ಸರ್ವಋತುವಿಗೆ ಇನ್ನೂ ತೆರೆದುಕೊಳ್ಳದ ರಾಜ್ಯದ ಏಕೈಕ ಹೊರ ಬಂದರು
Team Udayavani, Dec 13, 2018, 2:10 AM IST
ಕುಂದಾಪುರ: ರಾಜ್ಯದ ಏಕೈಕ ಹೊರ ಬಂದರು ಆಗಿರುವ ಮರವಂತೆಯಲ್ಲಿ ಬ್ರೇಕ್ ವಾಟರ್ ಕಾಮಗಾರಿ ವಿಳಂಬದಿಂದಾಗಿ ಸರ್ವಋತುವಿಗೆ ಈ ಬಂದರು ಇನ್ನೂ ತೆರೆದುಕೊಂಡಿಲ್ಲ. ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ವತಿಯಿಂದ 55 ಕೋ. ರೂ. ವೆಚ್ಚದಲ್ಲಿ ಹೊರ ಬಂದರು (ಔಟ್‌ಡೋರ್) ನಿರ್ಮಾಣ ಕಾಮಗಾರಿ ಆರಂಭಗೊಂಡು 6 ವರ್ಷ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಗುತ್ತಿಗೆ ಪಡೆದ ಸಂಸ್ಥೆಯ ವಿರುದ್ಧ ಮೀನುಗಾರರಿಗೆ ಅಸಮಾಧಾನದಿಂದಾಗಿ ಕೆಲವು ಸಮಯದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಆ ಕಾರಣದಿಂದ ಈ ಬಂದರು ಎಲ್ಲ ಸಮಯದಲ್ಲಿಯೂ ಮೀನುಗಾರರರಿಗೆ ಪ್ರಯೋಜನಕ್ಕೆ ಸಿಗುತ್ತಿಲ್ಲ.
ಏನಿದು ಹೊರ ಬಂದರು?
ಇತರ ಮೀನುಗಾರಿಕಾ ಬಂದರು ಹಾಗೂ ಇಲ್ಲಿಗೂ ಇರುವ ಪ್ರಮುಖ ವ್ಯತ್ಯಾಸವೆಂದರೆ, ಬೇರೆಲ್ಲ ಬಂದರುಗಳು ಸಹಜ ಬಂದರು ಆಗಿದ್ದರೆ, ಇದು ಕೃತಕವಾಗಿ ನಿರ್ಮಿಸಿದ ಬಂದರು ಆಗಿದೆ. ಅಂದರೆ ಮರವಂತೆಯಲ್ಲಿ ಇಲ್ಲಿನ ಮೀನುಗಾರರು ಬೇರೆ ಬಂದರನ್ನು ಅವಲಂಬಿಸುವ ಬದಲು ತಮ್ಮ ಅನುಕೂಲಕ್ಕಾಗಿ ಸ್ವತಃ ಕೃತಕವಾಗಿ ನಿರ್ಮಿಸಿಕೊಂಡ ಬಂದರು ಇದಾಗಿದೆ. ನಾಡದೋಣಿ ಮೀನುಗಾರಿಕೆ ಇಲ್ಲಿನ ವೈಶಿಷ್ಟ್ಯವಾಗಿದೆ. 300ಕ್ಕೂ ಹೆಚ್ಚು ನಾಡದೋಣಿಗಳಿದ್ದು, ಸುಮಾರು 2 ಸಾವಿರಕ್ಕೂ ಹೆಚ್ಚಿನ ಮೀನುಗಾರರು ಇಲ್ಲಿದ್ದಾರೆ. ಇದಲ್ಲದೆ ಬೇರೆ ಕಡೆಗಳ ಮೀನುಗಾರರು ಕೂಡ ಇಲ್ಲಿಗೆ ಬರುತ್ತಾರೆ.
