ಪಡುಬಿದ್ರಿ ಬ್ಲೂಫ್ಲ್ಯಾಗ್ ಬೀಚ್ ನಿರ್ವಹಣೆಯಲ್ಲಿ ಅಕ್ರಮ : | ಡಿಸಿಗೆ ದೂರು
Team Udayavani, Oct 7, 2022, 7:07 AM IST
ಪಡುಬಿದ್ರಿ : ಇಲ್ಲಿನ ಎಂಡ್ ಪಾಯಿಂಟ್‌ನಲ್ಲಿರುವ ಅಂತಾ ರಾಷ್ಟ್ರೀಯ ಮಾನ್ಯತೆಯ ಬ್ಲೂಫ್ಲ್ಯಾಗ್ ಬೀಚ್‌ನ ಬಹುತೇಕ ಉದ್ಯೋಗಿಗಳು ಗುರುವಾರ ಕರ್ತವ್ಯಕ್ಕೆ ಗೈರುಹಾಜರಾಗಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬ್ಲೂಫ್ಲ್ಯಾಗ್ ಬೀಚ್ ನಿರ್ವಹಣೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿರುವ ಬಗ್ಗೆ ದೂರು ಸಲ್ಲಿಸಿದ್ದಾರೆ.
ಕಳೆದ 15 ತಿಂಗಳುಗಳಿಂದ ಕೆಲಸದ ವಾತಾವರಣ ಹದಗೆಟ್ಟಿದೆ. ಬೋಟಿಂಗ್‌ಗೆ ನಕಲಿ ರಶೀದಿಗಳನ್ನು ಮುದ್ರಿಸಿ ಹಣ ವಸೂಲು ಮಾಡಲಾಗುತ್ತಿದೆ. ವಸೂ ಲಾದ ಹಣವು ಪ್ರವಾಸೋದ್ಯಮ ಇಲಾಖೆಯ ಖಾತೆಗೆ ಜಮೆಯಾಗದೆ ಓರ್ವರ ಖಾಸಗಿ ಖಾತೆಗೆ ಜಮೆಯಾಗುತ್ತಿದೆ. ಈ ಕುರಿತು ಈ ಹಿಂದೆಯೂ ಜಿಲ್ಲಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಿಗೂ ದೂರು ನೀಡಿದ್ದರೂ, ಪ್ರಯೋಜನವಾಗಿಲ್ಲ ಎಂದು ಮನವಿಗೆ ಸಹಿ ಮಾಡಿರುವ ಅಲ್ಲಿನ 22 ಗುತ್ತಿಗೆ ಉದ್ಯೋಗಿಗಳು ದೂರಿದ್ದಾರೆ.
ನಾವು 31 ಮಂದಿ ಉದ್ಯೋಗಿಗಳಿದ್ದು ನ್ಯಾಯ ದೊರಕಬೇಕು. ಸೂಪರ್‌ವೈಸರ್‌ಗಳಿಬ್ಬರು ನಮ್ಮಲ್ಲಿ ಜೀವಭಯವನ್ನೂ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತಾಗಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ (ಪ್ರಭಾರ) ಕ್ಲಿಫರ್ಡ್ ಲೋಬೋ ಅವರಲ್ಲಿ “ಉದಯವಾಣಿ’ ಪ್ರಶ್ನಿಸಿದಾಗ, ಕಳೆದ ಮೂರು ತಿಂಗಳುಗಳಿಂದ ಬ್ಲೂ ಫ್ಲಾ ಗ್ ಬೀಚ್‌ನ ಕೆಲಸಗಾರರ ನಡುವೆ ಆಂತರಿಕ ಭಿನ್ನಾಭಿಪ್ರಾಯವು ಕಾಣಿಸಿಕೊಂಡಿರುವ ಪರಿಣಾಮ ಇದು. ಸ್ಥಳೀಯರಿಗೇ ಉದ್ಯೋಗ ನೀಡಿದ್ದು, ಮಾಸಿಕ ವೇತನವನ್ನೂ ಸಕಾಲದಲ್ಲಿ ಪಾವತಿಸಲಾಗುತ್ತಿದೆ. ಬೋಟಿಂಗ್, ಪ್ರವೇಶಾತಿಗಳಿಂದ ಬರುವ ಆದಾಯಗಳಿಗೆ ಕ್ರಮವತ್ತಾದ ರಶೀದಿಯನ್ನು ನೀಡಲಾಗುತ್ತಿದೆ. ಆಯಾಯ ದಿನ ಸಂಜೆಯ ವೇಳೆಗೆ ಲೆಕ್ಕಾಚಾರವಾಗಿ ಮರುದಿನವೇ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ. ಅಪಸ್ವರವೆತ್ತಿರುವ ಉದ್ಯೋಗಿಗಳು ಸೂಕ್ತ ದಾಖಲೆಗಳನ್ನು ನೀಡಿದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಲೋಬೋ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.