“ಕೋವಿಡ್‌ ತಡೆಗೆ ಗ್ರಾ.ಪಂ. ಕಾರ್ಯಪಡೆಗಳು ಸದಾ ಸನ್ನದ್ಧ’


Team Udayavani, May 21, 2021, 5:20 AM IST

“ಕೋವಿಡ್‌ ತಡೆಗೆ ಗ್ರಾ.ಪಂ. ಕಾರ್ಯಪಡೆಗಳು ಸದಾ ಸನ್ನದ್ಧ’

ಉಡುಪಿ: ಜಿಲ್ಲೆಯಲ್ಲಿ ಸರಕಾರದ ನಿರ್ದೇಶನದಂತೆ ಕೋವಿಡ್‌ -19ರ ಪ್ರಕರಣಗಳನ್ನು ತಡೆಗಟ್ಟುವುದು, ಪರೀಕ್ಷೆ, ಕ್ವಾರಂಟೈನ್‌, ನಿಯಂತ್ರಣ, ಚಿಕಿತ್ಸೆ ಹಾಗೂ ಲಸಿಕೆ ವಿತ ರ ಣೆ ಯ ನ್ನು ಪರಿಣಾಮ ಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಗ್ರಾ.ಪಂ.ವಾರು ಕೋವಿಡ್‌ ಕಾರ್ಯಪಡೆಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ತಿಳಿಸಿದ್ದಾರೆ.

ಪ್ರಸ್ತುತ ಹೋಮ್‌ ಐಸೊಲೇಶನ್‌ನಲ್ಲಿರುವ ವ್ಯಕ್ತಿಗಳ ಮನೆಗಳನ್ನು ಭೇಟಿ ಮಾಡಿ, ಹೋಮ್‌ ಐಸೊಲೇಶನ್‌ ಕಡ್ಡಾಯವಾಗಿ ಪಾಲಿಸುತ್ತಿರುವ ಬಗ್ಗೆ, ಪ್ರತ್ಯೇಕ ಕೊಠಡಿ, ಪ್ರತ್ಯೇಕ ಶೌಚಾಲಯ ಹೊಂದಿರುವ ಬಗ್ಗೆ, ಆರೋಗ್ಯದ ಏರುಪೇರುಗಳ ಬಗ್ಗೆ, ಅಗತ್ಯವಿದ್ದಲ್ಲಿ ಸ್ಥಳೀಯವಾಗಿ ವೈದ್ಯಾಧಿಕಾರಿಗಳ ಮೂಲಕ ಔಷಧೋಪಚಾರ ನೀಡುವ, ತಾಲೂಕು ಕೋವಿಡ್‌ ಕೇರ್‌ ಸೆಂಟರ್‌ಗೆ ಅಥವಾ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ವೈದ್ಯರ ಸಲಹೆ ಪಾಲಿಸಿ :

ಈ ಕ್ರಮಗಳನ್ನು ಹಾಗೂ ಕೋವಿಡ್‌ ನಿಯಂತ್ರಣ ವನ್ನು ಪರಿಣಾಮಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಸರಕಾರದ ನಿರ್ದೇಶನದಂತೆ ಪ್ರತ್ಯೇಕ ಕೊಠಡಿಯನ್ನು ಹೊಂದಿಲ್ಲದಿರುವ ಹಾಗೂ ಪ್ರತ್ಯೇಕ ಶೌಚಾಲಯ ಹೊಂದದೇ ಇರುವ ವ್ಯಕ್ತಿಗಳನ್ನು ಕಾರ್ಯಪಡೆಯ ಸಹಕಾರದಲ್ಲಿ ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ಗೆ ಸ್ಥಳಾಂತರಗೊಳ್ಳಲು ಕೋರಲಾಗಿದೆ. ಸೋಂಕಿತರು ಚಿಕಿತ್ಸಾ ಶಿಷ್ಟಾಚಾರದಂತೆ ನಿಗದಿತ ದಿನಗಳವರೆಗೆ ಈ ಕೇಂದ್ರಗಳಲ್ಲಿದ್ದು, ಸೋಂಕಿನಿಂದ ಗುಣಮುಖರಾದ ಅನಂತರ ವೈದ್ಯರ ಸಲಹೆಯಂತೆ ಪುನಃ ತಮ್ಮ ಮನೆಗಳಿಗೆ ತೆರಳಬಹುದಾಗಿದೆ.

