ಬಿಜೆಪಿ ಆಪರೇಷನ್ ಕಮಲ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Team Udayavani, Jan 18, 2019, 12:30 AM IST
ಉಡುಪಿ: ರಾಜ್ಯದಲ್ಲಿ ಸುಲಲಿತವಾಗಿ ನಡೆಯುತ್ತಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಶಾಸಕರುಗಳಿಗೆ ಬಿಜೆಪಿ ಆಮಿಷ ಒಡ್ಡುತ್ತಿದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಗುರುವಾರ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರಾಜ್ಯದಲ್ಲಿ ಪ್ರಜಾಪ್ರಭುತ್ವದಂತೆ ಸಮ್ಮಿಶ್ರ ಸರಕಾರ ಸುಲಲಿತವಾಗಿ ನಡೆಯುತ್ತಿದೆ. ಆದರೆ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದ್ದು ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡುತ್ತಿದೆ. ಆದರೆ ಕಾಂಗ್ರೆಸ್ ಶಾಸಕರು ಇವರ ಆಮಿಷಕ್ಕೆ ಒಳಗಾಗರು. ಬಿಜೆಪಿ ಇದೇ ರೀತಿ ಮುಂದುವರಿದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದರು.
ಮಾಜಿ ಶಾಸಕ ಗೋಪಾಲ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ನಾಯಕರಾದ ಅಮೃತ್ ಶೆಣೈ, ನರಸಿಂಹಮೂರ್ತಿ, ಎಂ.ಎ.ಗಫೂರ್, ಸತೀಶ ಅಮೀನ್ ಪಡುಕರೆ, ಶಂಕರ್ ಕುಂದರ್, ಮಹಾಬಲ ಕುಂದರ್, ಭಾಸ್ಕರ ರಾವ್ ಕಿದಿಯೂರು, ವೆರೋನಿಕಾ ಕರ್ನೇಲಿಯೋ, ಚಂದ್ರಿಕಾ ಶೆಟ್ಟಿ, ಜ್ಯೋತಿ ಹೆಬ್ಟಾರ್, ಅಲೆವೂರು ಹರೀಶ ಕಿಣಿ, ಶಿವಾಜಿ ಸುವರ್ಣ, ಜನಾರ್ದನ ಭಂಡಾರ್‌ಕರ್, ಕೇಶವ ಕೋಟ್ಯಾನ್, ರೋಶನಿ ಒಲಿವೆರಾ, ಪ್ರಖ್ಯಾತ ಶೆಟ್ಟಿ, ಗಣೇಶ್ ನೆರ್ಗಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.