ಬ್ರಹ್ಮಾವರ: ಬಿಜೆಪಿ ಪರಿವರ್ತನಾ ಸಮಾವೇಶ
Team Udayavani, Oct 17, 2017, 11:04 AM IST
ಬ್ರಹ್ಮಾವರ: ರಾಜ್ಯದ ಆಡಳಿತ ಪಕ್ಷವಾದ ಕಾಂಗ್ರೆಸ್‌ನಿಂದ ಬೇಸತ್ತು ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಇದುವೇ ನಿಜವಾದ ಪರಿವರ್ತನೆ. ಈ ಪರಿವರ್ತನೆ ಪರ್ವ ಬ್ರಹ್ಮಾವರದಲ್ಲಿ ಮೊದಲು ಪ್ರಾರಂಭಗೊಂಡಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದರು.
ಅವರು ಸೋಮವಾರ ಬ್ರಹ್ಮಾವರದಲ್ಲಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಪರಿವರ್ತನಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕ ವಿ. ಸುನಿಲ್ ಕುಮಾರ್, ಮಾಜಿ ಶಾಸಕ ರಾದ ಕೆ. ರಘುಪತಿ ಭಟ್, ಲಾಲಾಜಿ ಮೆಂಡನ್, ಪ್ರಮುಖರಾದ ಕೋಟ ಶ್ರೀನಿವಾಸ ಪೂಜಾರಿ, ಉದಯ ಕುಮಾರ್ ಶೆಟ್ಟಿ, ಸುಕುಮಾರ್ ಶೆಟ್ಟಿ, ದಿನಕರ ಬಾಬು, ಶೀಲಾ ಕೆ. ಶೆಟ್ಟಿ, ಯಶಪಾಲ್ ಸುವರ್ಣ, ನಳಿನಿ ರಾವ್, ಕುತ್ಯಾರು ನವೀನ್ ಶೆಟ್ಟಿ, ಕುಯಿಲಾಡಿ ಸುರೇಶ ನಾಯಕ್, ಶ್ಯಾಮಲಾ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.
ಇದೇ ವೇಳೆ ಜಯ ಪ್ರಕಾಶ್ ಹೆಗ್ಡೆ ಅವರ ನೂರಾರು ಅಭಿಮಾನಿಗಳು ಬಿಜೆಪಿಗೆ ಸೇರ್ಪಡೆಗೊಂಡರು. ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ ಸ್ವಾಗತಿಸಿ, ಮಾಜಿ ಶಾಸಕ ಕೆ. ರಘುಪತಿ ಭಟ್ ಪ್ರಸ್ತಾ ವನೆ ಗೈದರು. ರಾಘವೇಂದ್ರ ಕಿಣಿ, ಹರೀಶ್ ಶೆಟ್ಟಿ, ಕಮಲಾಕ್ಷ ಹೆಬ್ಟಾರ್, ಅಕ್ಷಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.