ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜು ತಂಡಕ್ಕೆ ಬಿ.ಸಿ. ಆಳ್ವ ಮೆಮೋರಿಯಲ್ ಕ್ರಿಕೆಟ್ ಟ್ರೋಫಿ
Team Udayavani, Jan 20, 2023, 10:54 AM IST
ಬ್ರಹ್ಮಾವರ: ಎಸ್.ಎಂ.ಎಸ್ ಕಾಲೇಜು ಮೈದಾನದಲ್ಲಿ ಬಿ.ಸಿ. ಆಳ್ವ ಮೆಮೋರಿಯಲ್ ರೋಲಿಂಗ್ ಟ್ರೋಫಿಗಾಗಿ ಜರುಗಿದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಟ್ಟದ ಅಂತರ್ ವಲಯ ಪುರುಷರ ಕ್ರಿಕೆಟ್ ಪಂದ್ಯಾಟದಲ್ಲಿ ಎಸ್.ಎಂ.ಎಸ್ ಪದವಿ ಕಾಲೇಜು ಬ್ರಹ್ಮಾವರ , ಎಂ ಪಿ ಎಂ ಪ್ರಥಮ ದರ್ಜೆ ಕಾಲೇಜು ಕಾರ್ಕಳ ತಂಡವನ್ನು 38 ರನ್ನುಗಳ ಅಂತರದಿಂದ ಮಣಿಸಿ 11 ವರ್ಷಗಳ ನಂತರ ಬಿ.ಸಿ ಆಳ್ವ ಮೆಮೋರಿಯಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಎಂಪಿಎಂ ಪ್ರಥಮ ದರ್ಜೆ ಕಾಲೇಜು ಕಾರ್ಕಳ ತಂಡವು ಅತಿಥೇಯ ಎಸ್ಎಂಎಸ್ ತಂಡವನ್ನು 131 ರನ್ನುಗಳಿಗೆ ನಿಯಂತ್ರಿಸಲು ಸಫಲವಾಯಿತಾದರೂ, ಎಸ್.ಎಂ.ಎಸ್ ಕಾಲೇಜಿನ ಬಿಗು ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 93 ರನ್ನುಗಳಿಗೆ ಆಲೌಟಾಯಿತು.
ಎಂಪಿಎಂ ಕಾಲೇಜು ಪರ ಧೀರಜ್ ನಾಲ್ಕು ವಿಕೆಟ್ ಪಡೆದರೆ, ಎಸ್ಎಂಎಸ್ ಕಾಲೇಜಿನ ನಿತೀಶ್ ಶೆಟ್ಟಿ ಮೂರು ವಿಕೆಟ್ ಪಡೆದರು. ಇತ್ತಂಡಗಳು ಸೆಮಿ ಫೈನಲ್ ನಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರ್ ಮಂಗಳೂರು ಹಾಗೂ ಎಸ್ ಡಿ ಎಮ್ ಕಾಲೇಜು, ಮಂಗಳೂರು ತಂಡಗಳನ್ನುಸೋಲಿಸಿ ಫೈನಲ್ ಗೆ ಪ್ರವೇಶಿಸಿದ್ದವು. ಇದರ ಜೊತೆಗೆ ಎಸ್ಎಂಎಸ್ ಕಾಲೇಜು ಬ್ರಹ್ಮಾವರ ತಂಡವು ಸತತ ಎರಡು ವರ್ಷ ಶಿರ್ವ ಲೆಸ್ಲಿ ರೋಲಿಂಗ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ಪಂದ್ಯಾ ಕೂಟದ ಸಮಾರೋಪ ಸಮಾರಂಭದಲ್ಲಿ ಓ.ಎಸ್ ಸಿ ಎಜ್ಯುಕೇಷನಲ್ ಸೊಸೈಟಿಯ ಅಧ್ಯಕ್ಷರಾದ ರೆ.ಫಾ.ಎಮ್. ಸಿ ಮಥಾಯ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಓ.ಎಸ್ ಸಿ ಎಜ್ಯುಕೇಷನಲ್ ಸೊಸೈಟಿಯ ಕಾಲೇಜು ವಿಭಾಗದ ಕಾರ್ಯದರ್ಶಿ ಸಿರಿಲ್ ಪಿ ಡಿ’ಸೋಜ, ಕೋಶಾಧಿಕಾರಿ ಸ್ಯಾಂಸನ್ ಡಿ’ಸೋಜ, ಓ.ಎಸ್.ಸಿ ಎಜ್ಯುಕೇಷನಲ್ ಸೊಸೈಟಿಯ ಕಮಿಟಿ ಸದಸ್ಯೆ ಲವಿನಾ ಲೂವಿಸ್, ಎಸ್ ಎಮ್ ಎಸ್ ಸಿ ಬಿ ಎಸ್ ಇ ಶಾಲೆಯ ಮಾಜಿ ಕೋಶಧಿಕಾರಿ ಅಲ್ವಿನ್, ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಉಡುಪ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವೆಂಕಟೇಶ್ ಭಟ್ ವಿದ್ಯಾರ್ಥಿ ಕ್ರೀಡಾ ಕಾರ್ಯದರ್ಶಿ ಏರನ್ ರೋಚ್ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.