ಅಪ್ರಾಪ್ತ ವಯಸ್ಕರಿಗೆ ವಾಹನ ಕೊಟ್ಟರೆ ಕೇಸು ದಾಖಲು
ಬೈಕ್-ಕಾರು ನೀಡುವ ಪೋಷಕರೇ ಎಚ್ಚರ
Team Udayavani, Jan 14, 2021, 8:10 AM IST
ಸಾಂದರ್ಭಿಕ ಚಿತ್ರ
ಕಾರ್ಕಳ: ಅಪ್ರಾಪ್ತ ವಯಸ್ಕರಾಗಿದ್ದು ವಾಹನ ಚಾಲನೆ ಮಾಡುವವರ ವಿರುದ್ಧ ಕಾರ್ಕಳ ನಗರ ಮತ್ತು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, ಸಿಕ್ಕಿಬಿದ್ದರೆ ಪೋಷಕರ ವಿರುದ್ಧವೇ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸುತ್ತಿದ್ದಾರೆ.
ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಚಾಲಕ ಚಲಾಯಿಸುತ್ತಿದ್ದ ಕಾರು ಮತ್ತು ಟೆಂಪೋ ಮಧ್ಯೆ ಜ. 12ರಂದು ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಎರಡೂ ವಾಹನಗಳಿಗೂ ಹಾನಿಯಾಗಿದೆ. ಟೆಂಪೋ ಚಾಲಕ ನಗರ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸಿದ ನಗರ ಠಾಣೆ ಪೊಲೀಸರು ಅಪ್ರಾಪ್ತ ವಯಸ್ಸಿನ ಕಾರು ಚಾಲಕನ ಪೋಷಕರ ವಿರುದ್ಧ ಪ್ರಕರಣ ದಾಖ ಲಿಸಿದ್ದಾರೆ. ಬಳಿಕ ನಗರದಲ್ಲಿ ನಿಯಮ ಉಲ್ಲಂ ಸುವವರ ವಿರುದ್ಧ ಕಠಿನ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.
ನಿಯಮ ಉಲ್ಲಂಘನೆ :
ನಗರದಲ್ಲಿ ಅಪ್ರಾಪ್ತ ವಯಸ್ಕರ ವಾಹನ ಚಾಲನೆ ಹೆಚ್ಚಾಗಿದೆ. ಶಾಲೆ, ಕಾಲೇಜುಗಳು ಆರಂಭವಾಗುತ್ತಿದ್ದಂತೆ ಮಕ್ಕಳು ದ್ವಿಚಕ್ರ, ಲಘು ವಾಹನಗಳಲ್ಲಿ ನಿಯಮ ಉಲ್ಲಂ ಸಿ ಓಡಾಡುವುದು ಕಂಡುಬರುತ್ತಿದೆ. ಒಂದೇ ಬೈಕಲ್ಲಿ ಮೂರ್ನಾಲ್ಕು ಮಂದಿ ಸವಾರಿ ಮಾಡುತ್ತಿರುತ್ತಾರೆ. 12ರಿಂದ 14 ವರ್ಷದೊಳಗಿನ ಮಕ್ಕಳೇ ಇದರಲ್ಲಿ ಹೆಚ್ಚಾಗಿದ್ದಾರೆ. ಹೆಲ್ಮೆಟ್ ಧರಿಸದೆ ನಿಯಮ ಉಲ್ಲಂ ಸಿ ಓಡಾಡುವುದು ಕಾಣಬರುತ್ತದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ನಿರ್ಧರಿಸಿದ್ದಾರೆ.
ಅನಾಹುತಕ್ಕೆ ದಾರಿ :
18 ವರ್ಷಕ್ಕೆ ಮೊದಲು ವಾಹನ ಚಲಾಯಿಸಲು ಕಾನೂನಿನಲ್ಲಿ ಅವಕಾಶವಿಲ್ಲವೆಂದು ತಿಳಿದಿದ್ದರೂ ಹುಶಾರಾಗಿ ಹೋಗಿ ಬರಬೇಕು ಎಂದು ಎಚ್ಚರಿಕೆ ಕೊಟ್ಟು ಗಾಡಿ ಕೊಡುವ ಪೋಷಕರಿದ್ದಾರೆ. ಆದರೆ ಇದರಿಂದ ಸಮಸ್ಯೆಗಳೇ ಹೆಚ್ಚು ಎಂಬುದರ ಅರಿವಿಲ್ಲ. ನಿಯಮಗಳನ್ನು ಪಾಲಿಸದೆ ವಾಹನ ಚಾಲನೆ ಮಾಡುವುದರಿಂದ ಮತ್ತಷ್ಟು ಅಪಾಯ ಸಂಭವಿಸುವ ಸಾಧ್ಯತೆಯಿದೆ.
