ಮೋದಿ ಮಂತ್ರದಿಂದ ಬಿಜೆಪಿಗೆ ಗೆಲುವು: ಮಾಳವಿಕಾ
Team Udayavani, Apr 13, 2019, 6:01 AM IST
ಬೆಳ್ಮಣ್: ದೇಶಾದ್ಯಂತ ಮೋದಿ ಮಂತ್ರ ಬಲವಾಗಿದ್ದು, ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ. ಕಳೆದ 5 ವರ್ಷಗಳಲ್ಲಿ ನೂರಾರು ಯೋಜನೆಗಳು ಬಡವರ ಮನೆ ಬಾಗಿಲಿಗೆ ಬಂದಿರುವುದು ಮುಂದಿನ ಗೆಲುವಿಗೆ ಪೂರಕವಾಗಲಿದೆ ಎಂದು ಬಿಜೆಪಿ ನಾಯಕಿ ಮಾಳವಿಕ ಅವಿನಾಶ್ ಹೇಳಿದರು.
ಇಲ್ಲಿನ ಪೇಟೆಯಲ್ಲಿ ಬೆಳ್ಮಣ್ ಬಿಜೆಪಿ ಘಟಕದ ವತಿಯಿಂದ ನಡೆದ ಚುನಾವಣಾ ಪ್ರಚಾರದ ಬಹಿರಂಗ ಸಭೆೆಯಲ್ಲಿ ಮಾತನಾಡಿದರು.
ಪ್ರಧಾನಿ ಮೋದಿ ನೇತೃತ್ವದ ಸರಕಾರದ ಸಾಧನೆಗಳು ಪಕ್ಷದ ಗೆಲುವಿಗೆ ಕಾರಣಾವಾಗಲಿದೆ. ದೇಶದ ರಕ್ಷಣೆಗೆ ಅವರ ಕೈಗೊಂಡ ದಿಟ್ಟ ನಿರ್ಧಾರಗಳು, ಭ್ರಷ್ಟಾಚಾರ ನಿಯಂತ್ರಣ,ಯಶ್ವಸಿಯಾದ ಸ್ವತ್ಛ ಭಾರತದ ಕಲ್ಪನೆ ಮುಂತಾದ ಜನಪರ ಯೋಜನೆಗಳು ಬಿಜೆಪಿಯ ಕೈಹಿಡಿಯಲಿದೆ. ಇನ್ನೊಮ್ಮೆ ಮೋದಿ ಪ್ರಧಾನಿಯಾಗಬೇಕು ಎಂಬ ಆಸೆ ಈಡೇರಬೇಕಾದರೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರನ್ನು ಗೆಲ್ಲಿಸಬೇಕು ಎಂದರು. ಅಭ್ಯರ್ಥಿ ಶೋಭಾ ಕರಂದ್ಲಾಜೆ ಮಾತನಾಡಿ, ವಿರೋಧ ಪಕ್ಷದವರಿಗೆ ಬಲಿಷ್ಟ ದೇಶ ಬೇಕಾಗಿಲ್ಲ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಮೋದಿಯ ವಿರುದ್ದ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು.
ಶಾಸಕ ಸುನೀಲ್ ಕುಮಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಮಣಿರಾಜ್ ಶೆಟ್ಟಿ, ನವೀನ್ ನಾಯಕ್, ಜಿ.ಪಂ. ಸದಸ್ಯೆ ರೇಶ್ಮಾ ಉದಯ ಶೆಟ್ಟಿ, ತಾ.ಪಂ ಉಪಾಧ್ಯಕ್ಷ ಗೋಪಾಲ ಮೂಲ್ಯ, ಸದಾಶಿವ ಶೆಟ್ಟಿ ಬೋಳ, ತಾ.ಪಂ. ಸದಸ್ಯೆ ಪುಷ್ಪಾ ಸತೀಶ್ ಪೂಜಾರಿ, ಸದಾನಂದ ಶೆಟ್ಟಿ, ಮಾಲಿನಿ ಶೆಟ್ಟಿ, ಜಯರಾಮ ಸಾಲ್ಯಾನ್,ಸೂರ್ಯಕಾಂತ ಶೆಟ್ಟಿ, ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.