ಉಡುಪಿ/ಮಂಗಳೂರು: ಕಾಲೇಜು ಬಂದ್‌ಗೆ ಕರಾವಳಿಯಲ್ಲಿ ಕ್ಷೀಣ ಪ್ರತಿಕ್ರಿಯೆ
Team Udayavani, Dec 18, 2022, 7:00 AM IST
ಉಡುಪಿ/ಮಂಗಳೂರು : ವಿಶ್ವವಿದ್ಯಾಲಯಗಳಲ್ಲಿ ಫಲಿತಾಂಶ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಶನಿವಾರ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳ ಬಂದ್‌ಗೆ ನೀಡಿದ್ದ ಕರೆಗೆ ಕ್ಷೀಣ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೈಂದೂರು, ಶಂಕರನಾರಾ ಯಣದಲ್ಲಿ 2 ಕಾಲೇಜು ಹಾಗೂ ಬ್ಯಾರೀಸ್ ಡಿಗ್ರಿ ಕಾಲೇಜು ಮಾತ್ರ ಬಂದ್ ಮಾಡಲಾಗಿತ್ತು. ಉಳಿದ ಕಾಲೇಜುಗಳು ಎಂದಿ ನಂತೆಯೇ ನಡೆದವು. ಜಿಲ್ಲೆಯ ಎಲ್ಲ ಕಾಲೇಜು ಗಳಿಗೆ ತೆರಳಿ ವಿದ್ಯಾರ್ಥಿ ಗಳಿಂದ ಸಹಿ ಸಂಗ್ರಹಿಸುವ ಅಭಿಯಾನಕ್ಕೆ ಸೋಮವಾರದಿಂದ ಚಾಲನೆ ನೀಡಲಾಗುವುದು. ಅನಂತರ ಇದನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಪ್ರತಿಭಟನೆ
ರಾಜ್ಯ ಮಟ್ಟದಲ್ಲಿ ಕಾಲೇಜು ಬಂದ್‌ಗೆ ಕರೆ ನೀಡಿರುವ ಎನ್‌ಎಸ್‌ಯುಐ ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿತು.
ಪದವಿ ಪರೀಕ್ಷೆ ಮುಗಿದು ಆರೇಳು ತಿಂಗಳು ಕಳೆದರೂ ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಇದರಿಂದಾಗಿ ಮುಂದಿನ ಸೆಮಿಸ್ಟರ್ ಕಲಿಕೆಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸರಕಾರ ಘೋಷಿಸಿರುವ ಉಚಿತ ಬಸ್ ಪಾಸ್ ಇನ್ನೂ ಜಾರಿಯಾಗಿಲ್ಲ. ಈಗ ಅವೈಜ್ಞಾನಿಕವಾಗಿ ಎನ್‌ಇಪಿಯನ್ನು ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಪ್ರತಿಭಟನಕಾರರನ್ನು ಉದ್ದೇಶಿಸಿ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ಸವಾದ್ ಸುಳ್ಯ ಹೇಳಿದರು.
ಇದನ್ನೂ ಓದಿ :ಭಿಕ್ಷಾಟನೆ ತಡೆ ಕಾರ್ಯಾಚರಣೆ: 13 ಭಿಕ್ಷುಕರು ಪುನರ್ವಸತಿ ಕೇಂದ್ರಕ್ಕೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.