ಕಾರ್ಕಳ: ಶಾಸಕ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ, ಪೊಲೀಸರಿಂದ  ತಡೆ!

Team Udayavani, Jun 22, 2021, 12:59 PM IST

ಕಾರ್ಕಳ: ಶಾಸಕ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ, ಪೊಲೀಸರಿಂದ  ತಡೆ!

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ ವತಿಯಿಂದ  ಮಂಗಳವಾರ ಕಾರ್ಕಳ ಶಾಸಕರ ಖಾಸಗಿ ಕಚೇರಿ ವಿಕಾಸದ ಮುಂದೆ ಜನಾಗ್ರಹ ಪ್ರತಿಭಟನೆ ನಡೆಯಿತು.ಶಾಸಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಶಾಸಕರಿಗೆ ಮನವಿ ಮಾಡುವ ಕಾಂಗ್ರೆಸ್ ಪ್ರಯತ್ನಕ್ಕೆ ಪೊಲೀಸರು ತಡೆ ಒಡ್ಡಿದರು.

ಇದೆ ವೇಳೆ ಕಾಂಗ್ರೆಸ್ ಮುಖಂಡರು ಮತ್ತು ಪೊಲೀಸರ ಮದ್ಯೆ ಬಿಸಿ ಮಾತುಗಳು ನಡೆದವು.

ಶಾಸಕರ ವಿಕಾಸ ಕಚೇರಿ ಮುಂದೆ ಕಾಂಗ್ರೆಸ್ ನ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮನವಿ ನೀಡಲು ಕಚೇರಿ ಹತ್ತಿರಕ್ಕೆ ತೆರಳಲು ಯತ್ನಿಸಿದಾಗ ಪೊಲೀಸರು ತಡೆದರು.ವ್ರತ್ತನಿರೀಕ್ಷಕ ಸಂಪತ್ ಕುಮಾರ್ ಅವರು ವಿಕಾಸ ಕಚೇರಿ ಶಾಸಕರ ಖಾಸಗಿ ಕಚೇರಿ ಹೀಗಾಗಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಅವಕಾಶವಿಲ್ಲ.ಜತೆಗೆ ಕೊರೊನಾ ಸಂಕಷ್ಟ ಸಮಯದಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರತಿಭಟನ ನಿರತರಲ್ಲಿ ಮನವಿ ಮಾಡಿದರು.ಇದಕ್ಕೆ ಕಾಂಗ್ರೆಸ್ ಮುಖಂಡರಿಂದ ಪ್ರತಿರೋಧ ವ್ಯಕ್ತವಾಯಿತು.

ಇದನ್ನೂ ಓದಿ: ರಾಹುಲ್ ಗಾಂಧಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್: ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ

ಶಾಸಕರು ಇರುವ ಕಚೇರಿ ಮುಖ್ಯ ಜನರ ಸಮಸ್ಯೆಗಳು.ಸಂಕಷ್ಟ ಬೇಡಿಕೆ ಈಡೇರಿಸಲು ಶಾಸಕರು ಕ್ರಮವಹಿಸಬೇಕು ಇದು ಜನಾಗ್ರಹ. ಶಾಸಕರು ಕಚೇರಿಯೊಳಗೆ ಇರುವುದರಿಂದ ನಮಗೆ ಅವಕಾಶ ಮಾಡಿಕೊಡಬೇಕು.ಕೋವಿಡ್ ನಿಯಮ ಉಲ್ಲಂಘಿಸಿ ಬಿಳಿಬೆಂಡೆ ವಿತರಣೆ ಮಾಡಲು ಬಿಜೆಪಿಯವರಿಗೆ ಅವಕಾಶ ಕಲ್ಪಿಸುವುದಾದರೆ ನಮಗ್ಯಾಕೆ  ಪ್ರತಿಭಟನೆ, ಜನ ಸೇರಲು ನಿರಾಕರಿಸುತ್ತೀರಿ ಎಂದು ಕಾಂಗ್ರೆಸ್ ಮುಖಂಡರಾದ ಮಂಜುನಾಥ ಪೂಜಾರಿ, ನೀರೆ ಕ್ರಷ್ಣ ಶೆಟ್ಟಿ, ಶುಭದ ರಾವ್, ಬಿಪಿನ್ ಚಂದ್ರಪಾಲ್ ನಕ್ರೆ ಮೊದಲಾದವರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕೇಂದ್ರ, ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಶಾಸಕರ ವಿಕಾಸ ಕಚೇರಿ ಮುಂಭಾಗದ 25 ಮೀ.ದೂರದಲ್ಲಿ ಪ್ರತಿಭಟನೆ ಸಭೆ ನಡೆಸಿ ಜನರ ಬೇಡಿಕೆಗಳಿಗೆ ಆಗ್ರಹಿಸಿದರು.

ಕಾಂಗ್ರೆಸ್ ನ ಶಾಸಕರ ಕಚೇರಿ ಮುಂಭಾಗದ ಪ್ರತಿಭಟನೆ ಹಿನ್ನಲೆಯಲ್ಲಿ ಮೀಸಲು ಪೊಲೀಸರ ಸಹಿತ ಬಿಗು‌ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ನೀತಿ ಆಡಳಿತ ವೈಫಲ್ಯ ಮತ್ತು ಲಾಕ್ ಡೌನ್ ನಿಂದ ಸಂತ್ರಸ್ತರಾದ ಕಾರ್ಮಿಕ ಶ್ರಮಿಕ ವರ್ಗದವರಿಗೆಂದು ಘೋಷಿಸಿರುವ ಪ್ಯಾಕೇಜ್ ಪಡೆಯಲು ವಿಧಿಸಲಾಗಿರುವ ಕಠಿಣ ಶರತ್ತುಗಳ ವಿರುದ್ಧ ಕಾಂಗ್ರೆಸ್  ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಹೆಚ್ವಿನ ಪ್ರಮಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.