ಕೋವಿಡ್‌ ಬಳಿಕ ಹಲವರ ಪದವಿ ಶಿಕ್ಷಣ ಮೊಟಕು : ಕಾಲೇಜುಗಳಲ್ಲೂ  ಡ್ರಾಪ್‌ಔಟ್‌!


Team Udayavani, Feb 4, 2022, 7:30 AM IST

ಕೋವಿಡ್‌ ಬಳಿಕ ಹಲವರ ಪದವಿ ಶಿಕ್ಷಣ ಮೊಟಕು : ಕಾಲೇಜುಗಳಲ್ಲೂ  ಡ್ರಾಪ್‌ಔಟ್‌!

ಸಾಂದರ್ಭಿಕ ಚಿತ್ರ

ಉಡುಪಿ: ಕೋವಿಡ್‌ ಲಾಕ್‌ಡೌನ್‌, ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದ ಕಾಲೇಜು ಬಿಟ್ಟ ವಿದ್ಯಾರ್ಥಿಗಳಲ್ಲಿ ಹಲವರು ಮತ್ತೆ ಕಾಲೇಜಿಗೆ ದಾಖಲಾಗಿದ್ದರೆ, ಕೆಲವರು ಪದವಿ ಶಿಕ್ಷಣವನ್ನೇ ಅರ್ಧಕ್ಕೆ ಮೊಟಕು ಗೊಳಿಸಿಕೊಂಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 70 ಸರಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳಿವೆ. 3,80,061 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮೂರು ಜಿಲ್ಲೆಗಳಲ್ಲಿ ಶೇ. 5ರಿಂದ ಶೇ. 6ರಷ್ಟು ವಿದ್ಯಾರ್ಥಿಗಳು ಇನ್ನೂ ಆನ್‌ಲೈನ್‌ ತರಗತಿ ಮತ್ತಿತರ ನೆಪವೊಡ್ಡಿ ಕಾಲೇಜು ಶಿಕ್ಷಣದಿಂದ ದೂರವಿದ್ದಾರೆ.

ಆನ್‌ಲೈನ್‌ ಅಥವಾ ಭೌತಿಕ ತರಗತಿಯಲ್ಲಿ ಹಾಜರಾತಿ ಕಡ್ಡಾಯ ಮಾಡಿದ್ದರೂ ಕೆಲವು ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಲಾಗಿನ್‌ ಆಗುತ್ತಾರೆ. ಆದರೆ ತರಗತಿಯಲ್ಲಿ ಸಕ್ರಿಯ ವಾಗಿರದೆ ತಮ್ಮದೇ ಆದ ಬೇರೆ ಕಾರ್ಯದಲ್ಲಿ ತಲ್ಲೀನರಾಗಿರುತ್ತಾರೆ. ಅಂತಹ ವಿದ್ಯಾರ್ಥ ಗಳ ಮೇಲೆ ಹೆಚ್ಚು ನಿಗಾ ಇರಿ ಸಲು ಸಾಧ್ಯವಾಗುವುದಿಲ್ಲ. ಆನ್‌ಲೈನ್‌ ತರಗತಿಯನ್ನು ನಿತ್ಯವೂ ಪೂರ್ಣ ಪ್ರಮಾಣದಲ್ಲಿ ಮಾಡಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಲಭ್ಯತೆ ಆಧಾರದಲ್ಲಿ ಪಾಠ ಮಾಡು ತ್ತೇವೆ. ಅದಕ್ಕೂ ಆಸಕ್ತಿ ವಹಿಸಿ ಬರುವ ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆಯಿದೆ ಎಂದು ಹಿರಿಯ ಪ್ರಾಧ್ಯಾಪಕ ರೊಬ್ಬರು ಮಾಹಿತಿ ನೀಡಿ ದ್ದಾರೆ.

ಸರಕಾರಿ ಸೌಲಭ್ಯ ವಿದ್ಯಾರ್ಥಿಗಳ ಬಳಿ:

ಸರಕಾರಿ ಪದವಿ ಕಾಲೇಜುಗಳ ಅರ್ಹ ವಿದ್ಯಾರ್ಥಿ ಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಯಿಂದ ಲ್ಯಾಪ್‌ಟಾಪ್‌-ಪಿಸಿ ಮತ್ತು ಟ್ಯಾಬ್‌ ವಿತರಿಸ ಲಾಗಿತ್ತು. ಅರ್ಧಕ್ಕೆ ಪದವಿ ಶಿಕ್ಷಣ ಮೊಟಕುಗೊಳಿಸಿದ ಹೆಚ್ಚಿನ ವಿದ್ಯಾರ್ಥಿಗಳು ಸರಕಾರ ದಿಂದ ಸಿಕ್ಕಿರುವ ಸೌಲಭ್ಯವನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.  ಆಯಾ ಕಾಲೇಜು ವ್ಯಾಪ್ತಿಯಲ್ಲಿ ಡ್ರಾಪ್‌ಔಟ್‌ ಆಗಿರುವ ವಿದ್ಯಾರ್ಥಿಗಳ ಪತ್ತೆ ಕಾರ್ಯ ನಡೆದಿದೆ. ಆದರೆ ಪೂರ್ಣ   ಮಾಹಿತಿ ಸಿಕ್ಕಿಲ್ಲ.

