ಇಂದು ಉಡುಪಿ ಜಿಲ್ಲೆಯ ವಿವಿಧ ಭಾಗಕ್ಕೆ ಸಿಎಂ ಭೇಟಿ, ಮಳೆಹಾನಿ ಪರಿಶೀಲನೆ
Team Udayavani, Jul 13, 2022, 7:05 AM IST
ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಉಡುಪಿ ಜಿಲ್ಲೆಯ ಮಳೆಯಿಂದ ಹಾನಿಯಾದ ಪ್ರದೇಶ, ಕಡಲ್ಕೊರೆತದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು.
ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿ, ಅನಂತರ ವಿವಿಧ ಪ್ರದೇಶಗಳ ಪರಿಶೀಲನೆಗೆ ತೆರಳುವರು. ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳ ಭೇಟಿ ನೀಡಿ, ವಾಪಸ್ ಉಡುಪಿ ಜಿಲ್ಲೆಗೆ ಆಗಮಿಸಿ ಮರವಂತೆಯಲ್ಲಿ ಆಗಿರುವ ಕಡಲ್ಕೊರೆತವನ್ನು ವೀಕ್ಷಿಸುವರು. ಬಳಿಕ ಕಾಪು ತಾಲೂಕಿನ ಮೂಳೂರು ತೊಟ್ಟಂನಲ್ಲಿ ಕಡಲ್ಕೊರೆತ ಪ್ರದೇಶ ವೀಕ್ಷಿಸಿ ಮಂಗಳೂರು ಮೂಲಕ ಬೆಂಗಳೂರಿಗೆ ವಾಪಸಾಗುವರು.
ರೈತರಿಗೆ ಪರಿಹಾರದ ಚೆಕ್ ವಿತರಿಸುವ ಜತೆಗೆ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಅನುದಾನ ಘೋಷಿಸುವ ಸಾದ್ಯತೆ ಇದೆ. ಮುಖ್ಯಮಂತ್ರಿಯವರ ಜತೆಗೆ ಕಂದಾಯ ಸಚಿವ ಆರ್. ಅಶೋಕ್, ಕರಾವಳಿಯ ಮೂರು ಜಿಲ್ಲೆಗಳ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸ್ಥಳೀಯ ಶಾಸಕರು ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.