Katapadi: ಕಾಂಗ್ರೆಸ್ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ
Team Udayavani, Aug 27, 2024, 9:48 PM IST
ಕಟಪಾಡಿ: ಹಿರಿಯ ಕಾಂಗ್ರೆಸ್ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾಘಾತದಿಂದ ಆ.27 ರಂದು (ಮಂಗಳವಾರ) ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿರುತ್ತಾರೆ.
ಮೃತರು ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿದ್ದರು.
ಕಟಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿ, ಕಟಪಾಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು, ಕಟಪಾಡಿ ಬೀಡು ಕಂಬಳ ಸಮಿತಿ, ಸ್ಥಳೀಯ ದೇವಸ್ಥಾನ, ದೈವಸ್ಥಾನಗಳಲ್ಲಿ ಜೀರ್ಣೋದ್ಧಾರ ಸಹಿತ ಸಮಿತಿಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.
ಸಾ ಮಿಲ್ ಉದ್ಯಮಿಯಾಗಿದ್ದರು. ಕೊಡುಗೈ ದಾನಿಯಾಗಿ ಗುರುತಿಸಿಕೊಂಡು ಜನಾನುರಾಗಿಯಾಗಿದ್ದರು.
ಸಂತಾಪ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಕೋಆರ್ಡಿನೇಟರ್ ನವೀನ್ಚಂದ್ರ ಜೆ. ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಕಟಪಾಡಿ ಗ್ರಾ.ಪಂ. ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ, ಜಿಲ್ಲಾ ಮತ್ತು ಕಾಪು ಬ್ಲಾಕ್ ಕಾಂಗ್ರೇಸ್ ವಿವಿಧ ಸ್ತರಗಳ ಪದಾಧಿಕಾರಿಗಳು, ಮುಖಂಡರು, ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.