CM Siddaramaiah ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Team Udayavani, Aug 20, 2024, 12:03 AM IST
ಉಡುಪಿ: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿ ಕ್ಯೂಷನ್‌ಗೆ ಆದೇಶ ನೀಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತತ್‌ಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಕಚೇರಿ ಎದುರಿನ ರಸ್ತೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಬಳಿಕ ಕೆಲಕಾಲ ಉಡುಪಿ-ಮಣಿಪಾಲ ರಸ್ತೆ ತಡೆ ನಡೆಸಿ, ಕಾಂಗ್ರೆಸ್ ಸರಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು.
ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಸಿದ್ದರಾಮಯ್ಯ ಅವರ ಮೇಲೆ ಸಾಲು ಸಾಲು ಆರೋಪಗಳು ಬಂದರೂ ಯಾವುದನ್ನು ಒಪ್ಪಿ ಕೊಳ್ಳಲು ತಯಾರಿಲ್ಲ. ನ್ಯಾಯ, ನೀತಿಯ ಬಗ್ಗೆ ಮಾತನಾಡುವವರು ತಮ್ಮ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಿಲ್ಲ ಏಕೆ? ಈಗ ಎಲ್ಲ ಕಡೆ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ರಾಜ್ಯದ ಉದ್ಧಾರ ಮಾಡುವ ಬದಲಿಗೆ ತಮ್ಮ ಕುಟುಂಬವನ್ನು ಉದ್ಧಾರ ಮಾಡಿಕೊಂಡಿದ್ದಾರೆ. ದುರಾಡಳಿತ ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ಅವರು ತತ್‌ಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಅವರ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದ ವರಿಷ್ಠರು ಎಲ್ಲ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ ಎಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಿದ್ದರಾಮಯ್ಯ ಅವರು ತಮ್ಮ ಮೇಲೆ ಆರೋಪ ಬಂದ ಕೂಡಲೇ ರಾಜೀನಾಮೆ ನೀಡಬೇಕಿತ್ತು. ಆದರೆ ನೀಡಿಲ್ಲ. ಬಿಜೆಪಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದರು.
ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಸಿದ್ದರಾಮಯ್ಯ ಅವರು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನು ಅಕ್ರಮವಾಗಿ ಕಬಳಿಸಿದ್ದಾರೆ. ಮೊಂಡುವಾದ ಬಿಟ್ಟು ತತ್‌ಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಪ್ರಮುಖರಾದ ರೇಶ್ಮಾ ಉದಯ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಶ್ಯಾಮಲಾ ಕುಂದರ್, ವಿಜಯ ಕುಮಾರ್ ಕೊಡವೂರು ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.