ಕುಂದಾಪುರ: ಬೋಟ್ ಮುಳುಗಡೆ : 6 ಮಂದಿ ಮೀನುಗಾರರ ರಕ್ಷಣೆ
ಗಂಗೊಳ್ಳಿಯಿಂದ 30 ನಾಟಿಕಲ್ ಮೈಲ್ ದೂರದಲ್ಲಿ ಅವಘಢ
Team Udayavani, Jan 15, 2020, 8:42 PM IST
ಕುಂದಾಪುರ: ಗಂಗೊಳ್ಳಿ ಮೀನುಗಾರಿಕಾ ಬಂದರಿನಿಂದ 30 ನಾಟಿಕಲ್ ಮೈಲು ದೂರದಲ್ಲಿ ಮಲ್ಪೆ ನೋಂದಾಯಿತ ಮೀನುಗಾರಿಕಾ ಬೋಟ್‌ವೊಂದು ಭಾಗಶಃ ಮುಳುಗಿದ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಮತ್ತೂಂದು ಬೋಟಿನ ಸಹಾಯದಿಂದ ಅದರಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.
ಮೀನುಗಾರರಾದ ಬೋಟಿನ ಚಾಲಕ ವೆಂಕಟೇಶ ಹರಿಕಾಂತ, ನಂದೀಶ್ ಖಾರ್ವಿ, ಸಂತೋಷ, ಹುಲಿಯಪ್ಪ, ದುರ್ಗಪ್ಪ ಹರಿಕಾಂತ ಹಾಗೂ ಅಣ್ಣಪ್ಪ ಹರಿಕಾಂತ ಅವರು ಪ್ರಾಣಾಪಾಯದಿಂದ ಪಾರಾದವರು.
ಮಲ್ಪೆಯ ನೋಂದಣಿ ಹೊಂದಿದ ಬೋಟ್ ಇದಾಗಿದ್ದು, ಕೋಡಿ – ಕನ್ಯಾನದ ಜಯಲಕ್ಷ್ಮಿ ಅವರ ಹೆಸರಲ್ಲಿದೆ. ಜ.12 ರಂದು ರಾತ್ರಿ 10.30 ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದೆ. ಜ.14 ರಂದು ಗಂಗೊಳ್ಳಿಯಿಂದ ಸುಮಾರು 30 ನಾಟಿಕಲ್ ಮೈಲ್ ದೂರದಲ್ಲಿದ್ದಾಗ ಬೋಟಿನ ಹಿಂದಿನ ಹಲಗೆ ತುಂಡಾಗಿ, ಬೋಟಿನೊಳಗೆ ನೀರು ಹೋಗಿದೆ. ಇದನ್ನು ತಿಳಿದ ಚಾಲಕ ವೆಂಕಟೇಶ್ ತತ್‌ಕ್ಷಣ ವೈಯರ್‌ಲೆಸ್ ಫೋನ್ ಮೂಲಕ ಹತ್ತಿರದ ಬೋಟಿಗೆ ಸೂಚನೆ ಕೊಟ್ಟಿದ್ದು, ಕೂಡಲೇ ಅಲ್ಲೇ ಸಮೀಪದಲ್ಲಿದ್ದ ಸಾಯಿರಾಮ್ ಎನ್ನುವ ಬೋಟಿನವರು ಇದರಲ್ಲಿದ್ದ ಎಲ್ಲ 6 ಮಂದಿ ಮೀನುಗಾರರನ್ನು ಪಾರು ಮಾಡಿದ್ದಾರೆ.
ಈ ಸಂಬಂಧ ಗಂಗೊಳ್ಳಿಯ ಕರಾವಲು ಕಾವಲು ಪೊಲೀಸ್ ಠಾಣೆಯ ಎಸ್‌ಐ ಸಂದೀಪ್ ಜಿ.ಎಸ್., ಎಎಸ್‌ಐ ಭಾಸ್ಕರ, ಸಿಬಂದಿಯಾದ ಸುರೇಂದ್ರ, ಮತ್ತಿತರರು ಮಾಹಿತಿ ಪಡೆದುಕೊಂಡಿದ್ದಾರೆ.
10 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಇನ್ನೂ ಕೂಡ ಬೋಟ್ ಭಾಗಶಃ ಮುಳುಗಡೆಯಾಗಿದ್ದು, ಇದನ್ನು ಮೇಲೆತ್ತುವ ಸಂಬಂಧ ಮೀನುಗಾರರು 2 ಬೋಟಿನಲ್ಲಿ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.