ಮೋದಿ ಸರಕಾರಕ್ಕೆ ಎಂಟು ವರ್ಷ : ಕಾಪು ಕ್ಷೇತ್ರ ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ರ‍್ಯಾಲಿ
Team Udayavani, Jun 19, 2022, 10:27 PM IST
ಕಾಪು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಎಂಟು ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಕಾಸ್ ತೀರ್ಥ ಬೈಕ್ ರ‍್ಯಾಲಿಗೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಕೇಂದ್ರ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮತ್ತು ಜನರಲ್ಲಿ ಸರಕಾರದ ಬಗ್ಗೆ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ರ್ಯಾಲಿ ಮಹತ್ವ ಪಡೆದಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಪಿ. ಶೆಟ್ಟಿ ಗುರ್ಮೆ, ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಕೆ. ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ, ಯುವ ಮೋರ್ಚಾ ಕಾಪು ಮಂಡಲ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಮುಖಂಡರಾದ ಪ್ರವೀಣ್ ಕುಮಾರ್, ಸುರೇಂದ್ರ ಪಣಿಯೂರು, ಪ್ರವೀಣ್ ಕುಮಾರ್ ಗುರ್ಮೆ, ಸಂತೋಷ್ ಕುಮಾರ್ ಮೂಡುಬೆಳ್ಖೆ, ರವಿ ಸಾಲ್ಯಾನ್, ಯುವ ಮೋರ್ಚಾ ಮುಖಂಡರಾದ ಸತೀಶ್ ಪೂಜಾರಿ, ವಿಜೇತ್ ಕುಮಾರ್, ಸಚಿನ್ ಸುವರ್ಣ, ಸೋನು ಪಾಂಗಾಳ, ಪ್ರವೀಣ್ ಅಡ್ವೆ, ಪ್ರಕಾಶ್ ಆಚಾರ್ಯ, ರಕ್ಷಿತ್, ಪ್ರವೀಣ್ ಕುಮಾರ್, ಉದಯ್, ಅಭಿರಾಜ್ ಸುವರ್ಣ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಯು. ಶೆಟ್ಟಿ, ಪುರಸಭೆ ವ್ಯಾಪ್ತಿ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಹೊರಟು ಮೂಳುರು, ಉಚ್ಚಿಲ ತೆರಳಿ ಅಲ್ಲಿಂದ ಕಾಪುವಿಗೆ ಬಂದು ಸಮಾಪನಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ
Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.