ಪುನೀತ್ ರಾಜ್ ಕುಮಾರ್ ಅಗಲಿಕೆ ಕನ್ನಡ ನಾಡಿಗೆ ತುಂಬಲಾರದ ನಷ್ಟ : ವಿನಯಕುಮಾರ್ ಸೊರಕೆ


Team Udayavani, Oct 31, 2021, 12:44 PM IST

ಪುನೀತ್ ರಾಜ್ ಕುಮಾರ್ ಅಗಲಿಕೆ ಕನ್ನಡ ನಾಡಿಗೆ ತುಂಬಲಾರದ ನಷ್ಟ : ವಿನಯಕುಮಾರ್ ಸೊರಕೆ

ಕಾಪು: ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಯಲ್ಲಿ ವರನಟ ಡಾ. ರಾಜ್ ಕುಮಾರ್ ಕುಟುಂಬದ ಕೊಡುಗೆ ಅಪಾರವಾಗಿದೆ. ಅವರ ಕುಟುಂಬದ ಕೊಂಡಿ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲುವಿಕೆ ಕನ್ನಡ ನಾಡಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ರವಿವಾರ ಟೀಂ ಮೋದಿ ಕಾಪು ವಲಯ ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕಾಪು ಪೇಟೆಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಶ್ರದ್ಧಾಂಜಲಿ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು.

ಪವರ್ ಸ್ಟಾರ್ ಖ್ಯಾತಿಯ ಪುನೀತ್ ರಾಜ್ ಕುಮಾರ್ ಅವರು ತನ್ನ ಅದ್ಭುತ ಮತ್ತು ಅಪ್ರತಿಮ ನಟನಾ ಪ್ರತಿಭೆಯ ಜೊತೆಗೆ ಸೇವಾ ಮನೋಭಾವ ಮತ್ತು ಸಮಾಜಮುಖೀ ಚಿಂತನೆಯ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಸಹಸ್ರಾರು ವಿದ್ಯಾರ್ಥಿಗಳ, ವೃದ್ಧರ, ಅನಾಥರ ಪಾಲಿಗೆ ದಾರಿದೀಪವಾಗಿ, ಅತೀ ಕಿರಿಯ ವಯಸ್ಸಿನಲ್ಲಿಯೇ ಅಪಾರ ಜನಪ್ರಿಯತೆಯನ್ನು ಗಳಿಸಿದ್ದ ಒಬ್ಬ ಮೃದುಭಾಷಿ, ವಿಶಾಲ ಹೃದಯಿ, ಜನಸ್ನೇಹಿ ವ್ಯಕ್ತಿಯನ್ನು ಕಳೆದು ಕೊಂಡಿರುವುದು ಚಿತ್ರರಂಗ ಮಾತ್ರವಲ್ಲದೇ ಸಂಪೂರ್ಣ ಕನ್ನಡ ನಾಡಿನ ಜನತೆಯ ದೌರ್ಭಾಗ್ಯವಾಗಿದೆ ಎಂದರು.

ತಾನು ಶಾಸಕನಾಗಿದ್ದಾಗಿನಿಂದಲೂ ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಕುಟುಂಬದೊಂದಿಗೆ ಆತ್ಮೀಯ ಸಂಬಂಧವನ್ನು ಇಟ್ಟುಕೊಂಡು ಬಂದಿದ್ದು ಈಗಲೂ ಅದು ಮುಂದುವರಿದಿದೆ. ಕೆಲ ದಿನಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರೊಂದಿಗೆ ದೂರವಾಣಿಯ ಮೂಲಕ ಮಾತನಾಡಿದ್ದು, ಅವರ ಮಾತುಗಳು ಈಗಲೂ ಮರುಕಳಿಸದಂತೆ ಭಾಸವಾಗುತ್ತಿದೆ. ಅವರು ಬಾಕಿಯುಳಿಸಿ ಹೋದ ಕಾರ್ಯಗಳನ್ನು ಅವರ ಕುಟುಂಬ ಮತ್ತು ಅಭಿಮಾನಿಗಳು ಜೊತೆ ಸೇರಿ ಪೂರ್ಣಗೊಳಿಸಬೇಕಾದ ಅನಿವಾರ್ಯತೆಯಿದೆ ಎಂದು ಹೇಳಿದರು.

ಟೀಂ ಮೋದಿ ಕಾಪು ವಲಯದ ಅಧ್ಯಕ್ಷ ಯೋಗೀಶ್ ಪೂಜಾರಿ ಕೈಪುಂಜಾಲು ಅವರು ದೀಪ ಬೆಳಗಿಸಿ, ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ‌ ಸಲ್ಲಿಸಿ, ನುಡಿ ನಮನ ಸಲ್ಲಿಸಿದರು.

ಸಂಘಟಕರಾದ ಅಶ್ವಿನ್ ಪುತ್ರನ್ˌ ಜಿತೇಂದ್ರ ಕೋಟ್ಯಾನ್ ಸತೀಶ್ ಕುಮಾರ್ˌ ನಿತೇಶ್ ಕಾಂಚನ್ˌ ರಾಹುಲ್ ರಾವ್ˌ ಕೃಷ್ಣˌ ಹಾಗೂ ಸಂಘಟನೆಯ ಕಾರ್ಯಕರ್ತರು, ಸಾರ್ವಜನಿಕರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

ಉಡುಪಿ: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

Udupi: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.