ಸಂಪೂರ್ಣ ಹದಗೆಟ್ಟ ಕುಕ್ಕುಜೆ -ಮೂಡಬೆಟ್ಟು ರಸ್ತೆ


Team Udayavani, Jul 7, 2019, 5:58 AM IST

road

ಅಜೆಕಾರು: ಕಡ್ತಲ ಗ್ರಾ. ಪಂ. ವ್ಯಾಪ್ತಿಯ ದೊಂಡೇರಂಗಡಿ ಪೇಟೆಯಿಂದ ಮೂಡಬೆಟ್ಟು ಸಂಪರ್ಕಿಸುವ ಕುಕ್ಕುಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಆವೃತವಾಗಿ ಕೆಸರುಮಯ ವಾಗಿದ್ದು ಸಂಚಾರ ನಡೆಸುವುದೇ ದುಸ್ತರವಾಗಿದೆ.

ದೊಂಡೇರಂಗಡಿ ಪೇಟೆಯಿಂದ – ಮೂಡ ಬೆಟ್ಟುವರೆಗೆ ದಶಕಗಳ ಹಿಂದೆ ಡಾಮಾರು ಹಾಕಲಾಗಿದ್ದು ಅನಂತರ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸವಾರರು ಸಂಕಷ್ಟಪಡುವಂತಾಗಿದೆ.

ಹೊಂಡಗುಂಡಿ

ಸುಮಾರು 5 ಕಿ.ಮೀ. ಉದ್ದದ ರಸ್ತೆ ಇದಾಗಿದ್ದು ದೊಂಡೇರಂಗಡಿ ಪೇಟೆಯಿಂದ ಹಡ್ಜೆ ತೋಡುವರೆಗಿನ 2 ಕಿ.ಮೀ.ಯಷ್ಟು ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಆವೃತಗೊಂಡಿತ್ತು. ಕಳೆದ ಮಾರ್ಚ್‌ ತಿಂಗಳಿನಲ್ಲಿ ಕುಕ್ಕುಜೆ ಕಾಲೇಜುವರೆಗೆ ಸುಮಾರು 1 ಕಿ.ಮೀ.ಯಷ್ಟು ಭಾಗಕ್ಕೆ ತೇಪೆ ಕಾರ್ಯ ನಡೆಸಲಾಗಿತ್ತಾದರೂ ಈಗ ಮತ್ತೆ ಹೊಂಡ ಗುಂಡಿಗಳು ನಿರ್ಮಾಣವಾಗಿವೆ.

ಈ ರಸ್ತೆಯ ಹಡ್ಜೆ ತೋಡು ಎಂಬಲ್ಲಿ ಕೆಲ ವರ್ಷಗಳ ಹಿಂದೆ ಮೋರಿ ನಿರ್ಮಾಣವಾಗಿದ್ದು ಆ ಪ್ರದೇಶದಲ್ಲಿ ಡಾಮರುಗೊಳ್ಳದೆ ಇರುವುದರಿಂದ ರಸ್ತೆ ಕೆಸರಿನಿಂದ ಕೂಡಿದ್ದು ಸಂಪೂರ್ಣ ರಸ್ತೆ ಡಾಮಾರು ಎದ್ದು ಜಲ್ಲಿಕಲ್ಲುಗಳಿಂದ ಆವೃತವಾಗಿವೆ.

ಪ್ರಮುಖ ರಸ್ತೆ

ಈ ರಸ್ತೆ ಮೂಡಬೆಟ್ಟು, ಹಾಲಕ್ಕಿ, ಶೀರೂರು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು ಪ್ರತೀನಿತ್ಯ ಕುಕ್ಕುಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಜೆ ಸರಕಾರಿ ಪ್ರೌಢ ಶಾಲೆ, ಮೂಡಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಕ್ಕುಜೆ ಸ.ಪ.ಪೂ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸಂಚರಿಸುತ್ತಿದ್ದು ಕಾಲ್ನಡಿಗೆಯಲ್ಲಿ ತೆರಳುವುದೂ ಕಷ್ಟಸಾಧ್ಯವಾಗಿದೆ.

ಹಲವು ವರ್ಷಗಳಿಂದ ರಸ್ತೆ ದುರಸ್ತಿಪಡಿಸುವಂತೆ ಇಲಾಖಾಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ರಸ್ತೆ ಅಭಿವೃದ್ಧಿಗೊಳ್ಳದೆ ಪ್ರತೀ ವರ್ಷ ಮಳೆಗಾಲದಲ್ಲಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ರಸ್ತೆಯಲ್ಲೇ ಹರಿಯುವ ನೀರು

ಮಳೆ ನೀರು ಸರಾಗವಾಗಿ ಹರಿದು ಹೋಗಲು ರಸ್ತೆಯ ಇಕ್ಕೆಲಗಳಲ್ಲಿ ತೋಡು ಇಲ್ಲದೆ ಇರುವುದರಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದ್ದು ರಸ್ತೆಯಲ್ಲಿ ಇನ್ನಷ್ಟು ಹೊಂಡಗುಂಡಿಗಳು ನಿರ್ಮಾಣಗೊಂಡು ಅಪಘಾತ ಉಂಟಾಗುತ್ತಿದೆ.

ಕೂಡಲೇ ರಸ್ತೆ ದುರಸ್ತಿ

ಈ ರಸ್ತೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ನಿಧಿ ಯೋಜನೆಯಡಿ ಶಾಸಕ ಸುನಿಲ್ ಕುಮಾರ್‌ರವರು ಕಳೆದ ವರ್ಷ 2 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ರಾಜ್ಯ ಸರಕಾರ ಟೆಂಡರ್‌ ಪ್ರಕ್ರಿಯೆ ನಡೆಸದ ಕಾರಣ ರಸ್ತೆ ಅಭಿವೃದ್ಧಿಗೊಂಡಿಲ್ಲ. ಇದೀಗ ಪ್ರದಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ 2.6 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ. ಕೂಡಲೇ ರಸ್ತೆ ದುರಸ್ತಿಪಡಿಸಲಾಗುವುದು. -ಜ್ಯೋತಿಹರೀಶ್‌, ಜಿ.ಪಂ. ಸದಸ್ಯರು

ಟಾಪ್ ನ್ಯೂಸ್

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Parameshwar

Vikram Gowda ಎನ್‌ಕೌಂಟರ್‌; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ

13

Udupi: 10 ತಿಂಗಳಲ್ಲಿ 228 ಕಳವು ಕೇಸ್‌!

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Parameshwar

Vikram Gowda ಎನ್‌ಕೌಂಟರ್‌; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.