ಉಡುಪಿ: ಹಣದ ವಿಚಾರಕ್ಕೆ ಸ್ನೇಹಿತನ ಕೊಲೆ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
Team Udayavani, Dec 21, 2022, 6:45 AM IST
ಉಡುಪಿ : ಐದು ವರ್ಷಗಳ ಹಿಂದೆ ಹಣದ ವಿಷಯದಲ್ಲಿ ಕ್ಷುಲ್ಲಕ ಕಾರಣದಿಂದ ಸ್ನೇಹಿತನನ್ನು ಕೊಲೆಗೈದ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ., ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ತೀರ್ಪು ನೀಡಿದ್ದಾರೆ. ಬ್ರಹ್ಮಾವರ ತಾಲೂಕಿನ ಆರೂರು ನಿವಾಸಿ ಪ್ರಶಾಂತ್ ಅಲಿಯಾಸ್ ಪಚ್ಚು ಅಲಿಯಾಸ್ ಮಣಿ (31) ಶಿಕ್ಷೆಗೊಳಗಾದ ಆರೋಪಿ.
ಘಟನೆ ವಿವರ: 2017ರ ಮಾ.1 ರಂದು ಬೆಳಗ್ಗೆ 9.30ಕ್ಕೆ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಪೇತ್ರಿಯಲ್ಲಿ ಆರೋಪಿ ಪ್ರಶಾಂತ್ ಖರ್ಚಿಗಾಗಿ ಹಣವನ್ನು ಕೇಳಿದಾಗ ಪ್ರಕಾಶ್ ನಾಯ್ಕ (38) ನಿರಾಕರಿಸಿದ್ದರು. ಈ ವೇಳೆ ಉದ್ರಿಕ್ತಗೊಂಡಿದ್ದ ಪ್ರಶಾಂತ್ ಚೂರಿಯಿಂದ ಇರಿದು ಪ್ರಕಾಶ್ ಅವರನ್ನು ಕೊಲೆ ಮಾಡಿದ್ದನು. ಪ್ರಕಾಶ್ ನಾಯ್ಕ ಶಿವಮೊಗ್ಗದ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಆಗಾಗ್ಗೆ ಊರಿಗೆ ಬಂದು ಹೋಗುತ್ತಿದ್ದರು. ಪ್ರಶಾಂತ್ ಊರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಇಬ್ಬರು ಹಲವು ವರ್ಷಗಳಿಂದ ಗೆಳೆಯರಾಗಿದ್ದರು.
ಪ್ರಕಾಶ್ ನಾಯ್ಕ ಅವರ ಪತ್ನಿ ಬ್ರಹ್ಮಾವರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಅಂದಿನ ಡಿವೈಎಸ್ಪಿ ಕುಮಾರಸ್ವಾಮಿ ತನಿಖೆ ನಡೆಸಿ 2017 ಮೇ27ರಂದು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣಲ್ಲಿ ಒಟ್ಟು 34 ಸಾಕ್ಷಿಗಳ ಪೈಕಿ, 2 ಪ್ರತ್ಯಕ್ಷ ಸಾಕ್ಷಿಗಳನ್ನು ಒಳಗೊಂಡಂತೆ ಒಟ್ಟು 12 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಪ್ರಾಸಿಕ್ಯೂಷನ್ ಪರ ಹಿರಿಯ ಸರಕಾರಿ ಅಭಿಯೋಜಕಿ ಶಾಂತಿಬಾಯಿ ವಾದ ಮಂಡಿಸಿದ್ದರು. ಅಪರಾಧಿಗೆ ಕೊಲೆ ಪ್ರಕರಣದ ಅಡಿಯಲ್ಲಿ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ ಮತ್ತು ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ 3 ವರ್ಷ ಕಾರಾಗೃಹ, 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಪೋಕ್ಸೋ ಪ್ರಕರಣದ ಆರೋಪಿ
ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿ ಪ್ರಶಾಂತ್ ಈ ಹಿಂದೆ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದು, ಈ ಪ್ರಕರಣದಲ್ಲಿ ಜಾಮೀನಿನಲ್ಲಿ ಹೊರಗಡೆ ಇದ್ದಾಗ ಕೊಲೆ ಮಾಡಿದ್ದನು. ಅನಂತರ ಆರೋಪಿಗೆ ಪೋಕ್ಸೋ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. 2018ರ ಎಪ್ರಿಲ್ ತಿಂಗಳಲ್ಲಿ ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಪಬ್ಲಿಕ್ ಪ್ರಾಸಿಕ್ಯೂಟರ್ ಗರಿಷ್ಠ ಶಿಕ್ಷೆಗೆ ಮನವಿ ಮಾಡಿದ ಸಂದರ್ಭ ಆರೋಪಿ ನ್ಯಾಯಾಲಯದಲ್ಲಿ ತನ್ನ ಬೂಟನ್ನು ಎಸೆದು ಕಾನೂನು ವಿರೋಧಿ ಚಟುವಟಿಕೆ ನಡೆಸಿದ್ದನು. ಈ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಅನಂತರ ಕೊಲೆ ಪ್ರಕರಣದ ಎಲ್ಲ ವಿಚಾರಣೆಯನ್ನು ವೀಡಿಯೋ ಕರೆ ಮೂಲಕ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.