ಇದು ಮೀನುಗಾರರೇ ಸಮುದ್ರ ಅಲೆಗಳನ್ನು ತಡೆಯಲು ತಡೆಗೋಡೆ ಹಾಕಿ ನಿರ್ಮಿಸಿದ ಬಂದರು ಇದಾಗಿದೆ. ಆದರೆ ಅಲೆಗಳ ಅಬ್ಬರ ತಡೆಯಲು 6 ವರ್ಷಗಳ ಹಿಂದೆ ಆರಂಭವಾದ ಹೊಸ ಯೋಜನೆಯ ಬ್ರೇಕ್ ವಾಟರ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಜಾಸ್ತಿಯಾದಾಗ ಗಂಗೊಳ್ಳಿ, ಕೊಡೇರಿ ಸಹಿತ ಇನ್ನಿತರ ಬಂದರುಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆಯಿದೆ.
ಏಕೈಕ ಹೊರ ಬಂದರು
ನೆರೆಯ ರಾಜ್ಯ ಕೇರಳದಲ್ಲಿ 3 ಹೊರ ಬಂದರುಗಳಿದ್ದರೆ, ರಾಜ್ಯದ ಏಕೈಕ ಹೊರ ಬಂದರು ಮರವಂತೆಯಲ್ಲಿ ಮಾತ್ರ ಇರುವುದು. ಕೇರಳದ ಕರಾವಳಿಯ ಪ್ರತಿ 30 ಕಿ.ಮೀ. ಗೊಂದು ಬಂದರು ನಿರ್ಮಿಸಲಾಗಿದೆ.
ಮೀನುಗಾರರಿಗೆ ತೊಂದರೆ
ಹೊರ ಬಂದರಿನ ಬ್ರೇಕ್ ವಾಟರ್ ಕಾಮಗಾರಿ ವಿಳಂಬದಿಂದಾಗಿ ಮೀನುಗಾರರಿಗೆ ಎಲ್ಲ ಸಮಯದಲ್ಲಿಯೂ ಮೀನುಗಾರಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. ಕೂಡಲೇ ಸ್ಥಗಿತಗೊಂಡ ಕಾಮಗಾರಿಯನ್ನೂ ತ್ವರಿತಗತಿಯಲ್ಲಿ ಆರಂಭಿಸಿ, ಪೂರ್ಣಗೊಳಿಸಿ, ಮೀನುಗಾರರಿಗೆ ಅನುಕೂಲ ಮಾಡಿಕೊಡಲಿ.
– ಸಂಜೀವ ಖಾರ್ವಿ, ಮೀನುಗಾರರು, ಮರವಂತೆ
ಮಾರ್ಚ್‌ನೊಳಗೆ ಪೂರ್ಣ
ಮರವಂತೆಯ ಹೊರ ಬಂದರು ಕಾಮಗಾರಿ ಕಳೆದ 3-4 ತಿಂಗಳಿಂದ ಸ್ಥಗಿತಗೊಂಡಿತ್ತು. ಈಗ ಮತ್ತೆ ಅಲ್ಲಿನ ಮೀನುಗಾರರ ಅಭಿಪ್ರಾಯಗಳನ್ನು ಪಡೆದು ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಈಗಾಗಲೇ ಸುಮಾರು 45 ಕೋ.ರೂ. ವೆಚ್ಚದ ಕಾಮಗಾರಿ ಮುಗಿದಿದ್ದು, ಇನ್ನೂ ಸುಮಾರು 9 ಕೋ.ರೂ. ವೆಚ್ಚದ ಕಾಮಗಾರಿ ಬಾಕಿಯಿದೆ. ಅದು ಮುಂದಿನ ಮಾರ್ಚ್ ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಅದಲ್ಲದೆ ಎರಡನೇ ಹಂತದ ಯೋಜನೆಗೂ ಪ್ರಸ್ತಾವನೆ ಸಲ್ಲಿಸಲು ತಯಾರಿ ನಡೆಯುತ್ತಿದೆ.
– ಕ್ಸೇವಿಯರ್ ಡಯಾಸ್, ಸಹಾಯಕ ಎಂಜಿನಿಯರ್, ಬಂದರು ಮತ್ತು ಮೀನುಗಾರಿಕಾ ಇಲಾಖೆ
— ಪ್ರಶಾಂತ್ ಪಾದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.