ಕರಪತ್ರ ಮುದ್ರಣ :

ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಕಾರ್ಯ ನಿರ್ವ ಹಣಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿ ಗಳು, ವೈದ್ಯಾಧಿಕಾರಿಗಳು, ಗ್ರಾ.ಪಂ. ಕಾರ್ಯಪಡೆಗಳಿಗೆ ಸೂಚಿಸಲಾಗಿದೆ. ಹೋಂ ಐಸೊಲೇಶನ್‌ನಲ್ಲಿ ಮುಂದು ವರಿಯುವ ವ್ಯಕ್ತಿಗಳು ಪಾಲಿಸಬೇಕಾದ ಕ್ರಮಗಳ ಬಗ್ಗೆ ಗ್ರಾ.ಪಂ.ವಾರು ಕರಪತ್ರಗಳನ್ನು ಮುದ್ರಿಸಲಾಗುತ್ತಿದ್ದು, ಹೋಂ ಐಸೊಲೇಶನ್‌ನಲ್ಲಿರುವ ವ್ಯಕ್ತಿಗಳಿಗೆ ಔಷಧೋ ಪಚಾರದ ಕಿಟ್‌ನೊಂದಿಗೆ ವಿತರಿಸಲಾಗುತ್ತಿದೆ.

ಸೇವೆಯ ಸದುಪಯೋಗವಾಗಲಿ :

ಜಿಲ್ಲೆಯಲ್ಲಿ ಹೋಮ್‌ ಐಸೊಲೇಶನ್‌ನಲ್ಲಿರುವ ವರಿಗಾಗಿ ಟೆಲಿ-ಸಮಾಲೋಚನೆಯ ಮೂಲಕ ಉಚಿತ ಸಲಹೆ ನೀಡಲು ಸ್ವಯಂಪ್ರೇರಿತರಾಗಿ ಭಾರತೀಯ ವೈದ್ಯಕೀಯ ಸಂಘ ಮತ್ತು ಇತರ ಕ್ಷೇತ್ರಗಳ ತಜ್ಞರು ಸಮ್ಮತಿಸಿ ಮುಂದೆ ಬಂದಿದ್ದಾರೆ. ಅವರ ದೂರವಾಣಿ ಸಂಖ್ಯೆಗಳನ್ನು ಪ್ರಚುರಪಡಿಸಲಾಗಿದೆ. ಸಾರ್ವಜನಿಕರು ತಜ್ಞರಿಂದ ನೀಡಲಾಗುವ ಸೇವೆಯ ಸದುಪಯೋಗ ವನ್ನು ಪಡೆಯಲು ಕೋರಲಾಗಿದೆ.

ಉಚಿತ ಸಲಹೆ :

ಟೆಲಿ-ಸಮಾಲೋಚನೆಯ ಮೂಲಕ ಉಚಿತ ಸಲಹೆ ನೀಡಲು ಸ್ವಯಂಪ್ರೇರಿತರಾಗಿ ತಜ್ಞ ವೈದ್ಯರು ಸಿದ್ಧರಾಗಿದ್ದಲ್ಲಿ ಜಿಲ್ಲಾ ಎನ್‌ಜಿಒ ಸಮನ್ವಯ ಕೇಂದ್ರ ದೂರವಾಣಿ ಸಂಖ್ಯೆ 0820 2574936ಯನ್ನು ಸಂಪರ್ಕಿಸಲು ಕೋರಿದೆ.

ಸೇವೆಯಲ್ಲಿ ತೊಡಗಿಸಿಕೊಂಡವರು ಕೋವಿಡ್‌ ಕಾರ್ಯಪಡೆಗಳಿಗೆ ಸಹಕಾರ ನೀಡಲು ವಿವಿಧ ಸಂಘ ಸಂಸ್ಥೆಗಳು, ಎನ್‌ಜಿಒಗಳಿಗೆ ಕೋರಲಾಗಿದ್ದು, ಈಗಾಗಲೇ ಜಿಲ್ಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು, ಎನ್‌ಜಿಒಗಳು ದಿನಸಿ, ಆಹಾರ, ಅಗತ್ಯ ಉಪಕರಣಗಳನ್ನು ಒದಗಿಸುವ ಮೂಲಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕೋವಿಡ್‌ ಕಾರ್ಯಪಡೆ :

