ರಕ್ತದಾನ ಶಿಬಿರ ಉದ್ಘಾಟನೆ
Team Udayavani, May 1, 2019, 6:00 AM IST
ಗಂಗೊಳ್ಳಿ: ಶ್ರೀ ಇಂದುಧರ ಯುವಕ ಮಂಡಲ, ಯಕ್ಷಾಭಿಮಾನಿ ಬಳಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ಸರಸ್ವತಿ ವಿದ್ಯಾಲಯ ಹಿ. ಪ್ರಾ. ಶಾಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ರೆಡ್‌ಕ್ರಾಸ್ ಸಂಸ್ಥೆಯ ಚೇರ್‌ವೆುನ್ ಎಸ್. ಜಯಕರ ಶೆಟ್ಟಿ, ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ.ರಕ್ತದಾನ ಮಾಡುವುದರಿಂದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಉಂಟಾಗದಂತೆ ಮಾಡಬಹುದು ಎಂದರು.
ಮತ್ಯೋÕದ್ಯಮಿ ಮಂಜುನಾಥ ಜಿ.ಟಿ. ಉದ್ಘಾಟಿಸಿದರು. ರೆಡ್‌ಕ್ರಾಸ್ ಸಂಸ್ಥೆಯ ಸದಸ್ಯ ಗಣೇಶ ಆಚಾರ್ಯ, ಗ್ರಾ.ಪಂ. ಸದಸ್ಯ ಬಿ. ಗಣೇಶ ಶೆಣೈ, ಮಹಮ್ಮದ್ ತಬ್ರೇಜ್, ಗುರುಚರಣ್ ಖಾರ್ವಿ, ಶಾಹಿ ಮಸೀದಿ ಅಧ್ಯಕ್ಷ ಮಹಮ್ಮದ್ ಅಫ್ಜಲ್, ಯಕ್ಷಾಭಿಮಾನಿ ಬಳಗದ ಗಣೇಶ ಪೂಜಾರಿ, ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಸುಂದರ ಬಿ., ಉಪಾಧ್ಯಕ್ಷ ಸುರೇಶ ಜಿ., ಕಾರ್ಯದರ್ಶಿ ವಾಸು ಬಿ., ಯುವಕ ಮಂಡಲದ ಅಧ್ಯಕ್ಷ ಸುದೀಪ ಜಿ.ಎಸ್., ಗೌರವಾಧ್ಯಕ್ಷ ಗುರುರಾಜ್ ಜಿ., ಗಣೇಶ ಖಾರ್ವಿ, ರಾಜ ಖಾರ್ವಿ, ಸಂದೇಶ ಜಿ.ಎಂ., ಬಾಬು ಖಾರ್ವಿ, ಮತ್ತಿತರರು ಉಪಸ್ಥಿತರಿದ್ದರು.ಸುಂದರ ಬಿ. ಸ್ವಾಗತಿಸಿದರು. ಸುರೇಶ ಜಿ. ನಿರೂಪಿಸಿದರು. ಕಾರ್ಯದರ್ಶಿ ಕುಮಾರ ಜಿ. ಟಿ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.