ಭಂಡಾರ್ಕಾರ್ಸ್: ವ್ಯವಹಾರ ಅಧ್ಯಯನ ಉತ್ಸವ ಸ್ಪರ್ಧಾ
Team Udayavani, Feb 23, 2017, 12:16 PM IST
ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ವಾಣಿಜ್ಯ ಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ವಿಭಾಗ ಗಳು ಜಂಟಿಯಾಗಿ ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ವ್ಯವಹಾರ ಅಧ್ಯಯನ ಉತ್ಸವ ಸ್ಪರ್ಧಾ-17 ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಸೂÅರಿನ ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಧಾಕೃಷ್ಣ ಶೆಟ್ಟಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಬೇಕಾದರೆ ಸಾಕಷ್ಟು ಸ್ಪರ್ಧೆಯನ್ನು ಎದುರಿಸಬೇಕಾಗಿದೆ. ಈ ಸ್ಪರ್ಧೆಯನ್ನು ಎದುರಿಸುವ ನಿಟ್ಟಿನಲ್ಲಿ ಸಾಕಷ್ಟು ವಿದ್ಯಾರ್ಹತೆ, ಕೌಶಲದ ಜತೆಗೆ ಪ್ರಸ್ತುತ ಜಗತ್ತಿನ ಕುರಿತು ಜ್ಞಾನ ಸಂಪಾದನೆಯು ಅತ್ಯಂತ ಅತ್ಯಗತ್ಯವಾಗಿರುತ್ತದೆ. ಈ ದಿಶೆಯಲ್ಲಿ ಕಠಿನ ಪರಿಶ್ರಮ, ಚುರುಕು ತನ, ಆಸಕ್ತಿ ಮತ್ತು ಆತ್ಮವಿಶ್ವಾಸಗಳನ್ನು ನಮ್ಮದಾಗಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಹೇಳಿದರು.
ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾ ಧಿಕಾರಿ ಡಾ| ಎಚ್. ಶಾಂತಾರಾಂ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶು ಪಾಲ ಡಾ| ಎನ್.ಪಿ. ನಾರಾಯಣ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ಕುಂದಾಪುರ ಕೆರಿಯರ್ ಕೋಚಿಂಗ್ ಕೇಂದ್ರದ ರಾಜೇಶ್ ಶೆಟ್ಟಿ ಅವರು ಸಿಎ-ಸಿಪಿಟಿ ಮತ್ತು ಐಪಿಸಿಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸ್ಪರ್ಧಾ -17 ಇದರ ಮುಖ್ಯ ಸಂಯೋಜಕ ಪ್ರೊ| ಜಿ.ಎಸ್. ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ| ಅರುಣಾಚಲ ಮಯ್ಯ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶು ಪಾಲ ಜಿ.ಎಂ. ಗೊಂಡ ವåತ್ತು ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥೆ ಅರ್ಚನಾ ಅರವಿಂದ ಮತ್ತು ಸ್ಪರ್ಧಾ-17ರ ವಿದ್ಯಾರ್ಥಿ ಸಂಯೋಜಕ ವಿN°àಶ್ ಮತ್ತು ರಕ್ಷಿತ್ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಆಶ್ಲಿನ್ ಕಾರ್ಯಕ್ರಮ ನಿರ್ವಹಿಸಿದರು. ಮಂಗಳೂರು ವಿಶ್ವ ವಿದ್ಯಾಲಯ ವ್ಯಾಪ್ತಿಯ ಸುಮಾರು 18 ಕಾಲೇಜುಗಳು ಸ್ಪರ್ಧಾ- 17ರಲ್ಲಿ ಭಾಗವಹಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.