ಬಸ್- ಬೈಕ್ ಢಿಕ್ಕಿ: ಉಪಪ್ರಾಂಶುಪಾಲ ಸಾವು
Team Udayavani, Jan 17, 2018, 11:26 AM IST
ಬೈಂದೂರು: ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ, ಬೈಂದೂರಿನ ಸೈಂಟ್ ಧಾಮಸ್ ಕಾಲೇಜಿನ ಉಪಪ್ರಾಂಶುಪಾಲ ಫಾದರ್ ಅಬ್ರಹಾಂ ಕಲ್ಲಪಟ್ (38) ಧಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಬೈಂದೂರಿನ ಹೊಸ ಬಸ್ ನಿಲ್ದಾಣ ಬಳಿ ಸಂಭವಿಸಿದೆ.
ಆಸ್ಪತ್ರೆಗೆ ಹೊರಟಿದ್ದ ಅಬ್ರಹಾಂ: ಅಬ್ರಹಾಂ ಅವರು ಕೇರಳ ಮೂಲದವರಾಗಿದ್ದು, ನಾಲ್ಕು ವರ್ಷಗಳಿಂದ ಬೈಂದೂರಿನ ಸೈಂಟ್ ಥಾಮಸ್ ಕಾಲೇಜಿನಲ್ಲಿಉಪ ಪ್ರಾಂಶುಪಾಲರಾಗಿದ್ದರು. ವಸತಿ ಕಾಲೇಜು ಆಗಿದ್ದರಿಂದ ರಾತ್ರಿ ಹನ್ನೊಂದು ಗಂಟೆಯ ವೇಳೆಗೆ ಅವರು ಅನಾರೋಗ್ಯಗೊಂಡ ವಿದ್ಯಾರ್ಥಿಯನ್ನು ಬೈಕ್‌ನಲ್ಲಿ ಕುಳ್ಳಿರಿಸಿಕೊಂಡು ಬೈಂದೂರಿನ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆಗೆ ಕುಂದಾಪುರದಿಂದ ಬೆಳಗಾಂ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಅಬ್ರಹಾಂ ಅವರ ತಲೆಗೆ ಬಲವಾದ ಏಟು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ.
ಬೈಕ್‌ನಲ್ಲಿದ್ದ ವಿದ್ಯಾರ್ಥಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜಿಗೆ ರಜೆ
ಅಬ್ರಹಾಂ ಸಾವಿಗೆ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕ ವೃಂದ, ಸಿಬಂದಿ ವರ್ಗ, ವಿದ್ಯಾರ್ಥಿ ಗಳು ಕಂಬನಿ ಮಿಡಿದಿದ್ದು, ಮಂಗಳವಾರ ಕಾಲೇಜಿಗೆ ರಜೆ ಸಾರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.