![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 14, 2023, 4:36 PM IST
ಉಡುಪಿ: ಯರ್ಯಾರ ಮನೆಲಿ ದುಡ್ಡು ಸಿಕ್ಕಿದ್ರೆ ಕಾಂಗ್ರೆಸ್‌ಗೆ ಏನು ಸಂಬಂಧ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಪ್ರಶ್ನಿಸಿದರು.
ಶನಿವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ಆರೋಪಗಳಲ್ಲಿ ಹುರುಳಿಲ್ಲ. ಇವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಬಿಜೆಪಿಯವರು ಅಧಿಕಾರ ಕಳೆದುಕೊಂಡು ಕಂಗಾಲಾಗಿದ್ದಾರೆ. ಕಾಂಗ್ರೆಸ್‌ನ ಜನಪರ ಯೋಜನೆ, ಒಳ್ಳೆಯ ಆಡಳಿತ ಅವರಿಂದ ಸಹಿಸಲು ಆಗುತ್ತಿಲ್ಲ. ಎಲ್ಲಿಯೋ ಹಣ ಸಿಕ್ಕಿದ್ದಕ್ಕೆ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಇದನ್ನು ಕೇಂದ್ರದ ತನಿಖಾ ಸಂಸ್ಥೆಗಳು ನೋಡಿಕೊಳ್ಳುತ್ತವೆ. ಸಿಎಂ ರಾಜಿನಾಮೆ ಕೇಳಲು ಇವರಿಗೆ ನೈತಿಕತೆ ಇಲ್ಲ ಎಂದರು.
ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಸೇರಿಕೊಂಡರೆ ಏನು ಉಪಯೋಗ ಇಲ್ಲ. ಕಾಂಗ್ರೆಸ್‌ನಿಂದ 20 ಸೀಟು ಗೆಲ್ಲುತ್ತೇವೆ ಎಂದರು.
ಬ್ರಹ್ಮಾವರ ಸಕ್ಕರೆ ಕಾರ್ಖನೆ ಹಗರಣ ಆರೋಪ ಸಮಗ್ರ ತನಿಖೆ
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣ ಆರೋಪಕ್ಕೆ ಸಂಬಂಧಿಸಿ ಸಮಗ್ರ ತನಿಖೆ ನಡೆಸಲಾಗುವುದು, ಈ ಬಗ್ಗೆ ದೂರು, ಮನವಿಗಳು ಬಂದಿದ್ದು, ಸಿಎಂ ಸಿದ್ಧರಾಮಯ್ಯ ಅವರು ಇದನ್ನು ಪರಿಶೀಲಿಸಲಿದ್ದಾರೆ. ಅನಂತರ ಮುಂದಿನ ಕ್ರಮಕ್ಕೆ ಸೂಚನೆ ನೀಡಲಿದ್ದಾರೆ. ಕಾರ್ಖಾನೆ ಪುನಶ್ಚೇತನ ಬಗ್ಗೆಯೂ ಸರಕಾರ ಪರಿಶೀಲನೆ ನಡೆಸಲಿದೆ. ಕಾರ್ಖಾನೆಯಲ್ಲಿ ಅವ್ಯವಹಾರ ನಡೆದಿದ್ದಲ್ಲಿ ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದರು.
ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆ ಆಗುತ್ತಿರುದು ಗಮನಕ್ಕೆ ಬಂದಿದೆ. ವಾರದ ಒಳಗೆ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೇವೆ. ಎಲ್ಲ ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿಭಾಯಿಸಲು ಸರಕಾರ ಸಿದ್ಧವಿದೆ. ರೈತರ ಹಿತವನ್ನು ಕಾಪಾಡುತ್ತೇವೆ. ಬೆಳೆ ಸಮೀಕ್ಷೆ ಶೇ.92 ರಷ್ಟು ಪೂರ್ಣಗೊಂಡಿದೆ. ಕೇಂದ್ರ ಬರ ಅಧ್ಯಯನ ತಂಡವು ವಾರದ ಒಳಗೆ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಿದೆ. ರಾಜ್ಯಕ್ಕೆ ಗರಿಷ್ಠ ಪರಿಹಾರ ಕೊಡಲು ಕೇಂದ್ರ ಸರಕಾರ ಕ್ರಮವಹಿಸಬೇಕು ಎಂದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.