Bengaluru Kambala; ಕರಾವಳಿಯಿಂದ ಬೆಂಗಳೂರಿಗೆ ಕೋಣಗಳ ಪ್ರಯಾಣ ಹೇಗಿರಲಿದೆ? ವಿಶೇಷತೆಯೇನು?


Team Udayavani, Nov 20, 2023, 4:22 PM IST

Bengaluru Kambala; ಕರಾವಳಿಯಿಂದ ಬೆಂಗಳೂರಿಗೆ ಕೋಣಗಳ ಪ್ರಯಾಣ ಹೇಗಿರಲಿದೆ? ವಿಶೇಷತೆಯೇನು?

ಮಣಿಪಾಲ: ಇಷ್ಟು ವರ್ಷ ಕರಾವಳಿಯಲ್ಲಿ ಕೇಳಿ ಬರುತ್ತಿದ್ದ ಕಂಬಳದ ಕೊಂಬಿನ ಕಹಳೆ ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೂ ಕೇಳಿಬರಲಿದೆ. ಎಲ್ಲರಿಗೂ ಗೊತ್ತಿರುವಂತೆ ಮುಂದಿನ ಶನಿವಾರ ಮತ್ತು ಭಾನುವಾರ ಅಂದರೆ ನ.25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಸ್ಪರ್ಧೆ ನಡೆಯಲಿದೆ.

ಪುತ್ತೂರು ಶಾಸಕ ಅಶೋಕ್ ರೈಗಳ ಸಾರಥ್ಯದಲ್ಲಿ ಬೆಂಗಳೂರು ಕಂಬಳಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. 2023-24ರ ಕಂಬಳ ಸೀಸನ್ ಈಗಾಗಲೇ ಆರಂಭವಾಗಿದ್ದು, ಬಂಟ್ವಾಳ ತಾಲೂಕಿನ ಕಕ್ಯಪದವು ಎಂಬಲ್ಲಿ ಮೊದಲ ಕಂಬಳ ನಡೆದಿದೆ. 189 ಜೋಡಿ ಕೋಣಗಳು ಈ ಕೂಟದಲ್ಲಿ ಭಾಗವಹಿಸಿದ್ದವು. ಇದೀಗ ಈ ಕೋಣಗಳು ಬೆಂಗಳೂರು ಲಾರಿ ಏರಲು ಸಿದ್ದವಾಗಿವೆ.

ಉಪ್ಪಿನಂಗಡಿಯಿಂದ ಪ್ರಯಾಣ: ಗುರುವಾರ (ನ.23) ಉಭಯ ಜಿಲ್ಲೆಯ ಎಲ್ಲಾ ಓಟದ ಕೋಣಗಳೊಂದಿಗೆ ಯಜಮಾನರುಗಳು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಉಪ್ಪಿನಂಗಡಿಯ ಕಾಲೇಜು ಮೈದಾನದಲ್ಲಿ ಸೇರಲಿದ್ದಾರೆ. ಅಲ್ಲಿ ಗಣಹೋಮ ನಡೆದು, ಬಳಿಕ ಉಪಹಾರ ಸೇವಿಸಿ 10.30ಕ್ಕೆ ಸರಿಯಾಗಿ ಬೆಂಗಳೂರು ಕಡೆ ಪ್ರಯಾಣ ಆರಂಭಿಸಲಿದ್ದಾರೆ. ಇದಕ್ಕಾಗಿ ಶಾಸಕರ ನೇತೃತ್ವದಲ್ಲಿ ತಯಾರಿ ನಡೆಯುತ್ತಿದ್ದು, ಸ್ಥಳೀಯ ಸಾಮಾಜಿಕ ಮುಂದಾಳುಗಳು ಸಾಥ್ ನೀಡಲಿದ್ದಾರೆ.

ಓಟದ ಕೋಣಗಳಿಗೆ ಅನುಕೂಲವಾಗುವಂತೆ ಕರಾವಳಿಯಿಂದಲೇ ನೀರು, ಬೈಹುಲ್ಲು, ಹುರುಳಿಯನ್ನು ಬೆಂಗಳೂರಿಗೆ ಕೊಂಡೊಯ್ಯಲಾಗುತ್ತದೆ. ನೂರಕ್ಕೂ ಹೆಚ್ಚು ಲಾರಿಗಳು ಸಾಲಾಗಿ ಕರಾವಳಿಯ ಸಾಂಸ್ಕೃತಿಕ ಮೆರುಗನ್ನು ಹೊತ್ತು ರಾಜಧಾನಿಯತ್ತ ಸಾಗಲಿವೆ.

ಗುರುವಾರ ಮಧ್ಯಾಹ್ನ 2 ಗಂಟೆಯಿಂದ ಐದು ಗಂಟೆಯ ತನಕ ವಿರಾಮ ನೀಡಲಾಗಿದೆ. ಅಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ನೇತೃತ್ವದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ಊಟೋಪಚಾರವೂ ಇಲ್ಲೇ ನಡೆಯಲಿದೆ. ಈ ವೇಳೆ ಕೋಣಗಳನ್ನು ಲಾರಿಯಿಂದ ಇಳಿಸಿ ವಿಶ್ರಾಂತಿ ನೀಡಲಾಗುವುದು.

ಸಂಜೆ ಐದು ಗಂಟೆಯಿಂದ ಹಾಸನದಿಂದ ಹೊರಟ ಕೋಣಗಳಿಗೆ ಚನ್ನರಾಯಪಟ್ಟಣದಲ್ಲಿ ಸ್ವಾಗತ ನೀಡಲಾಗುವುದು. ಬಳಿಕ ನೆಲಮಂಗಲ ಬೆಂಗಳೂರು ಪ್ರವೇಶಿಸಿ ಸುಮಾರು 11 ಗಂಟೆಗೆ ಅರಮನೆ ಮೈದಾನಕ್ಕೆ ಆಗಮಿಸಲಿದೆ.

ಈಗಾಗಲೇ 179 ಜೋಡಿ ಕೋಣಗಳ ಯಜಮಾನರು ಬೆಂಗಳೂರು ಕಂಬಳಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಕಕ್ಯಪದವು ಕಂಬಳದಲ್ಲಿ ಅವುಗಳ ಓಟವನ್ನು ಪರಿಶೀಲಿಸಿ ಪರಿಷ್ಕರಣೆ ಮಾಡಲಾಗುತ್ತಿದೆ.

ಕಂಬಳದ ಜತೆ ಸಾಂಸ್ಕೃತಿಕ ಕಾರ್ಯಕ್ರಮ

ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದಲ್ಲಿ ಕೋಣಗಳ ಸ್ಪರ್ಧೆ ಒಂದು ಕಡೆಯಾದರೆ ಮತ್ತೊಂದೆಡೆ ಕರಾವಳಿಯ ಸಾಂಸ್ಕೃತಿಯ ಸೊಗಡನ್ನು ಪ್ರತಿನಿಧಿಸುವ ಕಾರ್ಯಕ್ರಮಗಳು ನಡೆಯಲಿದೆ. ತೆಂಕು ಮತ್ತು ಬಡಗು ತಿಟ್ಟಿನ ಯಕ್ಷಗಾನ ಸೇರಿದಂತೆ ಸಂಗೀತ ನಿರ್ದೇಶಕ ಗುರು ಕಿರಣ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿದೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

25-kota

Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ

17-katapady

Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!

14-malpe

Malpe: ನಿರಂತರ ರಜೆ: ಬೀಚ್‌ಗಳಲ್ಲಿ ಪ್ರವಾಸಿಗರ ದಟ್ಟಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.