ಚಿಟ್ಟಾಣಿ ರಾಮಚಂದ್ರ ಹೆಗಡೆ ಇನ್ನಿಲ್ಲ
Team Udayavani, Oct 4, 2017, 8:10 AM IST
ಉಡುಪಿ: ಯಕ್ಷಗಾನದ ಮೇರು ಕಲಾವಿದ, ಪದ್ಮಶ್ರೀ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ (84) ಅವರು ಮಣಿಪಾಲ ಆಸ್ಪತ್ರೆಯಲ್ಲಿ ಅ. 3ರಂದು ರಾತ್ರಿ 9.30ರ ವೇಳೆಗೆ ನಿಧನ ಹೊಂದಿದರು.
ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಸೆ. 29ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನವರಾತ್ರಿ ನಿಮಿತ್ತ ಸೆ. 21ರಿಂದ 4 ದಿನ ಬಂಗಾರಮಕ್ಕಿಯಲ್ಲಿ ನಡೆದ ಯಕ್ಷಗಾನದಲ್ಲಿ ಅವರು ಪಾತ್ರ ನಿರ್ವಹಿಸಿದ್ದರು. ಭೀಷ್ಮನ ತಂದೆ ಶಂತನು ಪಾತ್ರ ಅವರ ಕೊನೆಯ ವೇಷ. 7ನೇ ವರ್ಷದಲ್ಲಿ ರಂಗ ಪ್ರವೇಶ ಮಾಡಿದ ಅವರು 14ರ ಹರೆಯದಲ್ಲೇ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದರು. ಅವರು ಪತ್ನಿ, ಪುತ್ರಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.
ಅವರ ಅಪೇಕ್ಷೆಯಂತೆ ನೇತ್ರಗಳನ್ನು ದಾನ ಮಾಡಲಾಗಿದೆ. ಬುಧವಾರ ಬೆಳಗ್ಗೆ ಮಣಿಪಾಲದಿಂದ 8 ಗಂಟೆಗೆ ಪಾರ್ಥಿವ ಶರೀರವನ್ನು ಹೊನ್ನಾವರದ ಗುಡೇಕೇರಿಗೆ ಕೊಂಡೊಯ್ದು ಅಂತ್ಯಸಂಸ್ಕಾರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.