ಮಕ್ಕಳ ಸಾವು : ಮೊಂಬತ್ತಿ ಉರಿಸಿ ಕಾಂಗ್ರೆಸ್‌ನಿಂದ ಶ್ರದ್ಧಾಂಜಲಿ
Team Udayavani, Aug 17, 2017, 7:10 AM IST
ಉಡುಪಿ: ಉತ್ತರ ಪ್ರದೇಶದ ಗೋರಖ್‌ಪುರದ ಬಾಬಾ ರಾಘವದಾಸ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ 79 ಮಕ್ಕಳಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಬುಧವಾರ ಕ್ಲಾಕ್ ಟವರ್ ಮುಂಭಾಗ ಮೊಂಬತ್ತಿ ಉರಿಸಿ, ಕಪ್ಪುಪಟ್ಟಿ ಧರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಬಳಿಕ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವೇರೋನಿಕಾ ಕರ್ನೇಲಿಯೋ ಅವರು, ಸಿಎಂ ಯೋಗಿ ಆದಿತ್ಯನಾಥ್ ಅವರ ಸ್ವಕ್ಷೇತ್ರದಲ್ಲಿಯೇ ಈ ರೀತಿಯ ದುರಂತ ನಡೆದಿರುವುದು ಸರಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಯೋಗಿ ಅವರು ಬ್ರಹ್ಮಚಾರಿ ಆಗಿರುವುದರಿಂದ ಅವರಿಗೆ ಹೆಣ್ಣಿನ, ಸಂಸಾರದ ನೋವಿನ ಅರಿವು ಇಲ್ಲವೆನ್ನಿಸುತ್ತದೆ ಅದಕ್ಕಾಗಿಯೇ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸದೆ ಸಾಮಾನ್ಯವೆನ್ನುವಂತೆ ನೋಡಿರುವುದು. ಪ್ರಧಾನಿ ಸಹಿತ ಎಲ್ಲ ಬಿಜೆಪಿ ನಾಯಕರು ಮೌನ ವಹಿಸಿರುವುದು ಖೇದಕರ ಸಂಗತಿ ಎಂದರು. ಯುವ ಮುಖಂಡ ಅಮೃತ್ ಶೆಣೈ ಮಾತನಾಡಿ ವಿಜ್ಞಾನ- ತಂತ್ರಜ್ಞಾನ, ಬಾಹ್ಯಾಕಾಶದಂತಹ ಕ್ಷೇತ್ರಗಳಲ್ಲಿ ಕ್ಷೀಪ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತದಲ್ಲಿ ನಾವೆಲ್ಲರೂ ತಲೆತಗ್ಗಿಸಬೇಕಾದ ರೀತಿಯಲ್ಲಿ ದುರಂತ ನಡೆದಿದೆ. ಆರೋಗ್ಯ ರಕ್ಷಣೆ ಆ ರಾಜ್ಯದ ಆದ್ಯ ಕರ್ತವ್ಯ.
ಸಿಎಂ ಸ್ವಕ್ಷೇತ್ರದಲ್ಲಿಯೇ ಆಸ್ಪತ್ರೆಯ ಹಣ ಪಾವತಿ ಬಾಕಿಯಿಂದ ಆಕ್ಸಿಜನ್ ಪೂರೈಕೆಗೆ ತೊಂದರೆಯುಂಟಾಗಿರುವುದು ಅವಮಾನಕರ. ಅಮಿತ್ ಷಾ ಹಾಗೂ ಎಲ್ಲ ಬಿಜೆಪಿ ನಾಯಕರು ಮನುಷ್ಯನ ಜೀವವನ್ನು ಹಗುರವಾಗಿ ಪರಿಗಣಿಸಿದೆ. ಇಂತಹ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.
ಶ್ರದ್ಧಾಂಜಲಿ ಸಭೆಯಲ್ಲಿ ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ, ಸದಸ್ಯರಾದ ಜನಾರ್ದನ ಭಂಡಾರ್ಕರ್, ಸೆಲಿನಾ ಕರ್ಕೇಡಾ, ಮಹಿಳಾ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ಡಾ| ಸುನಿತಾ, ನಾಯಕಿಯರಾದ ಸರಳಾ ಕಾಂಚನ್, ಜ್ಯೋತಿ ಹೆಬ್ಟಾರ್, ರೋಶ್ನಿ ಒಲಿವೆರೋ, ಮಮತಾ ಶೆಟ್ಟಿ, ಸುಜಾತ ಆಚಾರ್ಯ, ಗೀತಾ ಕಾಂಚನ್, ಗೋಪಿ ನಾಯ್ಕ, ಮೇರಿ ಡಿಸೋಜ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
MUST WATCH
ಹೊಸ ಸೇರ್ಪಡೆ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.