ಮಣಿಪಾಲ – ಮಾಹೆಯಲ್ಲಿ ಇಂದು ಬಯೋ ಇನ್‌ಕ್ಯುಬೇಟರ್ ಉದ್ಘಾಟನೆ
Team Udayavani, Oct 25, 2019, 12:14 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಲ್ಲಿ (ಮಾಹೆ) ರಾಜ್ಯ ಸರಕಾರದ ಬಯೋಟೆಕ್ನಾಲಜಿ ಇಲಾಖೆಯ ವತಿಯಿಂದ ಕೆ-ಟೆಕ್ ಸಹಯೋಗದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ನೂತನ ಆವಿಷ್ಕಾರ, ಉದ್ಯಮ, ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುವ ಬಯೋ ಇನ್‌ಕ್ಯುಬೇಟರ್ ಸ್ಥಾಪಿಸಲಾಗಿದೆ.
ಅ. 25ರಂದು ಉಪಮುಖ್ಯಮಂತ್ರಿ, ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಉದ್ಘಾಟಿಸಲಿದ್ದಾರೆ. ಈ ಬಯೋ ಇನ್‌ಕ್ಯುಬೇಟರ್ ಮೂಲಕ ಜೈವಿಕ ತಂತ್ರಜ್ಞಾನ ಕ್ಷೇತ್ರದ ಬಯೋಫಾರ್ಮ, ಬಯೋಮೆಡಿಕಲ್ ಉಪಕರಣಗಳು, ದಂತ ವೈದ್ಯಕೀಯ ಆವಿಷ್ಕಾರ, ಆರೋಗ್ಯ ಮತ್ತು ಚಿಕಿತ್ಸೆಗೆ ಸಂಬಂಧಿಸಿದ ಸ್ಟಾರ್ಟ್‌ಅಪ್ ಯೋಜನೆಗಳನ್ನು ಕೈಗೆತ್ತಿಕೊಳ್ಳಬಹುದಾಗಿದೆ. ಅದಕ್ಕೆ ಬೇಕಾದ ಪ್ರಯೋಗಾಲಯ, ಕಟ್ಟಡ- ಕಚೇರಿ ಇತ್ಯಾದಿ ಮೂಲಸೌಲಭ್ಯಗಳು ಇದರಲ್ಲೇ ಲಭ್ಯವಿರಲಿವೆ.
ಯಾವುದೇ ಕನಿಷ್ಠ ವಿದ್ಯಾರ್ಹತೆಯ ಮಿತಿ ಇಲ್ಲದೆ ಹೊಸತನ್ನು ಮಾಡುವ ಕಲ್ಪನೆ ಇರುವವರು ಕೂಡ ನೋಂದಾಯಿಸಿಕೊಂಡು ಈ ಬಯೋ ಇನ್‌ಕ್ಯುಬೇಟರ್‌ನಲ್ಲಿ ತಾಂತ್ರಿಕ, ಹಣಕಾಸು, ಮಾರುಕಟ್ಟೆಗಳ ಸಹಾಯ ಪಡೆಯಬಹುದು.
ಈಗಾಗಲೇ ಎಂಐಟಿಯಲ್ಲಿ ಮಣಿಪಾಲ ಯುನಿವರ್ಸಲ್ ಟೆಕ್ನಾಲಜಿ ಬ್ಯುಸಿನೆಸ್ ಇನ್‌ಕ್ಯುಬೇಟರ್ ಸ್ಥಾಪಿಸಲಾಗಿದೆ. ಇದು ತಂತ್ರಜ್ಞಾನ ಕ್ಷೇತ್ರದಲ್ಲಿ ಕೇಂದ್ರ ಸರಕಾರದ
ಸ್ಟಾರ್ಟ್‌ಅಪ್ ಯೋಜನೆಗಳಿಗೆ ಸಹಾಯ ಮಾಡುತ್ತಿದೆ. ಇಲ್ಲಿ ಈಗಾಗಲೇ 30 ಮಂದಿ ತೊಡಗಿಸಿಕೊಂಡಿದ್ದು, ಓರ್ವರು ಯಶಸ್ವಿಯಾಗಿ ಬೆಂಗಳೂರಿನಲ್ಲಿ ಉದ್ಯಮ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.