ಅವಕಾಶ ನೀಡಿತ್ತು:

ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಹಲವು ಬಾರಿ ದಾಖಲಾತಿ ಪ್ರಕ್ರಿಯೆಯ ದಿನಾಂಕವನ್ನು ವಿಸ್ತರಿಸ ಲಾಗಿತ್ತು.  ಅರ್ಧಕ್ಕೆ ಕಾಲೇಜು ಬಿಟ್ಟ ವಿದ್ಯಾರ್ಥಿಗಳ ಮಾಹಿತಿಯನ್ನು ಆಯಾ ಕಾಲೇಜುಗಳ  ಮೂಲಕ ಸಂಗ್ರಹಿಸಿ, ಅವರನ್ನು ಸಂಪರ್ಕಿಸುವ ಕಾರ್ಯ ಮಾಡಿದ್ದೇವೆ. ವಿದ್ಯಾರ್ಥಿ ಗಳು ಪುನಃ ಕಾಲೇಜಿಗೆ ಬರಲು ಒಪ್ಪುತ್ತಿಲ್ಲ. ಕುಟುಂಬದ ಸದಸ್ಯರ ಮೂಲಕ ಮನವೊಲಿಸುವ ಕಾರ್ಯ ಮಾಡಿದ್ದೇವೆ ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಡ್ರಾಪ್‌ಔಟ್‌ ಕಾರಣ :

ಕೊರೊನಾ ಸಂದರ್ಭದ ಆರ್ಥಿಕ ಸಂಕಷ್ಟದಿಂದ ಸ್ಥಳೀಯವಾಗಿ ಲಭ್ಯವಾದ ಉದ್ಯೋಗಕ್ಕೆ ಸೇರಿಕೊಂಡಿ ರುವುದು, ಹೊರ ಜಿಲ್ಲೆಗಳಿಗೆ ಉದ್ಯೋಗಕ್ಕೆ ಹೋಗಿರುವುದು, ಆನ್‌ಲೈನ್‌ ತರಗತಿ ಪರಿಣಾಮಕಾರಿಯಾಗಿ ನಡೆಯದೆ ಇರುವುದು, ಆನ್‌ಲೈನ್‌ ಅಥವಾ ಆಫ್ಲೈನ್‌ ತರಗತಿ ಆಯ್ಕೆ ಅವಕಾಶ ನೀಡಿರುವುದು, ಆನ್‌ಲೈನ್‌ ತರಗತಿಗೆ ಇಲಾಖೆಯಿಂದ ಸಿದ್ಧಪಡಿಸಿದ ತಂತ್ರಾಂಶ ಗ್ರಾಮೀಣ ಭಾಗದಲ್ಲಿ ಪೂರ್ಣಪ್ರಮಾಣದಲ್ಲಿ ಬಳಕೆಗೆ ಲಭ್ಯವಾಗದೆ ಇರುವುದು, ಕುಟುಂಬದ ಆರ್ಥಿಕ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಪದವಿ ಶಿಕ್ಷಣ ಮೊಟಕುಗೊಳಿಸಿದ್ದಾರೆ.

ಎಲ್ಲಿ, ಎಷ್ಟು ಕಾಲೇಜು? :

ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ಪ್ರಾದೇಶಿಕ ಕೇಂದ್ರ ವ್ಯಾಪ್ತಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಿವೆ. ಒಟ್ಟು 70 ಕಾಲೇಜು ಗಳಿದ್ದು, ಇದ ರಲ್ಲಿ 37 ಸರಕಾರಿ, 33 ಖಾಸಗಿ ಅನು ದಾನಿತ ಕಾಲೇಜುಗಳು. 3,80,061 ವಿದ್ಯಾರ್ಥಿ ಗಳಿದ್ದಾರೆ. ದಕ್ಷಿಣ ಕನ್ನಡದಲ್ಲಿ ತಲಾ 19 ಸರಕಾರಿ, ಖಾಸಗಿ ಅನುದಾನಿತ ಕಾಲೇಜುಗಳು; ಉಡುಪಿಯಲ್ಲಿ 12 ಸರಕಾರಿ, 13 ಖಾಸಗಿ ಅನುದಾನಿತ ಕಾಲೇಜು, ಕೊಡಗಿನಲ್ಲಿ 6 ಸರಕಾರಿ ಹಾಗೂ 1 ಖಾಸಗಿ ಅನುದಾನಿತ ಕಾಲೇಜಿದೆ.

ಇಲಾಖೆಯ ನಿರ್ದೇ ಶನದಂತೆ ವಿದ್ಯಾ ಭ್ಯಾಸ ವನ್ನು ಅರ್ಧಕ್ಕೆ ಮೊಟಕುಗೊಳಿಸಿರುವ ವಿದ್ಯಾರ್ಥಿಗಳು ಪುನಃ ದಾಖ ಲಾಗಲು ಅವಕಾಶ ನೀಡಲಾಗಿತ್ತು. ಆಯಾ ಕಾಲೇಜುಗಳ ಮೂಲಕ ಅಂತಹ ವಿದ್ಯಾರ್ಥಿ ಗಳನ್ನು ಪತ್ತೆ ಹಚ್ಚುವ ಕಾರ್ಯವೂ ನಡೆದಿದೆ.ಶ್ರೀಧರಬಾಬು,ಜಂಟಿ ನಿರ್ದೇಶಕ, ಮಂಗಳೂರು ಪ್ರಾದೇಶಿಕ ಕೇಂದ್ರ

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.