ಭೂಗತರಾಗಿಯೇ ಕಮ್ಯುನಿಷ್ಟರ ಸ್ವಾತಂತ್ರ್ಯಹೋರಾಟ: ಪ್ರಕಾಶ್
Team Udayavani, Aug 12, 2017, 7:10 AM IST
ಕುಂದಾಪುರ: ದೇಶದ ಸ್ವಾತಂತ್ರ್ಯಗಳಿಸಲು ಹಿಂದೂಗಳು ಮತ್ತು ಮುಸಲ್ಮಾನರು ಏಕತೆಯಿಂದ ಹೋರಾಡಿದರು. ಬ್ರಿಟಿಷರು ಜನತೆಯ ಐಕ್ಯ ಹೋರಾಟ ತಡೆಯುವ ವ್ಯರ್ಥ ಪ್ರಯತ್ನ ಮಾಡಿದರು. ಸಂಪೂರ್ಣ ಸ್ವಾತಂತ್ರ್ಯದ ಘೋಷಣೆ ಕರೆಕೊಟ್ಟ ಕಮ್ಯೂನಿಷ್ಟ್ ಪಕ್ಷವನ್ನು ಅದೇ ಬ್ರಿಟೀಷರು ನಿಷೇಧಿಸಿದರು. ಭೂಗತರಾಗಿಯೇ ಕಮ್ಯುನಿಷ್ಟರು ಸ್ವಾತಂತ್ರ್ಯ ಹೋರಾಟ ನಡೆಸಿದರು ಎಂದು ಸಿಪಿಐ(ಎಂ) ರಾಜ್ಯ ಮುಖಂಡ ಕೆ.ಪ್ರಕಾಶ್ ಹೇಳಿದರು.
ಅವರು ಹಂಚು ಕಾರ್ಮಿಕ ಭವನದಲ್ಲಿ ಸಿಪಿಐ (ಎಂ) ಪಕ್ಷದ ಆಶ್ರಯದಲ್ಲಿ ನಡೆದ “ಬ್ರಿಟೀಷರೇ ಭಾರತ ಬಿಟ್ಟು ತೊಲಗಿ’ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಚಳವಳಿಯ ಸಂದರ್ಭದಲ್ಲಿ ಬಂಗಾಲದಲ್ಲಿ ಜನಸಂಘದ ಸ್ಥಾಪಕ ಮುಖಂಡ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಹಿಂದೂ ಮಹಾಸಭಾದ ಭಾಗವಾಗಿ ಮುಸ್ಲಿಂ ಲೀಗ್ ಜೊತೆ ಮೈತ್ರಿ ಸರಕಾರದಲ್ಲಿ ಅರ್ಥ ಮಂತ್ರಿಯಾಗಿದ್ದರು. ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ಬ್ರಿಟಿಷರಿಗೆ ಸಹಕರಿಸಬೇಕು ಎಂದು ಕರೆ ನೀಡಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಆರ್.ಎಸ್. ಎಸ್.ನ ಪಾತ್ರ ಹಲವಾರು ಸಂದರ್ಭಗಳಲ್ಲಿ ಬ್ರಿಟೀಷರಿಗೆ ವಿಧೇಯಕನಾಗಿರುವುದು ಸ್ಪಷ್ಟವಾಗಿ ಕಾಣಬಹುದಾಗಿದೆ. ಕಮ್ಯುನಿಷ್ಟರು ಅಂಡಮಾನ್ ಜೈಲಲ್ಲಿ ಬಂ ಧಿಯಾಗಿ ತೀವ್ರ ಚಿತ್ರಹಿಂಸೆ ಅನುಭವಿಸಿದರೂ ಕೊನೆವರೆಗೂ ದೇಶಕ್ಕಾಗಿ ಹೋರಾಡಿದರು ಎಂದರು.
ಸಿಪಿಎಂ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಶಂಕರ್ , ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮಾತನಾಡಿದರು.
ಜಿ. ಎನ್. ನಾಗರಾಜ್ ಅವರು “ತೊಲಗು ತೊಲಗಾಚೆ ಪರದೇಶಿ ಸುಲಿಗೆಗಾರ’ ಪುಸ್ತಕ ಬಿಡುಗಡೆ ಮಾಡಲಾಯಿತು. ಸುರೇಶ್ ಕಲ್ಲಾಗರ ಸ್ವಾಗತಿಸಿ, ಎಚ್. ನರಸಿಂಹ ವಂದಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.