ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಮಗುವಿನ ಶವ ಕುಬ್ಜಾ ನದಿಯಲ್ಲಿ ಪತ್ತೆ


Team Udayavani, Jul 13, 2019, 5:28 AM IST

1207SIDE2-1-MAGU-NAPATE

ಸಿದ್ದಾಪುರ: ಕುಂದಾಪುರ ತಾಲೂಕಿನ ಶಂಕರನಾರಾಯಣ ಪೊಲೀಸ್‌ ಠಾಣಾ ವ್ಯಾಪ್ತಿಯ ಎಡಮೊಗೆ ಕುಮಿrಬೇರು ಎಂಬಲ್ಲಿ ರಾತ್ರಿ ತಾಯಿ ಜತೆಯಲ್ಲಿ ಮಲಗಿದ್ದ ಎರಡು ಪುಟ್ಟ ಮಕ್ಕಳ ಪೈಕಿ ಒಂದು ವರ್ಷ ಮೂರು ತಿಂಗಳ ಹೆಣ್ಣು ಮಗುವನ್ನು ಗುರುವಾರ ಬೆಳಗ್ಗಿನ ಜಾವ ದುಷ್ಕರ್ಮಿಯೊಬ್ಬ ಕದ್ದೊಯ್ದಿದ್ದಾನೆ ಎನ್ನುವ ಪ್ರಕರಣ ತಿರುವು ಪಡೆದುಕೊಂಡಿದೆ. ಪುಟ್ಟ ಕಂದಮ್ಮ ಸಾನ್ವಿಕಾಳ ಮೃತದೇಹ ಮನೆಯಿಂದ ಸುಮಾರು 2 ಕಿ.ಮೀ. ದೂರದಲ್ಲಿ ಕುಬಾj ನದಿಯ ಪೊದೆಗಳ ನಡುವೆ ಪತ್ತೆಯಾಗಿದ್ದು, ತಾಯಿ ರೇಖಾ ನಾಯ್ಕ ಹೇಳಿಕೆಯಲ್ಲಿಯೇ ಅನುಮಾನ ವ್ಯಕ್ತವಾಗುತ್ತಿರುವುದಾಗಿ ತನಿಖಾಧಿಕಾರಿಗಳು ತಿಳಿಸಿದ್ದಾರೆ.


ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ಅವರು ಡಿವೈಎಸ್ಪಿ ಬಿ. ಪಿ. ದಿನೇಶ್‌ ಕುಮಾರ್‌ ಅವರ ನೇತೃತ್ವದ ತನಿಖಾ ತಂಡ ರಚಿಸಿ, ತನಿಖೆಗೆ ಆದೇಶಿಸಿದ್ದರು.

ಗುರುವಾರ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಹೊಳೆಯಲ್ಲಿ ಹುಡುಕಾಡಿದರೂ ಮೃತ ದೇಹ ಪತ್ತೆಯಾಗಲಿಲ್ಲ. ಸ್ಥಳೀಯ ಯುವಕರು ಈ ಪ್ರಕರಣದ ಬಗ್ಗೆ ಅನುಮಾನಗೊಂಡು ಶುಕ್ರವಾರ ಬೆಳಗ್ಗೆಯಿಂದಲೇ ಕಾರ್ಯಾಚರಣೆಗೆ ಇಳಿದರು. ಮನೆಯಿಂದ ಹೊಳೆಯ ಬದಿಯಲ್ಲಿ ಹುಡುಕಾಟ ಆರಂ ಭಿಸಿದರು. ಸುಮಾರು 2 ಕಿ.ಮೀ.ಹೆಚ್ಚು ದೂರ ಹೊಳೆಯ ಬದಿಯಲ್ಲಿ ಹುಡುಕಾಟ ನಡೆಸುತ್ತ ಸಾಗುತ್ತಿರುವಾಗ, ಕುಬ್ಜಾ ನದಿಯ ಕಲ್ಲುಗುಂಡಿ ತಿರುವಿನಲ್ಲಿ ಪೊದೆಯ ಮಧ್ಯೆ ಮೃತ ದೇಹ ಪತ್ತೆಯಾಗಿದೆ.

ತತ್‌ಕ್ಷಣ ಯುವಕರು ಶಂಕರನಾರಾಯಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಘಟನ ಸ್ಥಳಕ್ಕೆ ಆಗಮಿಸಿ ಮೃತ ದೇಹದ ಮಹಜರು ಮಾಡಿ, ಪೋಸ್ಟ್‌ಮಾರ್ಟಂಗೆ ಮಣಿಪಾಲದ ಆಸ್ಪತ್ರೆಗೆ ರವಾನಿಸಿದ್ದಾರೆ.ವರದಿಯನ್ನು ಆಧರಿಸಿ, ಮುಂದಿನ ತನಿಖೆಯನ್ನು ಕೈಕೊಳ್ಳಲಾಗುವುದು. ಇನ್ನು ಈ ಪ್ರಕರಣದಲ್ಲಿ ತಾಯಿಯ ಪಾತ್ರ ಏನು ಎನ್ನುವುದರ ಮೇಲೆ ಅವರನ್ನು ವಶಕ್ಕೆ ಪಡೆಯುವ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಎಡಿಶನಲ್‌ ಎಸ್ಪಿ ಕುಮಾರ ಚಂದ್ರ ಅವರು ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Kota-Shrinivas

Manipal: ಕೇಂದ್ರ ಸರಕಾರದ ಯೋಜನೆ ಫ‌ಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ

puttige-5

Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.