ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಭೋಜೇಗೌಡ ಜೆಡಿಎಸ್ ಅಭ್ಯರ್ಥಿ ?
Team Udayavani, Mar 14, 2019, 1:00 AM IST
ಉಡುಪಿ: ಕಾಂಗ್ರೆಸ್-ಜೆಡಿಎಸ್ ಚುನಾವಣಾ ಹಗ್ಗಜಗ್ಗಾಟದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ಗೆ ತುಲನೆ ಮಾಡಿದರೆ ಕಾಂಗ್ರೆಸ್ ಬಲಿಷ್ಠವಾಗಿರುವುದರಿಂದ ಕಾಂಗ್ರೆಸ್ನಿಂದ ಆಕ್ಷೇಪ ಕೇಳಿಬಂದಿದೆ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಪ್ರತ್ಯೇಕವಾಗಿ ಬುಧವಾರ ಸಭೆ ಕರೆದು ಕ್ಷೇತ್ರವನ್ನು ಬಿಟ್ಟುಕೊಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಿಲ್ಲೆಯಲ್ಲಿ ಒಂದೇ ಒಂದು ಪ್ರಮುಖ ಜನಪ್ರತಿನಿಧಿಗಳಿಲ್ಲದ ಜೆಡಿಎಸ್ಗೆ ಬಿಟ್ಟುಕೊಡುವುದರಲ್ಲಿ ಏನು ಅರ್ಥವಿದೆ ಎಂದು ಉಡುಪಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಚಿಕ್ಕಮಗಳೂರಿನಲ್ಲಿಯೂ ಇದೇ ಅಭಿಪ್ರಾಯ ವ್ಯಕ್ತವಾಗಿದೆ.
ಹೀಗೆ ಹೊಂದಾಣಿಕೆಯಾದಲ್ಲಿ ಕೆ. ಜಯಪ್ರಕಾಶ್ ಹೆಗ್ಡೆಯವರು ಬಿಜೆಪಿ ತೊರೆದು ಜೆಡಿಎಸ್ನಿಂದ ಸ್ಪರ್ಧಿಸಲಿದ್ದಾರೆಂಬ ಬಹುದಿನಗಳ ಊಹಾಪೋಹವನ್ನು ಹೆಗ್ಡೆಯವರು ಮತ್ತೂಮ್ಮೆ ಅಲ್ಲಗಳೆದಿದ್ದಾರೆ. ಹಾಗಿದ್ದರೆ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಕುತೂಹಲ ಮೂಡಿದೆ.
2014ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ವಿ.ಧನಂಜಯ ಕುಮಾರ್ ಇತ್ತೀಚಿಗೆ ನಿಧನರಾಗಿದ್ದಾರೆ. 2012ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಸ್.ಎಲ್. ಭೋಜೇಗೌಡರು ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. 2009ರ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಿರಲಿಲ್ಲ. ಈ ಬಾರಿ ಭೋಜೇಗೌಡರೇ ಅಭ್ಯರ್ಥಿಯಾಗಬಹುದು ಎಂಬ ಮಾತು ಕೇಳಿಬರುತ್ತಿದೆ. 2014, 2012ರ ಚುನಾವಣೆಯಲ್ಲಿ ಜೆಡಿಎಸ್ ಕಡಿಮೆ ಮತಗಳನ್ನು ಪಡೆದು ಮೂರನೆಯ ಸ್ಥಾನದಲ್ಲಿತ್ತು.
1952ರಿಂದಲೂ ಕಾಂಗ್ರೆಸ್ ಪಕ್ಷ ಈ ಲೋಕಸಭಾ ಸ್ಥಾನದಲ್ಲಿ ಸ್ಪರ್ಧಿಸುತ್ತಿತ್ತು. ಇದೇ ಮೊದಲ ಬಾರಿ ಕಾಂಗ್ರೆಸ್ ಸ್ಪರ್ಧಿಸದ ಲೋಕಸಭಾ ಚುನಾವಣೆ ಇದಿರಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.