60 ಬಡ ಕುಟುಂಬಗಳಿಗೆ ದಾನಿಗಳಿಂದ ಮನೆ ನಿರ್ಮಾಣ

Team Udayavani, Oct 17, 2017, 11:12 AM IST

17-STATE-21.jpg

ಉಡುಪಿ: ಉಡುಪಿ ವಿಧಾನ ಸಭಾ ವ್ಯಾಪ್ತಿಯ ದೊಡ್ಡ ದೊಡ್ಡ ಬಿಲ್ಡರ್‌ಗಳು, ದಾನಿಗಳು ಸ್ವಇಚ್ಛೆಯಿಂದ ಸುಮಾರು 60 ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಟ್ಟಿದ್ದು, ಇದೊಂದು ಉತ್ತಮ ಕಾರ್ಯ. ಇದರಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಇಲ್ಲ. ದಾನಿಗಳೇ ಮುಂದೆ ಬಂದು ಕಟ್ಟಿಸಿ ಕೊಟ್ಟಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹರ್ಷ ವ್ಯಕ್ತಪಡಿಸಿದರು.

ಅವರು ಸೋಮವಾರ ಕಿನ್ನಿ ಮೂಲ್ಕಿಯ ಗೋವಿಂದ ಕಲ್ಯಾಣ ಮಂಟಪದಲ್ಲಿ ನಡೆದ ನಗರಸಭಾ ವ್ಯಾಪ್ತಿಯ ಕಿನ್ನಿಮೂಲ್ಕಿ ವಾರ್ಡಿನ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. 3.50 ಕೋ. ರೂ. ಮಂಜೂರು ಕಿನ್ನಿಮೂಲ್ಕಿ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ 3.30 ಲ.ರೂ. ವ್ಯಯಿಸಲಾಗಿದ್ದು, ಮುಖ್ಯ ಮಂತ್ರಿಗಳ ವಿಶೇಷ ಅನುದಾನದಡಿ ಮಂಜೂರಾದ 10 ಕೋ.ರೂ.ಗಳಲ್ಲಿ 48 ಲ.ರೂ.ಗಳನ್ನು ಕಿನ್ನಿಮೂಲ್ಕಿ ವಾರ್ಡಿಗೆ ಬಳಸಲಾಗುವುದು ಎಂದ ಸಚಿವರು, ಬ್ರಹ್ಮಗಿರಿಯ ಅಗ್ನಿ ಶಾಮಕ ಕಚೇರಿ ಇರುವ ರಸ್ತೆಯಿಂ ಕಿನ್ನಿಮೂಲ್ಕಿ ವರೆಗೆ ದ್ವಿಪಥ ರಸ್ತೆ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನವೆಂಬರ್‌ನಲ್ಲಿ ಲೋಕಾರ್ಪಣೆ ಉದ್ಯಮಿ ಬಿ.ಆರ್‌. ಶೆಟ್ಟಿ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ 200 ಬೆಡ್‌ಗಳಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಂಪೂರ್ಣ ಉಚಿತವಾಗಿದ್ದು, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ. ಬನ್ನಂಜೆಯಲ್ಲಿ ನಿರ್ಮಾಣವಾಗಲಿರುವ ಜಿಲ್ಲಾ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಶೀಘ್ರ ಟೆಂಡರ್‌ ಕರೆಯ ಲಾಗುವುದು ಎಂದು ಸಚಿವರು ಹೇಳಿದರು.

ವಿವಿಧ ಸವಲತ್ತು ವಿತರಣೆ
ಮನೆ ನಿವೇಶನ ಹಕ್ಕುಪತ್ರ, ಸಹಾಯಧನ, ವಿಧವಾ ವೇತನ, ಪಿಂಚಣಿ, ಸಂಧ್ಯಾ ಸುರಕ್ಷಾ ಯೋಜನೆ, ಮನಸ್ವಿನಿ ಯೋಜನೆ ಸಹಿತ ವಿವಿಧ ಸವಲತ್ತು ವಿತರಿಸಲಾಯಿತು. ಸಚಿ ವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಸೂಚಿಸಿದರು. ಈ ಸಂದರ್ಭ ಉಡುಪಿ ನಗರಾಭಿ ವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹ ಮೂರ್ತಿ, ಆಯುಕ್ತ ಜನಾರ್ದನ, ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ
ಬನ್ನಂಜೆ, ಸದಸ್ಯರಾದ ಅಮೃತಾ ಕೃಷ್ಣ ಮೂರ್ತಿ, ಲತಾ ಆನಂದ ಶೇರಿಗಾರ್‌, ಜನಾರ್ದನ ಭಂಡಾರ್ಕರ್‌, ನಾರಾಯಣ
ಕುಂದರ್‌, ಗಣೇಶ್‌ ನೆರ್ಗಿ, ಹಸನ್‌ ಅಜ್ಜರಕಾಡು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕೆರೆ, ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ಡಿವೈಎಸ್‌ಪಿ ಕುಮಾರಸ್ವಾಮಿ, ಸರ್ಕಲ್‌ ಇನ್ಸ್‌ಪೆಕ್ಟರ್‌ ನವೀನ್‌ ಚಂದ್ರ ಜೋಗಿ ಉಪಸ್ಥಿತರಿದ್ದರು. ನಗರಸಭೆ ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿದರು.

1,743 ಅರ್ಜಿ ಸ್ವೀಕೃತ
ಉಡುಪಿ ನಗರಸಭೆಯ 35ನೇ ವಾರ್ಡಿನ ಜನಸಂಪರ್ಕ ಸಭೆಯ ಜತೆಗೆ ಕೊನೆಯ ಸಭೆಯೂ ಆಗಿದೆ. ಪ್ರಮೋದ್‌ ಮಧ್ವರಾಜ್‌ ಅವರು ಶಾಸಕರಾಗಿರುವ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ 65ನೇ ಗ್ರಾಮ ಗಳ ಜನಸಂಪರ್ಕ ಸಭೆಯಾಗಿದ್ದು, ಉಪ್ಪೂರು ಗ್ರಾ.ಪಂ.ನಲ್ಲಿ ಮಾತ್ರ ಬಾಕಿಯಿದೆ. ವಿಧಾನಸಭಾ ವ್ಯಾಪ್ತಿ ಯಲ್ಲಿ ಈವರೆಗೆ 1,743 ಅರ್ಜಿ ಸ್ವೀಕೃತಿಯಾದರೆ, ನಗರಸಭಾ ವ್ಯಾಪ್ತಿ ಯಲ್ಲಿ 1,422 ಅರ್ಜಿ ಸ್ವೀಕೃತ ಗೊಂಡಿದೆ. 

ಟಾಪ್ ನ್ಯೂಸ್

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.