ಉಡುಪಿ: ನಾಲ್ಕನೇ ಅಲೆಗೂ ಮುನ್ನ ಬೇಕಿದೆ ಮುನ್ನೆಚ್ಚರಿಕೆ ಲಸಿಕೆ
Team Udayavani, Jun 17, 2022, 8:10 AM IST
ಉಡುಪಿ: ಕೋವಿಡ್ 4ನೇ ಅಲೆ ಸಾಧ್ಯತೆಗಳ ನಡುವೆ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಳ್ಳುವಂತೆ ಅರ್ಹರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಸರಕಾರದ ನಿಯಮಾವಳಿಯಂತೆ 60 ವರ್ಷ ಮೇಲ್ಪಟ್ಟವರು, ಆರೋಗ್ಯ ಕಾರ್ಯಕರ್ತರು, ಫ್ರಂಟ್‌ಲೆçನ್ ವರ್ಕರ್‌ಗಳು ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೊವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಳ್ಳಬಹುದಾಗಿದೆ. ಉಳಿದವರು ಖಾಸಗಿ ಆಸ್ಪತ್ರೆಗಳಲ್ಲಿ ಹಣ ನೀಡಿ ಲಸಿಕೆ ಪಡೆದುಕೊಳ್ಳಬೇಕು.
ನೋಂದಣಿ ಅಗತ್ಯ :
ಖಾಸಗಿ ಆಸ್ಪತ್ರೆಗಳಲ್ಲಿ ಕನಿಷ್ಠ 20 ಮಂದಿ ನೋಂದಣಿ ಮಾಡಿಸಿದರಷ್ಟೇ ಕೊವಿಶೀಲ್ಡ್ ಲಸಿಕೆ ನೀಡಲಾಗುತ್ತದೆ. ಬೆರಳೆಣಿಕೆಯಷ್ಟೇ ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಳ್ಳಲು ಆಗಮಿಸುತ್ತಿರುವ ಕಾರಣ ಲಸಿಕೆ ಪೂರ್ಣಪ್ರಮಾಣದಲ್ಲಿ ವ್ಯಯವಾಗುತ್ತಿಲ್ಲ. ಏಕಕಾಲದಲ್ಲಿ ಎಲ್ಲರೂ ಆಗಮಿಸುವಂತೆ ತಿಳಿಸಲಾಗುತ್ತಿದೆ ಎನ್ನುತ್ತಾರೆ ವೈದ್ಯಾಧಿಕಾರಿಗಳು.
ಕೊವ್ಯಾಕ್ಸಿನ್ ಕೊರತೆ: ಈ ನಡುವೆ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಗೂ ಕೊವ್ಯಾಕ್ಸಿನ್ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಕೊವ್ಯಾಕ್ಸಿನ್ ಎರಡನೇ ಡೋಸ್ ಹಾಗೂ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಳ್ಳುವವರಿಗೆ ಬಹುದೊಡ್ಡ ಹಿನ್ನಡೆಯಾಗಿದೆ. ಪ್ರಸ್ತುತ ಕೆಲವು ಆಸ್ಪತ್ರೆಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತಿದೆ. ಹಾಗೆಯೇ ಕೆಲವು ಆಸ್ಪತ್ರೆಯವರು ಕೊವ್ಯಾಕ್ಸಿನ್‌ಗೆ ಬೇಡಿಕೆ ಸಲ್ಲಿಸಿದ್ದರೂ ಪೂರೈಕೆಯಾಗಿಲ್ಲ.
ಲಸಿಕೆ ಪ್ರಗತಿ ವಿವರ :
ಜಿಲ್ಲೆಯಲ್ಲಿ 12ರಿಂದ 14 ವರ್ಷದ 33,429 ಮಂದಿ ಮೊದಲ ಬಾರಿಗೆ, 26,727 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡಿದ್ದಾರೆ. 15ರಿಂದ 18 ವರ್ಷದ 49,182 ಮಂದಿ ಮೊದಲ ಬಾರಿಗೆ ಹಾಗೂ 47,892 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡಿದ್ದಾರೆ. 18ರಿಂದ 44 ವರ್ಷದ 5,09,755 ಮಂದಿ ಮೊದಲ ಬಾರಿಗೆ ಹಾಗೂ 5,04,335 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡಿದ್ದಾರೆ. 536 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡಿದ್ದಾರೆ. 45 ವರ್ಷ ಮೇಲ್ಪಟ್ಟ 4,63,105 ಮಂದಿ ಮೊದಲ ಬಾರಿಗೆ, 4,62,081 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡಿದ್ದಾರೆ.
61,041 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡಿದ್ದಾರೆ. 24,291 ಮಂದಿ ಆರೋಗ್ಯ ಕಾರ್ಯಕರ್ತರು ಮೊದಲ ಬಾರಿಗೆ, 24,321 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡಿದ್ದಾರೆ. 15,554 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡಿದ್ದಾರೆ. 7,315 ಮಂದಿ ಫ್ರಂಟ್‌ಲೆçನ್ ವರ್ಕರ್‌ಗಳು ಮೊದಲ ಬಾರಿಗೆ ಹಾಗೂ 7,568 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು. 4,241 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡರು.
ಇದುವರೆಗೆ ಒಟ್ಟು 10,87,077 ಮಂದಿ ಮೊದಲ ಬಾರಿಗೆ, 10,72,924 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು. 81,372 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ 5ನೇ ಸ್ಥಾನ :
18 ವರ್ಷ ಮೇಲ್ಪಟ್ಟವರಲ್ಲಿ ಮೊದಲ ಹಾಗೂ ಎರಡನೇ ಡೋಸ್ ಲಸಿಕೆಯಲ್ಲಿ ಉಡುಪಿ ಶೇ. 100ಕ್ಕೂ ಅಧಿಕ ಪ್ರಗತಿ ಕಂಡಿದೆ. 12ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆಯಲ್ಲಿ ರಾಜ್ಯದಲ್ಲಿ ಉಡುಪಿ 5ನೇ ಸ್ಥಾನದಲ್ಲಿದೆ. ಇದೇ ರೀತಿಯಲ್ಲಿ ಉಳಿದ ವಿಭಾಗಗಳಲ್ಲಿಯೂ ಉಡುಪಿ ಜಿಲ್ಲೆಯು ಉತ್ತಮ ಪ್ರಗತಿಯನ್ನು ಸಾಧಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.