ಕೋವಿಡ್ 19 ಸೈಡ್ ಎಫೆಕ್ಟ್: ಮದ್ಯ ಸಿಗುತ್ತಿಲ್ಲವೆಂಬ ಕೊರಗಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ
Team Udayavani, Mar 27, 2020, 7:14 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಾರ್ಕಳ: ಕೋವಿಡ್ 19 ವೈರಸ್ ಮಹಾಮಾರಿಯ ಉಪಟಳದಿಂದ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಸ್ಥಿತಿ ಘೋಷಣೆಯಾಗಿರುವುದರಿಂದ ಅಗತ್ಯ ವಸ್ತುಗಳ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲಾ ಮಳಿಗೆಗಳು ಬಂದ್ ಆಗಿವೆ.
ಅದರಂತೆಯೇ ಮದ್ಯಮಾರಾಟದ ಅಂಗಡಿಗಳೂ ಇದೀಗ ಬಾಗಲು ಎಳೆದುಕೊಂಡಿವೆ. ಇದೇ ಚಿಂತೆಯಲ್ಲಿ ಕಳೆದ ಒಂದು ವಾರದಿಂದ ಮದ್ಯ ದೊರೆಯುತ್ತಿಲ್ಲ ಎಂದು ಮನನೊಂದ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 26ರಂದು ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳ ತಾಲೂಕು ದುರ್ಗ ಗ್ರಾಮದ ತೆಳ್ಳಾರು ಬೆದ್ರಪಲ್ಕೆ ದರ್ಖಾಸು ನಿವಾಸಿ ನಾಗೇಶ್ (37) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.