ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಐದು ಎಕರೆ ಪ್ರದೇಶಗಳಿಗೆ ಬೆಂಕಿ
Team Udayavani, Apr 26, 2017, 10:31 AM IST
ಉಡುಪಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ಹೊಡೆದು ವಿದ್ಯುತ್ ಕಂಬ ತುಂಡಾಗಿ ವಯರ್ ಕೆಳಕ್ಕೆ ಬಿದ್ದ ಪರಿಣಾಮ 5 ಎಕರೆ ಪ್ರದೇಶಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಪೆರ್ಡೂರು ಗ್ರಾ.ಪಂ. ವ್ಯಾಪ್ತಿಯ ಪುತ್ತಿಗೆ ನೀರಿನ ಟ್ಯಾಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದೆ. ಪ್ರಾಣಪಾಯ ಸಂಭವಿಸಿಲ್ಲ.
ಆಗುಂಬೆ ಕಡೆಯಿಂದ ಬರುತ್ತಿದ್ದ ಕಾರು ಸಂಜೆ 4 ಗಂಟೆ ಸುಮಾರಿಗೆ ಪುತ್ತಿಗೆ ಟ್ಯಾಂಕ್ ಬಳಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ವಿದ್ಯುತ್ ಕಂಬ ತುಂಡಾಗಿ ವಯರ್ ನೆಲಕ್ಕೆ ಬಿದ್ದಿದೆ. ಅದರಿಂದ 5 ಎಕರೆ ಸರಧಿಕಾರಿ ಜಾಗಕ್ಕೆ ಬೆಂಕಿ ಹತ್ತಿಕೊಂಡಿದೆ. ಇದು ಸರಕಾರಿ ಜಾಗವಾಗಿದ್ದು, ಯಾವುದೇ ಕೃಷಿ ಇರಲಿಲ್ಲ. ಪರಿಣಾಮ ಪೆರ್ಡೂರು ಗ್ರಾ.ಪಂ. ವ್ಯಾಪ್ತಿಯ ನೀರಿನ ಪೈಪ್‌ಲೈನ್ ಸುಟ್ಟುಹೋಗಿದೆ. ಢಿಕ್ಕಿ ಹೊಡೆದ ಕಾರಿನಲ್ಲಿ ಮೂವರು ಇದ್ದರು.ಕಾರಿನ ಎದುರು ಭಾಗ ಸಂಪೂರ್ಣ ನಜ್ಜುಗುಜ್ಜಾಗಿತ್ತು.ಐದು ಎಕರೆ ಪ್ರದೇಶಗಳಿಗೆ ಬೆಂಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.