ಉಡುಪಿಯಲ್ಲಿ ಒಂದು ಕೋವಿಡ್ 19 ಪಾಸಿಟಿವ್ ಪ್ರಕರಣ ವರದಿ
Team Udayavani, Mar 25, 2020, 2:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಉಡುಪಿ: ದುಬಾಯಿಯಿಂದ ಬಂದಿದ್ದ ಉಡುಪಿ ಜಿಲ್ಲೆಯ 34 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ 19 ವೈರಸ್ ಸೋಂಕು ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಇದು ಜಿಲ್ಲೆಯಲ್ಲಿ ಇದುವರೆಗೆ ಪತ್ತೆಯಾಗಿರುವ ಮೊದಲ ಕೋವಿಡ್ 19 ಪಾಸಿಟಿವ್ ಪ್ರಕರಣವಾಗಿದೆ.
ಮಾರ್ಚ್ 18 ರಂದು ದುಬಾಯಿಯಿಂದ ಬಂದಿದ್ದ ಈ ವ್ಯಕ್ತಿಯಲ್ಲಿ ಜ್ವರ ಕಾಣಿಸಿಕೊಂಡ ಕಾರಣ ಮಾರ್ಚ್ 23ರಂದು ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಈ ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.
ಇದೀಗ ಈ ವ್ಯಕ್ತಿಯ ಪ್ರಾಥಮಿಕ ಪರೀಕ್ಷಾ ವರದಿ ಕೈಸೇರಿದ್ದು ಇದರಲ್ಲಿ ಸೋಂಕು ಪಾಸಿಟಿವ್ ಎಂದು ತಿಳಿದುಬಂದಿದೆ ಎಂದು ಜಿಲ್ಲಾ ವೈದ್ಯಕೀಯ ಅಧೀಕ್ಷಕರಾಗಿರುವ ಡಾ. ಸುಧೀಂದ್ರ ಚಂದ್ರಸೂಡ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.