ಪೊಲೀಸರ ಎಚ್ಚರಿಕೆ ಮಧ್ಯೆಯೂ ಹೆಚ್ಚಳ :
ಮೋಟಾರು ವಾಹನ ಕಾಯಿದೆ ಕಲಂ 184ರಡಿ ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟ ಪೋಷಕರು ಅಥವಾ ವಾಹನ ಮಾಲೀಕರಿಗೆ, ಅಪ್ರಾಪ್ತರಿಗೆ ದಂಡ ವಿಧಿಸಲಾಗುತ್ತಿದೆ. ಮೋಟಾರು ವಾಹನ ಕಾಯ್ದೆಯಂತೆ 50 ಲಕ್ಷ ರೂ ತನಕವೂ ದಂಡ ವಿಧಿಸಲು ಅವಕಾಶವಿದೆ. ಈ ವಿಚಾರದಲ್ಲಿ ಎಷ್ಟೇ ಎಚ್ಚರಿಕೆ ನೀಡಿದರೂ ಘಟನೆಗಳು ಮರುಕಳಿಸುತ್ತಲೇ ಇವೆ.
2019ರಲ್ಲಿ ಸಾಣುರು ಬಳಿ ಅಪ್ರಾಪ್ತ ವಾಹನ ಚಾಲನೆ ಮಾಡಿದ್ದ ಸಂದರ್ಭ ಇಬ್ಬರು ಮೃತಪಟ್ಟ ಘಟನೆ ನಡೆದಿತ್ತು. ಬಳಿಕ ಘಟನೆಗಳು ನಡೆಯದಿದ್ದರೂ, ಅಪ್ರಾಪ್ತರು ವಾಹನ ಚಲಾಯಿಸುವ ಪ್ರಕರಣಗಳು ಏರಿಕೆಯಾಗುತ್ತಿವೆ.
ಲೈಸೆನ್ಸ್ ಹೊಂದದೆ ವಾಹನ ಚಲಾಯಿಸುವುದು ಕಾನೂನು ಬಾಹಿರ. ಚಾಲನೆ ಪರವಾನಿಗೆ ಹೊಂದದಿದ್ದಲ್ಲಿ ರಸ್ತೆ ನಿಯಮಗಳ ಬಗ್ಗೆ ತಿಳಿಯುವುದಿಲ್ಲ. ಮಕ್ಕಳಿಗಿಂತ ಹೆಚ್ಚಾಗಿ ಪೋಷಕರೇ ಅಪ್ರಾಪ್ತ ವಯಸ್ಕರಿಗೆ ವಾಹನ ಕೊಡುವ ವಿಚಾರದಲ್ಲಿ ಜಾಗೃತರಾಗಿರಬೇಕು.–ತೇಜಸ್ವಿ, ಪೊಲೀಸ್ ಉಪ ನಿರೀಕ್ಷಕರು, ಗ್ರಾಮಾಂತರ ಠಾಣೆ ಕಾರ್ಕಳ
ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು ಕಂಡು ಬಂದಲ್ಲಿ ಅವರ ಮೇಲೆ ಮತ್ತು ಹೆತ್ತವರ ಮೇಲೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಕಾಯ್ದೆ ಪ್ರಕಾರ ದಂಡ , ಕೇಸ್ ಹಾಕಲಾಗುವುದು.–ಮಧು ಬಿ.ಇ., ಪೊಲೀಸ್ ಉಪನಿರೀಕ್ಷಕರು, ನಗರ ಪೊಲೀಸ್ ಠಾಣೆ ಕಾರ್ಕಳ
ಬಾಲಕೃಷ್ಣ ಭೀಮಗುಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.