Udupi ಆನ್‌ಲೈನ್‌ ವಂಚಕರಿಗೆ ಉದ್ಯಮ, ಉದ್ಯಮಿಗಳೇ ಟಾರ್ಗೆಟ್‌?

ಅನ್ಯರಾಜ್ಯಗಳಲ್ಲಿ ಕುಳಿತು ಮೊಬೈಲ್‌ ಕರೆಗಳ ಮೂಲಕವೇ ನಡೆಸುತ್ತಿದ್ದಾರೆ ವಂಚನೆಯ ನಾನಾ ತಂತ್ರ!

Team Udayavani, Aug 14, 2024, 7:10 AM IST

Udupi ಆನ್‌ಲೈನ್‌ ವಂಚಕರಿಗೆ ಉದ್ಯಮ, ಉದ್ಯಮಿಗಳೇ ಟಾರ್ಗೆಟ್‌?

ಉಡುಪಿ: ಆನ್‌ಲೈನ್‌ ವಂಚಕರು ವಿವಿಧ ಮಾದರಿಯಲ್ಲಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದು, ಭಿನ್ನ-ವಿಭಿನ್ನ ಪ್ರಕರಣಗಳು ವರದಿಯಾಗುತ್ತಿರುವ ನಡುವೆಯೇ ಈಗ ಉದ್ಯಮಿಗಳನ್ನು ಗುರಿಯಾಗಿಸಿ ಕೊಂಡು ವಂಚಕರು ಹೊಸ ಷಡ್ಯಂತ್ರ ಹೆಣೆಯುತ್ತಿದ್ದಾರೆ.

ಉಡುಪಿಯ ಹೊಟೇಲ್‌ವೊಂದರ ಮಾಲಕರಿಗೆ “ನಾಳೆ ಮಧ್ಯಾಹ್ನ 12 ಗಂಟೆಗೆ ಇಂತಿಷ್ಟು ಪ್ಲೇಟ್‌ ತಿಂಡಿ ಬೇಕು’ ಎಂದು ಕರೆ ಮಾಡಿದ ವ್ಯಕ್ತಿಯೊಬ್ಬರು ದರ ವಿಚಾರಿಸಿದ್ದಾರೆ. ಬಳಿಕ ಮುಂಗಡ ಹಣ ಎಷ್ಟು ಪಾವತಿಸಬೇಕು ಎಂದು ಸೂಚಿಸಿದ ಮೇರೆಗೆ ಹೊಟೇಲ್‌ ಮಾಲಕರು 1 ಸಾವಿರ ರೂ. ಹಾಕುವಂತೆ ತಿಳಿಸಿದ್ದರು. ಆದರೆ ಆ ವ್ಯಕ್ತಿ 10 ಸಾವಿರ ರೂ.ಗಳನ್ನು ಹಾಕಿದ್ದ. ಸ್ವಲ್ಪ ಹೊತ್ತಿನ ಬಳಿಕ ಆ ವ್ಯಕ್ತಿ ಕರೆ ಮಾಡಿ ಪ್ರಮಾದವಶತ್‌ 10 ಸಾವಿರ ರೂ.ಗಳನ್ನು ಹಾಕಿದ್ದೇನೆ. 9 ಸಾವಿರ ರೂ. ವಾಪಸ್‌ ಹಾಕುವಂತೆ ತಿಳಿಸಿದ್ದಾನೆ. ಆದರೆ ಇದಕ್ಕೆ ಹೊಟೇಲ್‌ ಮಾಲಕರು ಒಪ್ಪಲಿಲ್ಲ. ನಾಳೆ ಬಂದು ಪಡೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.

ಇದರಿಂದ ಕೆರಳಿದ ಆತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅನುಮಾನಗೊಂಡ ಹೊಟೇಲ್‌ ಮಾಲಕರು ಆ ಸಂದೇಶವನ್ನು ಮತ್ತೊಂದು ಬಾರಿ ಪರಿಶೀಲಿಸಿದಾಗ ಅದು ಕೇವಲ ಸಂದೇಶವಾಗಿತ್ತೆ ವಿವಾ ಇವರ ಖಾತೆಗೆ ಹಣ ಸಂದಾಯವಾಗಿರಲಿಲ್ಲ.

ಹಿಂದಿ ಭಾಷೆ ಮಾತನಾಡುತ್ತಿದ್ದ
ಕರೆ ಮಾಡಿದಾತ ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ. ಮೊದಲಿಗೆ ಯಾರೋ ಸ್ಥಳೀಯ ಕಾರ್ಮಿಕರು ಅಂದುಕೊಂಡಿದ್ದ ಮಾಲಕರಿಗೆ ಅನಂತರ ಆತನ ಮಾತಿನಿಂದ ಇದು ವಂಚಕರ ಕೃತ್ಯ ಎಂಬುವುದು ತಿಳಿಯಿತು. ಅನಂತರ ಆ ಮೊಬೈಲ್‌ ಸಂಖ್ಯೆಯನ್ನು ಪರಿಶೀಲಿಸಿದಾಗ ಅದು ಬಿಹಾರ ಲೊಕೇಷನ್‌ ತೋರಿಸುತ್ತಿತ್ತು.

