“ವ್ಯವಹಾರ ಮಾದರಿಯಿಂದಾಗಿ ಮಾಧ್ಯಮ ಕವಲು ದಾರಿಯಲ್ಲಿದೆ’

Team Udayavani, Nov 15, 2019, 5:43 AM IST

DICESH-M

ಕುಂದಾಪುರ: ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವ ಏಕೈಕ ವಸ್ತು ಜಗತ್ತಲ್ಲಿದ್ದರೆ ಅದು ಪತ್ರಿಕೆ ಮಾತ್ರ. ಓದುಗನ ಋಣದಲ್ಲಿ ಮಾಧ್ಯಮಗಳು ಇರುವುದಿಲ್ಲ. ಓದುಗ ಕೊಡುವ ಹಣ ಪತ್ರಿಕೆ ನಡೆಸಲು ಸಾಕಾಗುವುದಿಲ್ಲ. ಪತ್ರಿಕೆ ನಡೆಸುವವರಿಗೂ ಓದುಗರಿಗೂ ಸಂಬಂಧವಿದೆ. ಆದರೆ ಚಾನೆಲ್‌ ನಡೆಸುವವರಿಗೂ ವೀಕ್ಷಕರಿಗೂ ಸಂಬಂಧವಿರುವುದಿಲ್ಲ. ಇಂತಹ ವ್ಯವಹಾರ ಮಾದರಿಯನ್ನು ಬದಲಾವಣೆ ಮಾಡುವವರೆಗೆ ಈ ಮಾಧ್ಯಮ ಇದೇ ರೀತಿ ಕವಲು ದಾರಿಯಲ್ಲಿರುತ್ತದೆ, ದಿಕ್ಕೆಟ್ಟು ಕೂತಿರುತ್ತದೆ ಎಂದು ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಹೇಳಿದರು.

ಅವರು ಮಂಗಳವಾರ ಸಂಜೆ ಕುಂದಾಪುರ ಜೂನಿಯರ್‌ ಕಾಲೇಜಿನ ಕಲಾಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮದಲ್ಲಿ ಕವಲು ದಾರಿಯಲ್ಲಿ ಪತ್ರಕರ್ತ ವಿಷಯದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ಜಾಗೃತ ಸಮಾಜದಲ್ಲಿ ಮಾತ್ರ ಒಂದು ಪತ್ರಿಕೆ ಯಶಸ್ವಿಯಾಗಿ ಕೆಲಸ ಮಾಡಲು ಸಾಧ್ಯವಿದೆ. ವಿಶ್ವಾಸಾರ್ಹತೆ ಕಳೆದು ಕೊಂಡರೆ ಪತ್ರಿಕೆ ರದ್ದಿಯಾಗಿ ಬಿಡುತ್ತದೆ. ಓದುಗ ಪತ್ರಿಕೆಗಳನ್ನು ಓದುತ್ತಾನೆ, ಆದರೆ ಆತ ಪತ್ರಿಕೆಗಳನ್ನು ನಂಬುತ್ತಿಲ್ಲ. ನಾನು ಮೂವತ್ತು ವರ್ಷಗಳ ಹಿಂದೆ ವೃತ್ತಿಯನ್ನು ಪ್ರವೇಶಿಸುವಾಗ ಇದ್ದ ಮಾಧ್ಯಮ ಕ್ಷೇತ್ರಕ್ಕೂ ಇವತ್ತು ನಾನು ನಿಂತು ನೋಡುವ ಮಾಧ್ಯಮ ಕ್ಷೇತ್ರಕ್ಕೂ ಶತಮಾನಗಳ ಅಂತರ ಎದ್ದು ಕಾಣುತ್ತಿದೆ ಎಂದರು.

ನೂತನ ಪದಾಧಿಕಾರಿಗಳಿಗೆ ಪ್ರಮಾಣವಿಧಿಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಬೋಧಿಸಿದರು.

ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಛಾಯಪತ್ರಕರ್ತ ಸಂತೋಷ್‌ ಕುಂದೇಶ್ವರ ಅವರನ್ನು ಸಮ್ಮಾನಿಸಲಾಯಿತು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಂದಾಪುರ ಎಎಸ್‌ಪಿ ಹರಿರಾಮ್‌ ಶಂಕರ್‌, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್‌ ಸರಳೆಬೆಟ್ಟು, ಜಿಲ್ಲಾ ಉಪಾಧ್ಯಕ್ಷ ರಾಜೇಶ್‌ ಕೆ.ಸಿ., ಬೈಂದೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜನಾರ್ದನ್‌ ಎಸ್‌. ಮರವಂತೆ, ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ, ತಾಲೂಕು ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ, ಕೋಶಾಧಿಕಾರಿ ಸತೀಶ್‌ ಆಚಾರ್‌ ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತ ರಾಮಕೃಷ್ಣ ಹೇಳೆì ಪ್ರಸ್ತಾವಿಸಿ, ಪತ್ರಕರ್ತ ರಾಘವೇಂದ್ರ ಪೈ ಸ್ವಾಗತಿಸಿ, ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ವಂದಿಸಿ, ಪತ್ರಕರ್ತ ಜಯಶೇಖರ್‌ ಮಡಪ್ಪಾಡಿ ನಿರೂಪಿಸಿದರು.

ಸಮನ್ವಯ ಇರಲಿ
ಮಾಧ್ಯಮ ಕ್ಷೇತ್ರ ಮತ್ತು ಪೊಲೀಸ್‌ ಇಲಾಖೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಮಾಧ್ಯಮ ಮತ್ತು ಪೊಲೀಸ್‌ ಇಲಾಖೆ ಪರಸ್ಪರ ಸಮನ್ವಯದಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ಸಾಮಾಜಿಕ ಸಾಮರಸ್ಯವನ್ನು ಕಾಪಾಡಲು ಸಹಾಯವಾಗುತ್ತದೆ.
-ಹರಿರಾಮ್‌ ಶಂಕರ್‌,
ಎಎಸ್ಪಿ ಕುಂದಾಪುರ

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.