ಕೃಷಿಯಿಂದಲೇ ದೇಶದ ಪ್ರಗತಿ ಸಾಧ್ಯ : ಸುಧಾಕರ ನಾಯಕ್
Team Udayavani, Aug 2, 2017, 7:40 AM IST
ಉಡುಪಿ: ಕೃಷಿಯಿಂದಲೇ ದೇಶದ ಪ್ರಗತಿ ಸಾಧ್ಯ. ಆ ಕಾರಣದಿಂದ ಮಕ್ಕಳಲ್ಲಿ ಕೃಷಿ ಬಗ್ಗೆ ಅರಿವು ಮೂಡಿಸಲು ವಿಜಯ ಬ್ಯಾಂಕ್ ವತಿಯಿಂದ ವಿವಿಧ ಶಾಲೆಗಳಲ್ಲಿ ಕೃಷಿಕ ಸಂಘಗಳನ್ನು ಪ್ರಾರಂಭಿಸಲಾಗಿದೆ ಎಂದು ಬ್ಯಾಂಕಿನ ಉಪ ಮಹಾ ಪ್ರಬಂಧಕ ಸುಧಾಕರ ನಾಯಕ್ ಹೇಳಿದರು.
ವಿಜಯ ಬ್ಯಾಂಕಿನ ಸ್ವಯಂಸೇವಾ ಸಂಸ್ಥೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಭಾರತೀಯ ವಿಕಾಸ ಟ್ರಸ್ಟ್ (ಬಿವಿಟಿ) ಮಣಿಪಾಲ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ತಮ್ಮ ಪ್ರಾಂತೀಯ ಕಚೇರಿಯಲ್ಲಿ ನಡೆದ ವಿವಿಧ ಶಾಲೆಯ ಅಧ್ಯಾಪಕರಿಗೆ ವಿದ್ಯಾರ್ಥಿ ಕೃಷಿ ಸಂಘಗಳ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಇಲಾಖೆಯ ರಾಧಾಕೃಷ್ಣ ಭಟ್ ಮಾತನಾಡಿ ದೇಶದ ಶೇ. 70 ರಷ್ಟು ಭಾಗ ಗ್ರಾಮೀಣ ಪ್ರದೇಶವಾಗಿದ್ದು, ಕೃಷಿಯನ್ನೇ ಅವಲಂಬಿಸಿರುವಾಗ ಮಕ್ಕಳಲ್ಲಿ ಕೃಷಿ ಅರಿವು ಮೂಡಿಸುವುದು ಅತ್ಯಂತ ಆವಶ್ಯಕವಾಗಿದೆ ಎಂದರು.
ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೇಮನಾಥ ಆಳ್ವ, ಬಿವಿಟಿಯ ಹಿರಿಯ ಕೃಷಿ ಸಲಹೆಗಾರ ಎಚ್. ಅನಂತ ಪ್ರಭು, ವಿಜಯ ಬ್ಯಾಂಕಿನ ಸಹಾಯಕ ಮಹಾಪ್ರಬಂಧಕ ವಸಂತ ರಾಜನ್ ಉಪಸ್ಥಿತರಿದ್ದರು. ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಹೆಗಡೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.