ಹಿನ್ನೆಲೆ ಪತ್ತೆ ಮಾಡುವರು
ಈ ಹಿಂದೆ ನಡೆದ ಕೆಲವೊಂದು ವಂಚನೆ ಪ್ರಕರಣಗಳಲ್ಲಿ ಬಹುತೇಕ ಎಲ್ಲರಿಗೂ ಒಂದೇ ರೀತಿಯ ಸಂದೇಶಗಳು ಹೋಗುತ್ತಿದ್ದವು. ಆದರೆ ಈಗ ನಾವು ನಡೆಸುವ ಉದ್ಯಮದ ಬಗೆಯನ್ನು ವಂಚಕರು ತಿಳಿದುಕೊಂಡು ಅದಕ್ಕೆ ತಕ್ಕಂತೆ ನಮ್ಮೊಂದಿಗೆ ವ್ಯವಹಾರ ನಡೆಸಿ ಸಂದೇಶ ಕಳುಹಿಸಿ ವಂಚನೆ ನಡೆಸುವ ಅಂಶಗಳು ಬೆಳಕಿಗೆ ಬರುತ್ತಿವೆ. ಹೊಟೇಲ್‌ ಉದ್ಯಮ, ಪೆಟ್ರೋಲ್‌ ಬಂಕ್‌, ಮೆಡಿಕಲ್‌ ಫಾರ್ಮಸಿ, ಬ್ಯಾಂಕ್‌ನಲ್ಲಿ ಉದ್ಯೋಗದಲ್ಲಿರುವವರು ಸಹಿತ ವಿವಿಧ ಉದ್ಯಮ ಹಾಗೂ ಉದ್ಯಮಿಗಳನ್ನು ಟಾರ್ಗೆಟ್‌ ಮಾಡಿಕೊಂಡು ಇಂತಹ ನಕಲಿ ಸಂದೇಶ ಕಳುಹಿಸಿ ವಂಚಿಸುವ ಘಟನೆಗಳೂ ನಡೆಯುತ್ತಿವೆ.

ತರಾತುರಿ ಬೇಡ
ಇಂತಹ ಸಂದೇಶಗಳು ಬಂದಾಗ ಇವುಗಳನ್ನು ಆದಷ್ಟು ನಿರ್ಲಕ್ಷಿಸುವುದೇ ಉತ್ತಮ. ಈ ಹಿಂದೆ ಇಂತಹ ಸಂದೇಶಗಳನ್ನು ಕ್ಲಿಕ್ಕಿಸಿದರೆ ಮಾತ್ರ ಹಣ ವಂಚಕರ ಪಾಲಾಗುತ್ತಿತ್ತು. ಆದರೆ ಈಗ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಎಂಬ ಸಂದೇಶ ಬಂದು ಅನಂತರ ವ್ಯಕ್ತಿಯೊಬ್ಬರು ಕರೆ ಮಾಡಿ ತಪ್ಪಾಗಿ ಬಂದಿದೆ. ಅದನ್ನು ವಾಪಾಸ್‌ ಹಾಕಿ ಅನ್ನುತ್ತಾರೆ. ನಮ್ಮ ಪರಿಚಯದವರು ಅಥವಾ ಸಂಪರ್ಕದಲ್ಲಿರುವವರಾದರೆ ಪರವಾಗಿಲ್ಲ. ಅನ್ಯರು ಈ ರೀತಿ ಕರೆ ಮಾಡಿದರೆ ಮೊದಲಿಗೆ ಆ ಹಣ ನಮ್ಮ ಖಾತೆಗೆ ನಿಜವಾಗಿಯೂ ಜಮೆ ಆಗಿದೆಯಾ ಅಥವಾ ಅವರು ಸುಳ್ಳು ಹೇಳುತ್ತಿದ್ದಾರೆಯಾ ಎಂಬುವುದನ್ನು ಪರಿಶೀಲನೆ ನಡೆಸುವುದು ಉತ್ತಮ ಎಂಬುವುದು ಪೊಲೀಸರ ಅಭಿಪ್ರಾಯ.

ನಮಗೆ ಮಾಹಿತಿ ನೀಡಿ
ಅನಾಮಧೇಯ ಲಿಂಕ್‌ಗಳನ್ನು ಯಾವ ಉದ್ದೇಶಕ್ಕೂ ಕ್ಲಿಕ್‌ ಮಾಡಬಾರದು. ಈಗಾಗಲೇ ಹಲವಾರು ಮಂದಿ ಇಂತಹ ತಪ್ಪುಗಳನ್ನು ಮಾಡಿ ಲಕ್ಷಾಂತರ ರೂ. ಕಳೆದುಕೊಂಡವರಿದ್ದಾರೆ. ಜನರು ಸ್ವಯಂ ಜಾಗೃತರಾಗಿರುವುದೇ ಇದಕ್ಕೆ ಉತ್ತಮ ಪರಿಹಾರವಾಗಿದೆ. ಇಂತಹ ಸಂದೇಶಗಳ ಬಗ್ಗೆ ಅನುಮಾನಗಳು ಇದ್ದರೆ ಸ್ಥಳೀಯ ಪೊಲೀಸ್‌ ಠಾಣೆಗೂ ಮಾಹಿತಿ ನೀಡಬಹುದು.
– ರಾಮಚಂದ್ರ ನಾಯಕ್‌,
ಪೊಲೀಸ್‌ ನಿರೀಕ್ಷಕರು, ಸೆನ್‌ ಠಾಣೆ

ಟಾಪ್ ನ್ಯೂಸ್

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Suilla

Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

3-koratagere

Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.