾಗದೆ ಕೈಬಿಡಲಾಗಿದೆ ಎಂಬ ದೂರಿದೆ. ಇದರಿಂದಲೂ ಸಮಸ್ಯೆ ಹೆಚ್ಚಾಗಿದೆ.”ವಿಳಾಸದಲ್ಲಿ ಇಲ್ಲ’, “ಮೃತಪಟ್ಟಿ¨ªಾರೆ’ ಎಂಬುದರ ಜತೆಗೆ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆ ದುರುಪಯೋಗ ವರದಿ ಹಿನ್ನೆಲೆಯಲ್ಲಿ ಸಾವಿರಾರು ಜನರ ಪಿಂಚಣಿ ರದ್ದು ಪಡಿಸಲಾಗಿದೆ. ಹೀಗೆ ಕೈಬಿಟ್ಟವರಲ್ಲಿ ಅರ್ಹರೂ ಇದ್ದು, ಅವರು ದಾಖಲೆಗಳನ್ನು ಹಿಡಿದುಕೊಂಡು ಕಚೇರಿ ಅಲೆಯುವಂತಾಗಿದೆ. ತಮ್ಮದಲ್ಲದ ತಪ್ಪಿಗೆ ಹೊಸದಾಗಿ ಅರ್ಜಿ, ದಾಖಲೆ ಒದಗಿಸಲು ಸಾವಿ ರಾರು ರೂ. ವ್ಯಯಿಸುವಂತಾಗಿದೆ ಎಂಬುದು ಫ‌ಲಾನುಭವಿಗಳ ಬೇಸರದ ನುಡಿ.

ಬಾಕಿ ಹಣ ಬರುವುದೇ?
ಪ್ರಸ್ತುತ ಅವಳಿ ಜಿಲ್ಲೆಯಲ್ಲಿ ಸಾವಿರಾರು ಫ‌ಲಾನುಭವಿಗಳ ಪಿಂಚಣಿ 6 ತಿಂಗಳಿನಿಂದ ನಿಲುಗಡೆಯಾಗಿದೆ. ಈಗ ಅವರಿಗೆ ಮತ್ತೆ ಅರ್ಜಿ ಸಲ್ಲಿಲು ಸೂಚಿಸಲಾಗಿದೆ. ಹಾಗಾಗಿಈ ಹಿಂದೆ ಪಿಂಚಣಿ ರದ್ದಾಗಿ ಬಾಕಿಯಾದ ಪಿಂಚಣಿ ಹಣ ಬರುವ ಸಾಧ್ಯತೆ ಕಡಿಮೆ ಇದೆ ಎಂಬ ಅಭಿಪ್ರಾಯವೂ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ತಾಂತ್ರಿಕ ಕಾರಣಗಳಿಂದ ಪಿಂಚಣಿ ಸರಿಯಾದ ಸಮಯಕ್ಕೆ ಫ‌ಲಾನುಭವಿಗಳ ಕೈ ಸೇರುತ್ತಿಲ್ಲ. ಹಂತ ಹಂತವಾಗಿ ಸಮಸ್ಯೆ ಪರಿಹರಿಸ ಲಾಗುತ್ತಿದೆ.
-ಪ್ರದೀಪ ಕುರ್ಡೆಕರ್‌, ತಹಶೀಲ್ದಾರ್‌ ಉಡುಪಿ.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.