ಜಾನುವಾರು ಸಾಗಾಟ: ಸಾಸ್ತಾನದಲ್ಲಿ 6 ಮಂದಿ ಬಂಧನ

Team Udayavani, Jul 13, 2019, 9:37 AM IST

kota–crime2

ಕೋಟ: ಉತ್ತರ ಕರ್ನಾಟಕ ಭಾಗದಿಂದ ಕಾಸರಗೋಡು ಕಸಾಯಿಖಾನೆಗೆ ಲಾರಿಯಲ್ಲಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಕೋಟ ಪೊಲೀಸರು ಶುಕ್ರವಾರ ಬೆಳಗಿನ ಜಾವ ಸಾಸ್ತಾನ ಟೋಲ್‌ಗೇಟ್‌ ಬಳಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಮಂದಿಯನ್ನು ಬಂಧಿಸಲಾಗಿದೆ.

ಮಂಗಳೂರು ಹಾಗೂ ಕಾಸರ ಗೋಡು ನಿವಾಸಿಗಳಾದ ಶಿವಾನಂದ, ಮಾರುತಿ ನಾರಾಯಣ ನಾಯ್ಕ, ಸೈನುದ್ದೀನ್‌, ಗಣೇಶ್‌, ಹಮೀದ್‌ ಸಿ.ಎಚ್‌. ಹಾಗೂ ಸಮೀರ್‌ ಬಂಧಿತರು. ಲಾರಿಯಲ್ಲಿ 13 ಕೋಣ ಹಾಗೂ 7 ಎಮ್ಮೆಗಳಿದ್ದವು ಎಂದು ಕಾರ್ಯಾಚರಣೆ ನಡೆಸಿದ ಕೋಟ ಎಸ್‌ ಐ ನಿತ್ಯಾನಂದ ಗೌಡ ಅವರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಬೆಳಗಿನ ಜಾವ 5 ಗಂಟೆಗೆ ಟೋಲ್‌ಗೇಟ್‌ನಲ್ಲಿ ಕೋಟ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಪೊಲೀಸರನ್ನು ಕಂಡು ಲಾರಿ ಚಾಲಕನು ವಾಹನ ಸಹಿತ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆಗ ಪೊಲೀಸರು ತಮ್ಮ ಜೀಪನ್ನು ಅಡ್ಡ ಇಟ್ಟು ಪರಾರಿ ಯಾಗದಂತೆ ತಡೆದರು. ಲಾರಿಯ ಜತೆಗೆ ಬಿಳಿ ಬಣ್ಣದ ಟಾಟಾ ಇಂಡಿಕಾ ಕಾರು ಕೂಡ ಇತ್ತು. ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಜಾನುವಾರುಗಳನ್ನು ಕಾಸರಗೋಡಿನ ಅಬ್ದುಲ್ಲ ಎಂಬಾತನಿಗೆ ಮಾರಲೆಂದು ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. 13 ಕೋಣಗಳ ಮೌಲ್ಯ 65,000 ರೂ. ಹಾಗೂ 7 ಎಮ್ಮೆಗೆ 35,000 ರೂಪಾಯಿ ಇರಬಹುದು ಎಂದು ಅಂದಾಜಿಸಲಾಗಿದೆ.

ಮಾರ್ಬಲ್‌ ಮಾದರಿಯಲ್ಲಿ ಸಾಗಾಟ
ಸರಕು ಸಾಗಿಸುವ 12 ಚಕ್ರದ ಲೈಲ್ಯಾಂಡ್‌ ಲಾರಿಯಲ್ಲಿ ಮೇಲ್ಭಾಗದಲ್ಲಿ ಟಾರ್ಪಾಲಿನ್‌ ಮುಚ್ಚಿಕೊಂಡು ಯಾರಿಗೂ ಅನುಮಾನ ಬಾರದಂತೆ ಟೈಲ್ಸ್‌, ಮಾರ್ಬಲ್ಸ್‌ಗಳನ್ನು ಸಾಗಿಸಿದ ರೀತಿಯಲ್ಲಿ ಕೋಣಗಳನ್ನು ಸಾಗಾಟ ಮಾಡಲಾಗುತಿತ್ತು ಹಾಗೂ ವಾಹನದ ನೋಂದಣಿ ನಂಬರ್‌ ಕೂಡ ರಾಜಸ್ಥಾನದಾಗಿತ್ತು. ಲಾರಿಗೆ ಬೆಂಗಾವಲಾಗಿ ಕಾರು ಬರುತ್ತಿದ್ದು, ಅದರಲ್ಲಿ ಇಬ್ಬರಿದ್ದರು. ಜಾನುವಾರುಗಳನ್ನು ಕಳವು ಮಾಡಿ ಸಾಗಿಸುತ್ತಿದ್ದಿರಬೇಕು ಎಂದು ಶಂಕಿಸಲಾಗಿದೆ

ಗೋ ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯಲ್ಲಿ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.