ಬ್ರಹ್ಮಾವರ: ಕುಖ್ಯಾತ ಕಳ್ಳನ ಬಂಧನ; 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಸೊತ್ತು ವಶ
Team Udayavani, Dec 20, 2022, 6:52 PM IST
ಬ್ರಹ್ಮಾವರ: ರಾತ್ರಿ ಸಮಯ ಮನೆ ಕನ್ನ, ಕಳವು ನಡೆಸುತ್ತಿದ್ದ ಕುಖ್ಯಾತ ಆರೋಪಿ ಕಾಡೂರು ತಂತ್ರಾಡಿಯ ವಿಜಯ ಕುಮಾರ್ ಶೆಟ್ಟಿಯನ್ನು ಬಂಧಿಸಲಾಗಿದೆ.
ಮನೆ ಕಳ್ಳತನ ಪ್ರಕರಣದ ಆರೋಪಿಗಳು ಹಾಗೂ ಜೈಲಿನಿಂದ ಬಿಡುಗಡೆಯಾದವರ ಮಾಹಿತಿಯನ್ನು ಕಲೆಹಾಕಿ ಅವರ ಚಲನವಲನದ ಮೇಲೆ ನಿಗಾ ವಹಿಸಲಾಗಿತ್ತು. ಅದರಂತೆ ಸೋಮವಾರ ಸಂಜೆ ನೀಲಾವರ ಕ್ರಾಸ್ ಬಳಿ ಕಳ್ಳತನ ಪ್ರಕರಣದ ಹಳೆಯ ಆರೋಪಿ ವಿಜಯ ಕುಮಾರ್ ಶೆಟ್ಟಿಯನ್ನು ತಡೆದು ನಿಲ್ಲಿಸಿ ಆತನ ದ್ವಿಚಕ್ರ ವಾಹನ ಪರಿಶೀಲಿಸಿದಾಗ ಕಳ್ಳತನ ನಡೆಸಲು ಬೇಕಾದ ಸಲಕರಣೆಗಳು ಪತ್ತೆಯಾಗಿವೆ.
ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಈತನು ಬ್ರಹ್ಮಾವರ ಮತ್ತು ಕೋಟ ಠಾಣಾ ವ್ಯಾಪ್ತಿಯ ಹಲವು ಪ್ರಕರಣದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿರುತ್ತದೆ.
ಪ್ರಕರಣಗಳು:
2022ರ ಮಾರ್ಚ್ ಎಪ್ರಿಲ್ ತಿಂಗಳ ಮಧ್ಯಾವ ಧಿಯಲ್ಲಿ ಕಾಡೂರು ಗ್ರಾಮದ ತಂತ್ರಾಡಿ ಸದಾಶಿವ ಮಹಾಬಲೇಶ್ವರ ರಾವ್ ಅವರ ಹಳೆ ಮನೆಯ ಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿ ಸುಮಾರು 280ಕೆ.ಜಿ. ತೂಕದ ರೂ.1,40,000 ಮೌಲ್ಯದ ಏಳು ಮೂಟೆ ಕಾಳು ಮೆಣಸುಗಳನ್ನು ಕಳವು ಮಾಡಿರುತ್ತಾನೆ. ಜುಲಾೖಯಲ್ಲಿ ನಡೂರು ಪ್ರಾ. ಶಾಲೆಯ ಬೀಗ ಮುರಿದು ಒಂದು ಗ್ಯಾಸ್ ಸಿಲಿಂಡರ್ ಕಳವು, ಯಡ್ತಾಡಿ ಗ್ರಾಮದ ದಾಲಾಡಿಯಲ್ಲಿರುವ ವಾಣಿ ಭಂಡಾರಿ ಅವರ ಮನೆಯಲ್ಲಿ ಸುಮಾರು 5,04,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ರೂ.15,000 ನಗದು ಕಳವು, ನವಂಬರ್‌ನಲ್ಲಿ ಬಿಲ್ಲಾಡಿ ಮಾನ್ಯ ಶಾಲೆಯ ಎದುರು ಸುಜಾತ ಶೆಟ್ಟಿ ಅವರ ಮನೆ ಕಳ್ಳತನ, ಆರೂರು ಗ್ರಾಮದ ಮೇಲಡು³ ಭಾಸ್ಕರ ಶೆಟ್ಟಿ ಅವರ ಮನೆಯಲ್ಲಿ ರೂ.31,000 ಮೌಲ್ಯದ ಚಿನ್ನ, ಬೆಳ್ಳಿಯ ಆಭರಣ, ಸೀರೆ ಹಾಗೂ ನಗದು ರೂ. 5,000 ಕಳವು ಮಾಡಿದ್ದನು.
ಈಗಾಗಲೇ ತುಂಗಾನಗರ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ತಲಾ 2 ಪ್ರಕರಣ, ಮಂಗಳೂರು ಬಂದರು 4, ಎನ್.ಆರ್.ಪುರ, ಹರಿಹರ, ಆಗುಂಬೆ, ಬ್ರಹ್ಮಾವರ ಠಾಣೆಯಲ್ಲಿ ತಲಾ 1 ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಜಾಮೀನು ರಹಿತ ವಾರಂಟ್ ಜಾರಿಯಾಗಿರುತ್ತದೆ.
ಸ್ವಾಧೀನಪಡಿಸಿದ ಸೊತ್ತುಗಳ ವಿವರ:
ಕೃತ್ಯಕ್ಕೆ ಬಳಸುತ್ತಿದ್ದ ಸ್ಕೂಟರ್ ಮೌಲ್ಯ ರೂ. 30,000, ಕಳವು ಮಾಡಿದ ರೂ. 4,64,700 ಮೌಲ್ಯದ ಚಿನ್ನಾಭರಣ, ರೂ. 2,080 ಮೌಲ್ಯದ ಬೆಳ್ಳಿ ನಾಣ್ಯ,ರೂ. 9,000 ಮೌಲ್ಯದ ಸೀರೆ, ಕಾಳುಮಣಸಿನ ಮಾರಾಟದಿಂದ ಪಡೆದ ನಗದು ರೂ. 84,000 ಹಾಗೂ ಗ್ಯಾಸ್ ಸಿಲಿಂಡರ್‌ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಎಸ್‌ಪಿ ಅಕ್ಷಯ ಎಂ.ಎಚ್., ಎಎಸ್‌ಪಿ ಎಸ್.ಟಿ. ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಂತೆ, ಉಪಾಧೀಕ್ಷಕ ಸುಧಾಕರ ಎಸ್. ನಾಯ್ಕ ಅವರ ನಿರ್ದೇಶನದಂತೆ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಉಪನಿರೀಕ್ಷಕರಾದ ರಾಜಶೇಖರ ವಂದಲಿ, ಮುಕ್ತಾಬಾಯಿ, ಮಧುಬಿ.ಇ. ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.