![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 9, 2017, 2:10 AM IST
ಕುಂದಾಪುರ: ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದರೆ ಸಮಾಜದಲ್ಲಿ ನಡೆಯುವ ಕೆಲವೊಂದು ಅಹಿತಕರ ಘಟನೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಉತ್ತಮ ಸಂಬಂಧ ವಾತಾವರಣ ನಿರ್ಮಾಣವಾದರೆ ಅಪರಾಧ ಚಟುವಟಿಕೆಗಳು ಕಡಿಮೆಯಾಗಲಿವೆ. ಹೀಗಾಗಿ ಸರಕಾರ ಹೊಸ ಬೀಟ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಇದು ಸಹಕಾರಿಯಾಗಲಿದೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಸುಬ್ಬಣ್ಣ ಹೇಳಿದರು.
ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ವತಿಯಿಂದ ಸೋಮವಾರ ಸಂಜೆ ಜರಗಿದ ನಾಗರಿಕರ ಸಭೆಯಲ್ಲಿ ಮಾತನಾಡಿದರು.
ಗಂಗೊಳ್ಳಿಯ ಮುಖ್ಯರಸ್ತೆಯಲ್ಲಿ ಸಂಚರಿಸುವ ಅ ಧಿಕ ಭಾರದ ಶಿಲೆಕಲ್ಲುಗಳನ್ನು ಹೊತ್ತ ಲಾರಿಗಳನ್ನು ನಿಯಂತ್ರಿಸಬೇಕು. ಬಸ್‌ಗಳಲ್ಲಿ ಅತಿ ಹೆಚ್ಚು ಮಕ್ಕಳನ್ನು ಸಾಗಿಸುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಗಂಗೊಳ್ಳಿ ಮುಖ್ಯರಸ್ತೆಯ ಬಸ್ ನಿಲ್ದಾಣಗಳ ಸಮೀಪ ಬಸ್‌ಗಳು ಸರಿಯಾದ ರೀತಿಯಲ್ಲಿ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು. ಗಂಗೊಳ್ಳಿ ಮುಖ್ಯರಸ್ತೆಯಿಂದ ಬಂದರು ಪ್ರದೇಶಕ್ಕೆ ಹೋಗುವ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮಾಡಬೇಕು ಎಂದು ನಾಗರಿಕರು ಒತ್ತಾಯಿಸಿದರು.
ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ, ಗಂಗೊಳ್ಳಿ ಗ್ರಾ.ಪಂ. ಮಾಜಿ ಸದಸ್ಯ ಯೂನಿಸ್ ಸಾಹೇಬ್, ಉಮಾನಾಥ ದೇವಾಡಿಗ, ಬಿ. ರಾಘವೇಂದ್ರ ಪೈ, ಉದ್ಯಮಿ ಜಿ. ವೆಂಕಟೇಶ ನಾಯಕ್, ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೋಹನ ಖಾರ್ವಿ, ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಸುಂದರ ಜಿ., ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಎಚ್.ಎಸ್. ಚಿಕ್ಕಯ್ಯ ಪೂಜಾರಿ ಮೊದಲಾದವರು ಸಲಹೆ ಸೂಚನೆ ನೀಡಿದರು.
ಗಂಗೊಳ್ಳಿ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವೆಂಕಟೇಶ ಗೊಲ್ಲ, ಸಿಬಂದಿಯಾದ ನರಸಿಂಹ, ಸಂಪತ್‌ಕುಮಾರ್, ಆಲಿಂಗರಾಯ ಕಾಟೆ ಹಾಗೂ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.ಠಾಣೆಯ ಸಿಬಂದಿ ಚಂದ್ರಶೇಖರ ಸ್ವಾಗತಿಸಿದರು. ಹೆಡ್ ಕಾನ್‌ಸ್ಟೆಬಲ್ ಆನಂದ ಅವರು ವಂದಿಸಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.