ಜಿಲ್ಲಾ ಮಟ್ಟದಲ್ಲಿ ಜಿ.ಪಂ.ಕಚೇರಿಯಲ್ಲಿ ಕೋವಿಡ್‌ ಕಾರ್ಯಪಡೆ ಹಾಗೂ ಎನ್‌ಜಿಒ ಸಮನ್ವಯ ಕೇಂದ್ರ ವನ್ನು ಸ್ಥಾಪಿಸಲಾಗಿದ್ದು, ಸಂಘ ಸಂಸ್ಥೆಗಳ ಸಹಭಾಗಿತ್ವದ ಬಗ್ಗೆ ದೂರವಾಣಿ ಸಂ: 08202574936ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಕೋವಿಡ್‌ ಕಾರ್ಯಪಡೆಗಳ, ಸಹಾಯವಾಣಿಗಳ ಸೌಲಭ್ಯಗಳನ್ನು ಬಳಸಿಕೊಂಡು ಕೋವಿಡ್‌ ಸಾಂಕ್ರಾ ಮಿಕ ರೋಗವು ಹರಡದಂತೆ ಸಾರ್ವಜನಿಕರು ಸಹಕರಿಸುವಂತೆ ಅವರು ತಿಳಿಸಿದ್ದಾರೆ.

ಸಹಾಯವಾಣಿ ಸಂಪರ್ಕಿಸಿ :

ಪ್ರತಿಯೊಂದು ಗ್ರಾ.ಪಂ.ನಲ್ಲಿ ಸಹಾಯ ವಾಣಿಯನ್ನು ಸ್ಥಾಪಿಸಲಾಗಿದ್ದು, ಕಾರ್ಯ ಪಡೆಗಳ ಮೂಲಕ ಬೇಕಾದ ಸಹಾಯಕ್ಕಾಗಿ ಆಯಾ ಗ್ರಾ.ಪಂ. ಸಹಾಯವಾಣಿಗೆ ಕರೆ ಮಾಡಬಹುದಾಗಿದ್ದು, ಜಿಲ್ಲಾ ಮಟ್ಟದಲ್ಲಿ ಸಮನ್ವಯಕ್ಕಾಗಿ, ಹೆಚ್ಚಿನ ಮಾಹಿತಿ ಹಾಗೂ ಸಹಾಯಕ್ಕಾಗಿ ಜಿ.ಪಂ. ಕಚೇರಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ( ಸಹಾಯವಾಣಿ ಸಂಖ್ಯೆ : 0820 2574937)

ಕಾರ್ಯಪಡೆ ಸಂಪರ್ಕ ಸಂಖ್ಯೆ ;

ಹೋಂ ಐಸೊಲೇಶನ್‌ನಲ್ಲಿರುವವರು ಮನೆಯಲ್ಲಿ ಪ್ರತ್ಯೇಕವಾಗಿರಲು ಅಗತ್ಯ ವ್ಯವಸ್ಥೆಗಳಿಲ್ಲದಿದ್ದಲ್ಲಿ ತಾಲೂಕು ಕೋವಿಡ್‌ಕೇರ್‌ ಸೆಂಟರ್‌ಗೆ ಸ್ಥಳಾಂತರಗೊಳ್ಳಲು, ಸ್ಥಳೀಯ ಗ್ರಾ.ಪಂ.ಕಾರ್ಯಪಡೆಯನ್ನು ಆಥವಾ ಈ ಕೆಳಗೆ ಕಾಣಿಸಿದ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಬೈಂದೂರು, ಕುಂದಾಪುರ ತಾಲೂಕು ವ್ಯಾಪ್ತಿ: 7795543611, ಉಡುಪಿ, ಬ್ರಹ್ಮಾವರ, ಕಾಪು ತಾಲೂಕು ವ್ಯಾಪ್ತಿ: 7204789104, ಕಾರ್ಕಳ, ಹೆಬ್ರಿ ತಾಲೂಕು ವ್ಯಾಪ್ತಿ ಸಂಖ್ಯೆ : 9141001239.

ಟಾಪ್ ನ್ಯೂಸ್

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.