Brahmavara: ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ
Team Udayavani, Mar 3, 2024, 1:06 PM IST
ಬ್ರಹ್ಮಾವರ: ಬಾರಕೂರು ಹನೆಹಳ್ಳಿ ಬಾಳೆ ಹಿತ್ಲಿನಲ್ಲಿ ಕೃಷ್ಣ (37) ಅವರನ್ನು ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.
ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಕೃಷ್ಣ ವಿವಾಹಿತರಾಗಿದ್ದರೂ ಮನೆಯಲ್ಲಿ ಒಬ್ಬರೇ ವಾಸವಿದ್ದರು ಎಂದು ತಿಳಿದು ಬಂದಿದೆ. ಶನಿವಾರ ರಾತ್ರಿ 9.30ರ ಹೊತ್ತಿಗೆ ಗುಂಡಿನ ಶಬ್ದವಾದರೂ ನೆರೆಕರೆಯವರು ಅಷ್ಟೊಂದು ಗಮನ ಹರಿಸಿರಲಿಲ್ಲ. ರವಿವಾರ ಬೆಳಗ್ಗೆ ಕೃಷ್ಣ ಅವರ ಸ್ನೇಹಿತ ಮನೆಗೆ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ ಜಗಲಿಯ ಮೇಲೆ ಮೃತದೇಹ ಕಂಡುಬಂದಿದ್ದು, ತಲೆಗೆ ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಸ್ಥಳದಲ್ಲಿ ಗುಂಡಿನ 3 ಖಾಲಿ ಕವರ್ ದೊರಕಿದೆ.
ಹಾಗೇ ಉಳಿದ ಊಟ
ಕೃಷ್ಣ ಹೆಚ್ಚಿನ ದಿನ ರಾತ್ರಿ ಹೊಟೇಲ್‌ನಿಂದ ಊಟ ಪಾರ್ಸೆಲ್ ತರುತ್ತಿದ್ದು, ಶನಿವಾರ ಕೂಡ ತಂದಿದ್ದರು. ತಂದಿದ್ದ ಪಾರ್ಸೆಲ್ ಹಾಗೆಯೇ ಇತ್ತು. ಮೃತರು ಪತ್ನಿಯನ್ನು ಅಗಲಿದ್ದಾರೆ.
ಮೃದು ಸ್ವಭಾವದವರುಕೃಷ್ಣ ಅವರು ನೆರೆಕರೆ ಯವ ರೊಂದಿಗೆ ಸೌಹಾರ್ದದಿಂದ ಇದ್ದರು. ಯಾರೊಂದಿಗೂ ದ್ವೇಷ ಕಟ್ಟಿ ಕೊಂಡವ ರಲ್ಲ ಎಂದು ತಿಳಿದು ಬಂದಿದೆ. ಎಸ್‌ಪಿ ಡಾ| ಅರುಣ್ ಕೆ., ವೃತ್ತ ನಿರೀಕ್ಷಕ ದಿವಾಕರ್ ಪಿ.ಎಂ., ಠಾಣಾಧಿ ಕಾರಿ ಮಧು ಬಿ.ಇ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂರು ತಂಡ ರಚನೆ
ಪ್ರಕರಣದ ಹಿನ್ನೆಲೆಯಲ್ಲಿ ಮೂರು ಪ್ರತ್ಯೇಕ ತಂಡ ರಚಿಸಿ ಕಾರ್ಯಪ್ರವೃತ್ತರಾಗಿದ್ದೇವೆ. ಬೆರ ಳಚ್ಚು ತಜ್ಞರು, ಸ್ಥಳದಲ್ಲಿ ಪರಿ ಶೀಲನೆ, ಪೂರ್ವಾಪರ ಹಿನ್ನೆಲೆ ಸಹಿತ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ವೈಯಕ್ತಿಕ ವಿಚಾರದಲ್ಲಿ ಘಟನೆ ನಡೆ ದಿರುವ ಸಂಶಯವಿದೆ. ಆದಷ್ಟು ಶೀಘ್ರ ಪ್ರಕರಣ ಭೇದಿಸುತ್ತೇವೆ ಎಂದು ಎಸ್‌ಪಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.