“ಸಹಕಾರಿ ಕ್ಷೇತ್ರ ಬಲಿಷ್ಠಕ್ಕೆ ಹೊಸಪೀಳಿಗೆ ಸೇರ್ಪಡೆ ಅವಶ್ಯ’
Team Udayavani, Nov 15, 2018, 8:44 AM IST
ಉಡುಪಿ: ಸಹಕಾರಿ ಕ್ಷೇತ್ರ ಬಲಿಷ್ಠವಾಗಬೇಕಾದರೆ ಹೊಸ ಪೀಳಿಗೆಯೊಂದಿಗೆ ಮುಂದುವರಿಯಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಆಶ್ರಯದಲ್ಲಿ ಬುಧವಾರ ಉಡುಪಿಯಲ್ಲಿ ನಡೆದ 65ನೇ ಅಖೀಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು. ಸಾಲಮನ್ನಾವನ್ನು ಸರಕಾರಗಳು ಸಹಕಾರಿ ಸಂಸ್ಥೆಗಳ ಮೂಲಕ ಮಾಡಿಸಿಕೊಳ್ಳುತ್ತವೆ. ಆದರೆ ಸಹಕಾರಿ ಕ್ಷೇತ್ರಕ್ಕೆ ನೀಡುವ ಕೊಡುಗೆ ಅತ್ಯಲ್ಪ. ಈ ಕ್ಷೇತ್ರ ಸ್ವಂತ ಶಕ್ತಿಯಿಂದ ಬೆಳೆದಿದೆ ಎಂದರು. ದಿಕ್ಸೂಚಿ ಭಾಷಣ ಮಾಡಿದ ಬೆಂಗಳೂರು ಆರ್‌ಐಸಿಎಂ ನಿವೃತ್ತ ನಿರ್ದೇಶಕ ಡಾ| ಎಸ್.ಎ. ಸಿದ್ಧಾಂತಿ ಅವರು ಸಹಕಾರ ಕ್ಷೇತ್ರದ ಮೂಲಕ ಕೃಷಿ ಉತ್ಪನ್ನ ಮಾರಾಟವಾದರೆ ಯೋಗ್ಯ ಬೆಲೆ ದೊರೆಯಲಿದೆ ಎಂದರು.
ಡಾ| ಎಂ.ಎನ್.ರಾಜೇಂದ್ರ ಕುಮಾರ್ , ಹಿರಿಯ ಸಹಕಾರಿ ಕೃಷ್ಣರಾಜ ಸರಳಾಯ ಅವರನ್ನು ಸಮ್ಮಾನಿಸಲಾಯಿತು.
ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಡಾ| ದೇವಿಪ್ರಸಾದ್ ಶೆಟ್ಟಿ, ರಮೇಶ್ ಶೆಟ್ಟಿ, ಎಸ್.ಕೆ.ಮಂಜುನಾಥ್, ಸಂಜೀವ ಕಾಂಚನ್, ಎಲ್.ಉಮಾನಾಥ, ಪ್ರವೀಣ್ ಬಿ.ನಾಯಕ್, ಚಂದ್ರಪ್ರತಿಮಾ ಎಂ.ಜೆ., ಪುರುಷೋತ್ತಮ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ಮಾಸ್ ನಿರ್ದೇಶಕ ಶಿವಾಜಿ ಸುವರ್ಣ, ಅರುಣ್ ಕುಮಾರ್ ಎಸ್.ವಿ, ಪುರುಷೋತ್ತಮ ಎಸ್.ಪಿ ಉಪಸ್ಥಿತರಿದ್ದರು. ನವೀನ್ ಕೆ. ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.