ಗೋಕಳ್ಳತನ ತಡೆಗೆ ನಿರ್ದಾಕ್ಷಿಣ್ಯ ಕ್ರಮ; ಪೊಲೀಸರಿಗೆ ಸಚಿವ ಸುನಿಲ್ ಸೂಚನೆ
ಹತೋಟಿಗೆ 15 ದಿನ ಗಡು
Team Udayavani, Jan 27, 2022, 7:10 AM IST
ಕಾರ್ಕಳ: ಜಿಲ್ಲೆಯಲ್ಲಿ ಗೋಕಳ್ಳತನ ನಿರಂತರವಾಗಿದೆ. ಕೃತ್ಯ ನಡೆಸುವವರು, ಸಹಕರಿಸುವವರನ್ನು ಪತ್ತೆಹಚ್ಚಿ
ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಿ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೋಕಳ್ಳತನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿ ಮಂದಿರದಲ್ಲಿ ಬುಧವಾರ ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಗಳು ಸಹಿತ ವಿವಿಧ ಠಾಣೆಗಳ ಅಧಿಕಾರಿಗಳ ಜತೆ ತುರ್ತು ಸಭೆ ನಡೆಸಿದ ಅವರು ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು.
ರಾತ್ರಿ ಪೊಲೀಸ್ ಗಸ್ತು ಹೆಚ್ಚಿಸಬೇಕು, ಚೆಕ್‌ಪೋಸ್ಟ್ ಗಳಲ್ಲಿ ನಿಗಾ ಇರಿಸಬೇಕು. ಈ ಹಿಂದೆ ಗೊಕಳ್ಳತನದಲ್ಲಿ ಭಾಗಿಯಾದವರನ್ನು ಠಾಣೆಗೆ ಕರೆಸಿ ತನಿಖೆ ನಡೆಸುವುದು, ಶಂಕಿತ ವ್ಯಕ್ತಿಗಳನ್ನು ತೀವ್ರ ತನಿಖೆಗೆ ಒಳಪಡಿಸುವುದು ಇತ್ಯಾದಿಗಳನ್ನು ನಡೆಸುವಂತೆ ಸೂಚಿಸಿದರು.
15 ದಿನಗಳಲ್ಲಿ ಜಿಲ್ಲೆಯಲ್ಲಿ ಗೋಕಳ್ಳತನ ಸಂಪೂರ್ಣ ಹತೋಟಿಗೆ ತರುವಂತೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ಯತ್ನಾಳ್ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ
ರಾಜ್ಯದಲ್ಲಿಯೂ ಕಾಂಗ್ರೆಸ್ ಶೂನ್ಯದತ್ತ
ಮಂಗಳೂರು: ಮಂಗಳೂರಿನಲ್ಲಿ ಸುದ್ದಿಗಾರರ ಮಾತನಾ ಡಿದ ಸಚಿವ ಸುನಿಲ್ ಕುಮಾರ್, ದೇಶದಲ್ಲಿ ಕಾಂಗ್ರೆಸ್ ಖಾಲಿಯಾಗುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿಯೂ ನಿಧಾನವಾಗಿ ಖಾಲಿಯಾಗುತ್ತಿದೆ. ಹೀಗಾಗಿ ಕಾಂಗ್ರೆಸ್‌ಗೆ
ಅಭದ್ರತೆ ಕಾಡುತ್ತಿದೆ. 4 ರಾಜ್ಯ ಉಪ ಚುನಾವಣೆ ಫಲಿತಾಂಶ,ಬಿಬಿಎಂಪಿ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್‌ನ ಸ್ಥಿತಿ ಏನಾಗುತ್ತದೆ ಎಂಬುದು ಗೊತ್ತಾಗಲಿದೆ ಎಂದರು.
ಶೀಘ್ರ ಶಾಸಕರ ಸಭೆ
ದ.ಕ. ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಿನ್ನೆಲೆಯಲ್ಲಿ ಶಾಸಕರು ಮತ್ತಷ್ಟು ಒಟ್ಟಾಗಿ ಒಳ್ಳೆಯ ಕಾರ್ಯ ಮಾಡಲು ಸಿದ್ಧತೆ ಮಾಡಬೇಕಿದೆ. ಹೀಗಾಗಿ ಶಾಸಕರ ದಿನಾಂಕಗಳನ್ನು ನೋಡಿಕೊಂಡು ದ.ಕ. ಜಿಲ್ಲೆಯಲ್ಲಿ ಪರಿಶೀಲನೆ ಸಭೆ ಮಾಡಿ ಮುಂದಿನ ಒಂದೂವರೆ ವರ್ಷಗಳಲ್ಲಿ ಜಿಲ್ಲೆಗೆ ಸರಕಾರದಿಂದ ಆಗಬೇಕಾದ ಕಾರ್ಯಗಳ ಬಗ್ಗೆ ಆದ್ಯತಾ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.